ಪದವೀಧರರು ಆರ್‌ಪಿಎಫ್‌ನಲ್ಲಿ ಸಬ್ ಇನ್ಸ್‌ಪೆಕ್ಟರ್ ಹುದ್ದೆಗೆ ಅರ್ಜಿ ಹಾಕಿ

ಬೆಂಗಳೂರು, ಮೇ 28 : ಆರ್‌ಪಿಎಫ್ 1120 ಸಬ್ ಇನ್ಸ್‌ಪೆಕ್ಟರ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಗಳನ್ನು ಆಹ್ವಾನಿಸಿದೆ. ಆಸಕ್ತ ಅಭ್ಯರ್ಥಿಗಳು ಜೂನ್ 30, 2018ರೊಳಗೆ ಅರ್ಜಿಗಳನ್ನು ಸಲ್ಲಿಸಬೇಕು.

ರೈಲ್ವೆ ಸುರಕ್ಷತಾ ದಳ ಮಹಿಳಾ ಮತ್ತು ಪುರುಷ ಅಭ್ಯರ್ಥಿಗಳಿಂದ ಸಬ್ ಇನ್ಸ್‌ಪೆಕ್ಟರ್ (ಲೆವೆಲ್ 6 ಆಫ್ 7ನೇ ಸಿಪಿಸಿ ಪೇ ಮ್ಯಾಟ್ರಿಕ್ಸ್ ) ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಿದೆ. ಆಯ್ಕೆಯಾಗುವ ಅಭ್ಯರ್ಥಿಗಳು ಭಾರತದ ಯಾವುದೇ ನಗರದಲ್ಲಿ ಕೆಲಸ ಮಾಡಲು ಸಿದ್ಧರಿರಬೇಕು.

ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪದವಿ ಪಡೆದಿರಬೇಕು. ವೇತನ ಶ್ರೇಣಿ 35,400 ರೂ.ಗಳು.

RPF recruitment 2018 : Apply for 1120 Sub Inspector posts

ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ 20 ರಿಂದ 25 ವರ್ಷದ ವಯೋಮಿತಿ ನಿಗದಿಪಡಿಸಲಾಗಿದೆ. 1/7/2018ಕ್ಕೆ ಅನ್ವಯವಾಗುವಂತೆ. ಎಸ್‌ಸಿ/ಎಸ್‌ಟಿ ಅಭ್ಯರ್ಥಿಗಳಿಗೆ 05, ಓಬಿಸಿ ಅಭ್ಯರ್ಥಿಗಳಿಗೆ 3 ವರ್ಷದ ವಯೋಮಿತಿ ಸಡಿಲಿಕೆ ಇರುತ್ತದೆ.

ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕ್ರೆಡಿಟ್, ಡೆಬಿಟ್, ನೆಟ್ ಬ್ಯಾಂಕಿಂಗ್ ಮೂಲಕ ಅರ್ಜಿ ಶುಲ್ಕವನ್ನು ಪಾವತಿ ಮಾಡಬೇಕು. ಎಸ್‌ಸಿ/ಎಸ್‌ಟಿ/ನಿವೃತ್ತ ಯೋಧರು/ಮಹಿಳೆಯರು/ಆರ್ಥಿಕವಾಗಿ ಹಿಂದುಳಿದ ವಿದ್ಯಾರ್ಥಿಗಳಿಗೆ 250 ರೂ. ಶುಲ್ಕ ನಿಗದಿ ಮಾಡಲಾಗಿದೆ. ಉಳಿದ ಅಭ್ಯರ್ಥಿಗಳು 500 ರೂ. ಶುಲ್ಕವನ್ನು ಪಾವತಿ ಮಾಡಬೇಕು.

ಹೆಚ್ಚಿನ ಮಾಹಿತಿಗಾಗಿ ಇಲ್ಲಿ ಕ್ಲಿಕ್ ಮಾಡಿ

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+