8 ಸಾವಿರ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದ ರೈಲ್ವೆ ಸುರಕ್ಷತಾ ದಳ

ಬೆಂಗಳೂರು, ಮೇ 24 : ಆರ್‌ಪಿಎಫ್‌ 8619 ಕಾನ್ಸ್‌ಟೇಬಲ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಗಳನ್ನು ಆಹ್ವಾನಿಸಿದೆ. ಅರ್ಜಿಗಳನ್ನು ಸಲ್ಲಿಸಲು ಜೂನ್ 30, 2018 ಕೊನೆಯ ದಿನವಾಗಿದೆ.

ರೈಲ್ವೆ ಸುರಕ್ಷತಾ ದಳ (ಆರ್‌ಪಿಎಫ್‌) 8619 ಪುರುಷ ಮತ್ತು ಮಹಿಳಾ ಕಾನ್ಸ್‌ಟೇಬಲ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಗಳನ್ನು ಆಹ್ವಾನಿಸಿದೆ. ಆಯ್ಕೆಯಾದ ಅಭ್ಯರ್ಥಿಗಳು ಭಾರತದ ಯಾವುದೇ ನಗರದಲ್ಲಿ ಕೆಲಸ ಮಾಡಲು ಸಿದ್ಧರಿರಬೇಕು.

ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಎಸ್‌ಎಸ್‌ಎಲ್‌ಸಿ/ಮ್ಯಾಟ್ರಿಕ್ಸ್ ನಲ್ಲಿ ಉತ್ತೀರ್ಣರಾಗಿರಬೇಕು. ಮಾನ್ಯತೆ ಪಡೆದ ಪರೀಕ್ಷಾ ಮಾಂಡಳಿ ನಡೆಸುವ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು. ವೇತನ ಶ್ರೇಣಿ 21,700 ರೂ.ಗಳು.

RPF recruitment 2018 : Apply for 8619 Constable Posts

ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ 18 ರಿಂದ 25 ವರ್ಷದ ವಯೋಮಿತಿ ನಿಗದಿ ಮಾಡಲಾಗಿದೆ. 1/7/208ಕ್ಕೆ ಅನ್ವಯವಾಗುವಂತೆ. ಎಸ್‌ಸಿ/ಎಸ್‌ಟಿ ಅಭ್ಯರ್ಥಿಗಳಿಗೆ 5, ಒಬಿಸಿ ಅಭ್ಯರ್ಥಿಗಳಿಗೆ 3 ವರ್ಷದ ವಯೋಮಿತಿ ಸಡಿಲಿಕೆ ಇರುತ್ತದೆ.

ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು 500ರೂ.ಗಳ ಅರ್ಜಿ ಶುಲ್ಕವನ್ನು ಪಾವತಿ ಮಾಡಬೇಕು. ಎಸ್‌ಸಿ/ಎಸ್‌ಟಿ/ನಿವೃತ್ತ ಯೋಧರು/ಮಹಿಳಾ/ಅತ್ಯಂತ ಹಿಂದುಳಿದ ವರ್ಗದ ಅಭ್ಯರ್ಥಿಗಳಿಗೆ 250 ರೂ.ಗಳ ಅರ್ಜಿ ಶುಲ್ಕವನ್ನು ಪಾವತಿ ಮಾಡಬೇಕಾಗುತ್ತದೆ.

ಹೆಚ್ಚಿನ ಮಾಹಿತಿಗಾಗಿ ಇಲ್ಲಿ ಕ್ಲಿಕ್ ಮಾಡಿ

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+