ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ರಾಜ್ಯದ ಎಲ್ಲಾ ಗ್ರಾ.ಪಂಗಳಲ್ಲಿ ಡೇಟಾ ಎಂಟ್ರಿ ಆಪರೇಟರ್ ನೇಮಕಾತಿ

|
Google Oneindia Kannada News

Recommended Video

ರಾಜ್ಯದ ಎಲ್ಲಾ ಗ್ರಾಮ ಪಂಚಾಯಿತಿಗಳಲ್ಲಿ ಡೇಟಾ ಎಂಟ್ರಿ ಆಪರೇಟರ್ ನೇಮಕ | Oneindia Kannada

ಬೆಂಗಳೂರು, ನವೆಂಬರ್ 16: ರಾಜ್ಯದ ಪ್ರತಿ ಗ್ರಾಮ ಪಂಚಾಯಿತಿಗಳಿಗೆ ತಲಾ ಒಂದರಂತೆ ಡೇಟಾ ಎಂಟ್ರಿ ಆಪರೇಟರ್ ಗಳನ್ನು ನೇಮಕ ಮಾಡಲು ರಾಜ್ಯ ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಅರ್ಜಿ ಆಹ್ವಾನಿಸಿದೆ.

ನಮ್ಮ ಮೆಟ್ರೋದಲ್ಲಿ 80ಕ್ಕೂ ಅಧಿಕ ಹುದ್ದೆಗಳಿವೆ, ಅರ್ಜಿ ಹಾಕಿನಮ್ಮ ಮೆಟ್ರೋದಲ್ಲಿ 80ಕ್ಕೂ ಅಧಿಕ ಹುದ್ದೆಗಳಿವೆ, ಅರ್ಜಿ ಹಾಕಿ

ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ದಿನಾಂಕ 30 ನವೆಂಬರ್ 2017ರೊಳಗೆ ಅರ್ಜಿ ಸಲ್ಲಿಸಲು ಕೋರಲಾಗಿದೆ. ಅಭ್ಯರ್ಥಿಗಳು ಯಾವ ಗ್ರಾಮ ಪಂಚಾಯತಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಆಯಾ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗೆ ಅರ್ಜಿಗಳನ್ನು ನಿಗದಿತ ಅವಧಿಯೊಳಗೆ ಸಲ್ಲಿಸತಕ್ಕದ್ದು.

Rural Development and Panchayat Raj has invited applications for Data Entry Operators

ವಿದ್ಯಾರ್ಹತೆ: ಪಿಯುಸಿ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ತೇರ್ಗಡೆ ಹೊಂದಿರಬೇಕು. ಕೇಂದ್ರ/ ರಾಜ್ಯ ಸರ್ಕಾರಗಳಿಂದ ಮಾನ್ಯತೆ ಪಡೆದಿರುವ ತರಬೇತಿ ಸಂಸ್ಥೆಗಳಿಂದ ಕಂಪ್ಯೂಟರ್ ಬಳಕೆಯಲ್ಲಿ ಕನಿಷ್ಠ 3 ತಿಂಗಳ ತರಬೇತಿ ಪಡೆದಿರಬೇಕು.

ವಯೋಮಿತಿ: ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕದಂದು ಅಭ್ಯರ್ಥಿಯು 18 ವರ್ಷ ಪೂರೈಸಿರಬೇಕು ಮತ್ತು ಗರಿಷ್ಠ 35 ವರ್ಷಗಳು. (ಒಬಿಸಿ ವರ್ಗದವರಿಗೆ ಮೂರು ವರ್ಷ ಮತ್ತು ಎಸ್.ಸಿ/ಎಸ್.ಟಿ/ಪ್ರ-1 ಅಭ್ಯರ್ಥಿಗಳಿಗೆ ಐದು ವರ್ಷಗಳ ಸಡಿಲಿಕೆ ಇದೆ)

ಅರ್ಜಿ ಸಲ್ಲಿಕೆ: ಅಭ್ಯರ್ಥಿಗಳು ಅರ್ಜಿ ನಮೂನೆಯನ್ನು ವೆಬ್ಸೈಟ್ ಮೂಲಕ ಪಡೆದು ಪೂರ್ಣವಾಗಿ ಭರ್ತಿ ಮಾಡಿ, ಅಗತ್ಯ ದಾಖಲೆಗಳನ್ನು ಲಗತ್ತಿಸಿ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿಗೆ ತಲುಪಿಸಲು ಸೂಚಿಸಾಲಾಗಿದೆ.

ಅರ್ಜಿ ಶುಲ್ಕ: ಅಭ್ಯರ್ಥಿಗಳು ಅರ್ಜಿಗಳನ್ನು ಶುಲ್ಕ 150 ರು. ಡಿ.ಡಿ ಅಥವಾ ಪೋಸ್ಟಲ್ ಆರ್ಡರ್ ಮೂಲಕ ಗ್ರಾಮ ಪಂಚಾಯತಿಗೆ ಸಲ್ಲಿಸುವುದು.

ಆಯ್ಕೆ ಪ್ರಕ್ರಿಯೆ: ಮೆರಿಟ್ ಆಧಾರದ ಮೇಲೆ ಅಭ್ಯರ್ಥಿಗಳನ್ನು ನೇಮಕ ಮಾಡಿಕೊಳ್ಳಲಾಗುವುದು.

ಪ್ರಮುಖ ದಿನಾಂಕಗಳು: ಅರ್ಜಿ ಸಲ್ಲಿಸಲು ಪ್ರಾರಂಭಿಕ ದಿನಾಂಕ: 15-11-2017ಅರ್ಜಿ

ಸೂಚನೆ: ಪಿಯುಸಿ ತತ್ಸಮಾನ ಪರೀಕ್ಷೆಗೆ ಐಟಿಐ ಅಥವಾ ೩ ವರ್ಷದ ಡಿಪ್ಲೋಮ ಕೋರ್ಸನ್ನು ಮಾತ್ರ ಪರಿಗಣಿಸಲಾಗುವುದು. ಮುಕ್ತ ವಿಶ್ವವಿದ್ಯಾಲಯಗಳು ನಡೆಸುವ 10+2 ಪರೀಕ್ಷೆಯನ್ನು ಸದರಿ ಹುದ್ದೆಗೆ ನಿಗದಿತ ವಿದ್ಯಾರ್ಹತೆ ಎಂದು ಪರಿಗಣಿಸಲಾಗುವುದಿಲ್ಲ.

ಹೆಚ್ಚಿನ ಮಾಹಿತಿಗೆ ಇಲ್ಲಿ ಕ್ಲಿಕ್ ಮಾಡಿ

English summary
The Karnataka Rural Development and Panchayat Raj Department has invited applications for appointment of Data Entry Operators for each Gram Panchayat in the state. The last date is November 30.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X