Railway Recruitment: ಭಾರತೀಯ ರೈಲ್ವೆಯಲ್ಲಿ 8,860 ಹುದ್ದೆಗಳ ಭರ್ಜರಿ ನೇಮಕಾತಿ

ಬೆಂಗಳೂರು, ಅಕ್ಟೋಬರ್ 25: ದೇಶದ ಸಾವಿರಾರು ಉದ್ಯೋಗಾಕಾಂಕ್ಷಿಗಳಿಗೆ ಕೇಂದ್ರ ಸರ್ಕಾರ ಗುಡ್ ನ್ಯೂಸ್ ನೀಡಿದೆ. ಭಾರತೀಯ ರೈಲ್ವೆ ನೇಮಕಾತಿ ಮಂಡಳಿ (RRB) 2025ನೇ ಸಾಲಿನಲ್ಲಿ ಖಾಲಿ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಹೊರಡಿಸಿದೆ. ಸ್ಟೇಷನ್ ಮಾಸ್ಟರ್ ಮತ್ತು ಕ್ಲರ್ಕ್ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ. ಈ ಹುದ್ದೆಗಳಿಗೆ ಬೇಕಾದ ಅರ್ಹತೆ, ವಯೋಮಿತಿ, ನೇಮಕಾತಿ ವಿವರ ಇಲ್ಲಿದೆ.

ಯಾರೆಲ್ಲ ಸರ್ಕಾರಿ ಉದ್ಯೋಗ ಹೊಂದಲು ಬಯಸುತ್ತಿದ್ದೀರಿ. ಅವರೆಲ್ಲರಿಗೆ ಇದೊಂದು ಉತ್ತಮ ಅವಕಾಶವಾಗಿದೆ. ಸ್ಟೇಷನ್ ಮಾಸ್ಟರ್ ಮತ್ತು ಕ್ಲರ್ಕ್ ಹುದ್ದೆಗಳು ಸೇರಿದಂತೆ ಒಟ್ಟು ಖಾಲಿ ಇರುವ 8,860 ಹುದ್ದೆಗಳ ನೇಮಕಾತಿ ಅಖಿಲ ಭಾರತ ಮಟ್ಟದಲ್ಲಿ ನಡೆಯಲಿದೆ. ಯಾವುದೇ ರಾಜ್ಯದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಅರ್ಹ ಆಸಕ್ತರು ಅರ್ಜಿಗಳನ್ನು ರೈಲ್ವೆ ಇಲಾಖೆ ಅಧಿಕೃತ ವೆಬ್‌ಸೈಟ್ https://indianrailways.gov.in/ ಮೂಲಕ ಅರ್ಜಿ ಸಲ್ಲಿಸಬೇಕು ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.

RRB Recruitment 2025 Indian Railways Invited Applications for 8 860 Station Master Clerk Posts

ವಿದ್ಯಾರ್ಹತೆ ಮತ್ತು ವಯೋಮಿತಿ ವಿವರ

ಅಧಿಸೂಚನೆ ಪ್ರಕಾರ, ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಪದವಿ ವಿದ್ಯಾರ್ಹತೆ ಪೂರೈಸಿರಬೇಕು. ವಯೋಮಿತಿ ದೃಷ್ಟಿಯಿಂದ ಅಭ್ಯರ್ಥಿಯು ಕನಿಷ್ಠ 18 ವರ್ಷ ಮತ್ತು ಗರಿಷ್ಠ 33 ವರ್ಷ ವಯಸ್ಸಿನವರಾಗಿರಬೇಕು. ನಿಗದಿತ ವರ್ಗದ ಅಭ್ಯರ್ಥಿಗಳಿಗೆ ಸರ್ಕಾರದ ನಿಯಮಾವಳಿಯಂತೆ ವಯೋಮಿತಿಯಲ್ಲಿ ಸಡಿಲಿಕೆ ನೀಡಲಾಗಿದೆ. ಒಬಿಸಿ ಅಭ್ಯರ್ಥಿಗಳಿಗೆ 3 ವರ್ಷ, ಎಸ್‌ಸಿ ಮತ್ತು ಎಸ್‌ಟಿ ಅಭ್ಯರ್ಥಿಗಳಿಗೆ 5 ವರ್ಷ, ಪಿಡಬ್ಲ್ಯೂಬಿಡಿ ಅಭ್ಯರ್ಥಿಗಳಿಗೆ 10ರಿಂದ 15 ವರ್ಷಗಳವರೆಗೆ ಸಡಿಲಿಕೆ ನೀಡಲಾಗಿದೆ.

ಅರ್ಜಿ ಶುಲ್ಕ

ಎಸ್‌ಸಿ, ಎಸ್‌ಟಿ, ಮಹಿಳೆ, ಟ್ರಾನ್ಸ್ಜೆಂಡರ್, ಮಾಜಿ ಸೈನಿಕರು, ಅಲ್ಪಸಂಖ್ಯಾತ, ಆರ್ಥಿಕವಾಗಿ ಹಿಂದುಳಿದ ವರ್ಗ ಮತ್ತು ಪಿಡಬ್ಲ್ಯೂಬಿಡಿ ಅಭ್ಯರ್ಥಿಗಳಿಗೆ ರೂಪಾಯಿ 250 ಶುಲ್ಕ ನಿಗದಿಯಾಗಿದೆ. ಇತರ ಎಲ್ಲಾ ಅಭ್ಯರ್ಥಿಗಳಿಗೆ ರೂಪಾಯಿ 500 ಅರ್ಜಿ ಶುಲ್ಕ ವಿಧಿಸಲಾಗಿದೆ. ಶುಲ್ಕವನ್ನು ಆನ್‌ಲೈನ್ ಮೂಲಕ ಪಾವತಿಸಬೇಕಿದೆ.

ಆಯ್ಕೆ ಹೇಗೆ? ಮಾಸಿಕ ವೇತನ ಮಾಹಿತಿ

ಆಯ್ಕೆಯಾದ ಅಭ್ಯರ್ಥಿಗಳಿಗೆ ಪ್ರತಿ ತಿಂಗಳು ರೂಪಾಯಿ 19,900 ರಿಂದ ರೂಪಾಯಿ 35,400ರವರೆಗೆ ವೇತನ ನೀಡಲಾಗುತ್ತದೆ. ಆಯ್ಕೆ ಪ್ರಕ್ರಿಯೆಯಲ್ಲಿ ಕಂಪ್ಯೂಟರ್ ಆಧಾರಿತ ಪರೀಕ್ಷೆ, ಕೌಶಲ್ಯ ಪರೀಕ್ಷೆ, ದಾಖಲೆ ಪರಿಶೀಲನೆ ಮತ್ತು ವೈದ್ಯಕೀಯ ಪರೀಕ್ಷೆ ಹಂತಗಳು ಇರಲಿವೆ. ಅಂತಿಮ ಹಂತದಲ್ಲಿ ಸಂದರ್ಶನದ ಮೂಲಕ ಅಂತಿಮ ಆಯ್ಕೆ ಮಾಡಲಾಗುತ್ತದೆ.

ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಭಾರತೀಯ ರೈಲ್ವೆಯ ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ, ತಮ್ಮ ಪ್ರದೇಶಕ್ಕೆ ಸಂಬಂಧಿಸಿದ RRB ವಿಭಾಗ ಆಯ್ಕೆಮಾಡಬೇಕು. ನಂತರ ಸ್ಟೇಷನ್ ಮಾಸ್ಟರ್ ಅಥವಾ ಕ್ಲರ್ಕ್ ಹುದ್ದೆಯ ಅಧಿಸೂಚನೆ ಬೇಕಿದ್ದಲ್ಲಿ ಡೌನ್‌ಲೋಡ್ ಮಾಡಿಕೊಳ್ಳಬಹುದು. ನಂತರ ಅಲ್ಲಿರುವ ಅರ್ಹತೆ ಪರಿಶೀಲಿಸಿ ಆನ್‌ಲೈನ್ ಮೂಲಕ ಅರ್ಜಿ ಭರ್ತಿ ಮಾಡಬೇಕು. ಎಎಲ್ಲ ಅಗತ್ಯ ಮಾಹಿತಿ ನೀಡಿ ಅರ್ಜಿ ಸಲ್ಲಿಸಬೇಕು. ಭವಿಷ್ಯದ ಅನುಕೂಲಕ್ಕಾಗಿ ಒಂದು ಪ್ರಿಂಟ್ ತೆಗೆದಿಟ್ಟುಕೊಳ್ಳಬೇಕು. ಹೆಚ್ಚಿನ ಮಾಹಿತಿಗೆ ನೀವು ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಬೇಕು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+