RRC NR Apprentice Jobs 2023: 10ನೇ ತರಗತಿ ಪಾಸಾದವರಿಗೆ ರೈಲ್ವೆ ಇಲಾಖೆಯಲ್ಲಿ 3039 ಹುದ್ದೆ ನೇಮಕಾತಿ, ವಿವರ
ಬೆಂಗಳೂರು, ಡಿಸೆಂಬರ್ 12: ಭಾರತೀಯ ರೈಲ್ವೆ ಇಲಾಖೆಯ ಉತ್ತರ ರೈಲ್ವೆ (NR) ವಿಭಾಗವು ತನ್ನಲ್ಲಿ ಖಾಲಿ ಇರುವ ವಿವಿಧ ಅಪ್ರೆಂಟಿಸ್ ಹುದ್ದೆಗಳ ನೇಮಕಾತಿ ಪ್ರಕ್ರಿಯೆ ಆರಂಭಿಸಿದೆ. ಸರ್ಕಾರಿ ಉದ್ಯೋಗ ಸೇರಬಯಸುವ ಅರ್ಹ ಅಭ್ಯರ್ಥಿಗಳು ಈ ಕೂಡಲೇ ಅರ್ಜಿಗಳನ್ನು ಸಲ್ಲಿಸಬೇಕು ಎಂದು ತಿಳಿಸಲಾಗಿದೆ.
ಉತ್ತರ ರೈಲ್ವೆ (NR) ವಿಭಾಗವು ಖಾಲಿ ಇರುವ ಅಪ್ರೆಂಟಿಸ್ ಹುದ್ದೆಗಳ ನೇಮಕಾತಿ ಕುರಿತಂತೆ ಅಧಿಸೂಚನೆ ಪ್ರಕಟವಾಗಿದೆ. ರೈಲ್ವೆ ಇಲಾಖೆಯುಲ್ಲಿ ಉದ್ಯೋಗ ಬಯಸುವ ಅಭ್ಯರ್ಥಿಗಳು ಜನವರಿ 11ರ ಒಳಗಾಗಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬೇಕಿದೆ. ಅರ್ಜಿ ಸಲ್ಲಿಕೆ ಸೋಮವಾರ ಡಿಸೆಂಬರ್ 11ರಿಂದ ಆರಂಭವಾಗಿದೆ.

ಅರ್ಜಿ ಸಲ್ಲಿಕೆಗೂ ಮೊದಲು ಅರ್ಹ ಅಭ್ಯರ್ಥಿಗಳು ಖಾಲಿ ಹುದ್ದೆ ಕುರಿತು ಆಯ್ಕೆ, ವಿದ್ಯಾರ್ಹತೆ, ವೇತನ ಸೇರಿದಂತೆ ನೇಮಕಾತಿ ಪೂರ್ಣ ಮಾಹಿತಿ ಇಲ್ಲಿ ತಿಳಿಯಿರಿ.
ನೇಮಕಾತಿ ಪೂರ್ಣ ಮಾಹಿತಿ
ಸಂಸ್ಥೆ ಹೆಸರು: ಉತ್ತರ ರೈಲ್ವೆ (ರೈಲ್ವೆ ಇಲಾಖೆ)
ಹುದ್ದೆ ಹೆಸರು: ವಿವಿಧ ಅಪ್ರೆಂಟಿಸ್ ಹುದ್ದೆ
ಒಟ್ಟು ಹುದ್ದೆ ಸಂಖ್ಯೆ: 3039
ಅರ್ಜಿ ಸಲ್ಲಿಕೆ ಆರಂಭ: ಡಿಸೆಂಬರ್ 11
ಅರ್ಜಿ ಸಲ್ಲಿಕೆ ಕೊನೆ ದಿನ: 11 ಜನವರಿ 2024
ವೇತನ: ನಿಗದಿ ಮಾಡಲಾಗಿಲ್ಲ
ಪೋಸ್ಟಿಂಗ್: ಭಾರತದಲ್ಲಿ ಎಲ್ಲಿಯಾದರು
ವಿದ್ಯಾರ್ಹತೆ ಏನಿರಬೇಕು
ಉತ್ತರ ರೈಲ್ವೆ ಇಲಾಖೆ ಹೊರಡಿಸಿದ ಅಧಿಸೂಚನೆ ಪ್ರಕಾರ, ಅರ್ಜಿ ಸಲ್ಲಿಸಲು ಬಯಸುವ ಆಸಕ್ತು ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯ ಇಲ್ಲವೇ ಮಂಡಳಿಯಲ್ಲಿ SSLC(10th) / ITI ಶೈಕ್ಷಣಿಕ ಅರ್ಹತೆಯನ್ನು ಪಡೆದಿರಬೇಕು.

ವಯೋಮಿತಿ ವಿವರ
ಅರ್ಜಿ ಸಲ್ಲಿಸಲಿರುವ ಅಭ್ಯರ್ಥಿಗಳ ವಯಸ್ಸು ಗರಿಷ್ಟ 24 ವರ್ಷ ಮೀರರಬಾರದು ಎಂದು ತಿಳಿಸಲಾಗಿದೆ. ಅಲ್ಲದೇ ಜಾತಿ ಆಧಾರದಲ್ಲಿ ಅಭ್ಯರ್ಥಿಗಳಿಗೆ ವಯೋಮಿತಿಯಲ್ಲಿ ಸಡಿಲಿಕೆ ನೀಡಲಾಗುವುದು ಎಂದು ಉತ್ತರ ರೈಲ್ವೆ ಅಧಿಸೂಚನೆ ತಿಳಿಸಿದೆ.
ಆಯ್ಕೆ ಪ್ರಕ್ರಿಯೆ
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳನ್ನು ಉತ್ತರ ರೈಲ್ವೆ ನೇಮಕಾತಿ ನಿಯಮಗಳ ಪ್ರಕಾರ ಆಯ್ಕೆ ಮಾಡಲಾಗುತ್ತದೆ. ಮೊದಲು ಅಭ್ಯಥಿಗಳ SSLC(10th) / ITI ಶೈಕ್ಷಣಿಕ ಅಂಕಗಳ (ಮೆರಿಟ್) ಆಧಾರದಲ್ಲಿ ಆಯ್ಕೆ ಮಾಡಲಾಗುತ್ತದೆ. ನಂತರ ಅಭ್ಯರ್ಥಿಗಳ ದಾಖಲೆ ಪರಿಶೀಲನೆ ಮತ್ತು ವೈದ್ಯಕೀಯ ಪರೀಕ್ಷೆ ಮೂಲಕ ಆಯ್ಕೆ ಮಾಡಲಾಗುವುದು ಎಂದು ಅಧಿಸೂಚನೆ ತಿಳಿಸಿದೆ.
ಅರ್ಜಿ ಶುಲ್ಕ ವಿವರ
ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, PWBD ವರ್ಗ ಅಭ್ಯರ್ಥಿಗಳಿಗೆ ಯಾವುದೇ ಶುಲ್ಕ ನಿಗದಿ ಮಾಡಲಾಗಿಲ್ಲ. ಉಳಿದ ಎಲ್ಲ ವರ್ಗದ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕ 100 ರೂಪಾಯಿ ಪಾವತಿಸಬೇಕು.
ಅಭ್ಯರ್ಥಿಗಳು ನಿಗದಿತ ದಿನಾಂಕದೊಳಗೆ ಆನ್‌ಲೈನ್ ಮೂಲಕ ಈ ಅಧಿಕೃತ ವೆಬ್‌ಸೈಟ್ https://rrcnr.net.in/ ಮೂಲಕ ಅರ್ಜಿ ಭರ್ತಿ ಮಾಡಬೇಕು ಎಂದು ತಿಳಿಸಲಾಗಿದೆ.












Click it and Unblock the Notifications