47 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದ ಆರ್‌ಐಟಿಇಎಸ್
ಬೆಂಗಳೂರು, ಸೆಪ್ಟೆಂಬರ್ 24 : ರೈಲ್ ಇಂಡಿಯಾ ತಾಂತ್ರಿಕ ಮತ್ತು ಆರ್ಥಿಕ ಸೇವಾ ಸಂಸ್ಥೆ 47 ಹುದ್ದೆಗಳ ಭರ್ತಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಆನ್‌ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಲು 10-10-2019 ಕೊನೆಯ ದಿನವಾಗಿದೆ.
ಆರ್‌ಐಟಿಇಎಸ್ ಸೈಟ್ ಇನ್ಸ್‌ಪೆಕ್ಟರ್ ಮತ್ತು ಸಿಎಡಿ ಆಪರೇಟರ್ ಹುದ್ದೆಗಳನ್ನು ಭರ್ತಿ ಮಾಡುತ್ತಿದೆ. ಆಯ್ಕೆಯಾದ ಅಭ್ಯರ್ಥಿಗಳು ದೇಶದ ಯಾವುದೇ ನಗರದಲ್ಲಿ ಕೆಲಸ ಮಾಡಬೇಕಿದೆ.
ಸೈಟ್ ಇನ್ಸ್‌ಪೆಕ್ಟರ್ (ಸಿವಿಲ್/ಇ&ಎಂ) ಹುದ್ದೆಗೆ ಅರ್ಜಿ ಸಲ್ಲಿಸುವವರು ಡಿಪ್ಲೊಮಾ ಇನ್ ಸಿವಿಲ್/ಎಲೆಕ್ಟ್ರಿಕಲ್/ಎಲೆಕ್ಟ್ರಿಕಲ್&ಎಲೆಕ್ಟ್ರಾನಿಕ್ಸ್/ಮ್ಯಾಕಾನಿಕಲ್/ಪ್ರೊಡಕ್ಷನ್/ಇಂಡಸ್ಟ್ರಿಯಲ್/ಆಟೋಮೊಬೈಲ್ ಪದವಿ ಮತ್ತು 4 ವರ್ಷದ ಅನುಭವ ಹೊಂದಿರಬೇಕು.

ಸಿಎಡಿ ಆಪರೇಟರ್ ಹುದ್ದೆಗೆ ಅರ್ಜಿ ಸಲ್ಲಿಸುವವರು ಡಿಪ್ಲೊಮಾ ಇನ್ ಇಂಜಿನಿಯರಿಂಗ್ ಅನ್ನು ಮಾನ್ಯತೆ ಪಡೆದ ಶಿಕ್ಷಣ ಸಂಸ್ಥೆಯಿಂದ ಮತ್ತು AUTOCAD ನಲ್ಲಿ ಮೂರು ತಿಂಗಳ ತರಬೇತಿಯನ್ನು ಪೂರ್ಣಗೊಳಿಸಿರಬೇಕು.
ಅರ್ಜಿ ಸಲ್ಲಿಸುವವರಿಗೆ 40 ವರ್ಷದ ವಯೋಮಿತಿಯನ್ನು ನಿಗದಿ ಮಾಡಲಾಗಿದೆ. ಅರ್ಜಿಗಳನ್ನು ಸಲ್ಲಿಸಲು 10/10/2019 ಕೊನೆಯ ದಿನವಾಗಿದೆ.
ಹೆಚ್ಚಿನ ಮಾಹಿತಿಗಾಗಿ ಇಲ್ಲಿ ಕ್ಲಿಕ್ ಮಾಡಿ












Click it and Unblock the Notifications