ಬೆಂಗಳೂರಿನ ರೈಲು ಗಾಲಿ ಕಾರ್ಖಾನೆಯಲ್ಲಿ ಕೆಲಸ ಖಾಲಿ ಇದೆ
ಬೆಂಗಳೂರು, ಆಗಸ್ಟ್ 01 : ರೈಲು ಗಾಲಿ ಕಾರ್ಖಾನೆ 192 ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಗಳನ್ನು ಆಹ್ವಾನಿಸಿದೆ. ಆಸಕ್ತ ಅಭ್ಯರ್ಥಿಗಳು ಆಗಸ್ಟ್ 13, 2018ರೊಳಗೆ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ.
192 ಟ್ರೇಡ್ ಅಪ್ರೆಂಟೀಸ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಆಯ್ಕೆಯಾದ ಅಭ್ಯರ್ಥಿಗಳು ಬೆಂಗಳೂರಿನಲ್ಲಿ ಕೆಲಸ ಮಾಡಬೇಕಿದೆ. ವೇತನ ಶ್ರೇಣಿ 6841 ರೂ. ಪ್ರತಿ ತಿಂಗಳು.
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮೆಟ್ರಿಕ್ಯುಲೇಷನ್/ 10ನೇ ತರಗತಿ ಅಥವ ತತ್ಸಮಾನ ಕೋರ್ಸ್‌ಗಳನ್ನು ಶೇ 50ರಷ್ಟು ಅಂಕಗಳೊಂದಿಗೆ ಪೂರ್ಣಗೊಳಿಸಿರಬೇಕು. ಐಟಿಐನಲ್ಲಿ ನಿಗದಿಪಡಿಸಿರುವ ಯಾವುದೇ ಟ್ರೇಡ್‌ನಲ್ಲಿ ಒಂದನ್ನು ಪೂರ್ಣಗೊಳಿಸಿರಬೇಕು.

ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ 15 ರಿಂದ 24 ವರ್ಷದ ವಯೋಮಿತಿ ನಿಗದಿ ಮಾಡಲಾಗಿದೆ. ಆಗಸ್ಟ್ 13, 2018ಕ್ಕೆ ಅನ್ವಯವಾಗುವಂತೆ.
ಅರ್ಜಿ ಶುಲ್ಕ : ಸಾಮಾನ್ಯ ಮತ್ತು ಒಬಿಸಿ ಅಭ್ಯರ್ಥಿಗಳಿಗೆ 100 ರೂ. ಶುಲ್ಕ ನಿಗದಿ ಮಾಡಲಾಗಿದೆ. ಎಸ್‌ಸಿ/ಎಸ್‌ಟಿ/ಅಂಗವಿಕಲ/ಮಹಿಳಾ ಅಭ್ಯರ್ಥಿಗಳಿಗೆ ಯಾವುದೇ ಶುಲ್ಕ ಇರುವುದಿಲ್ಲ.
ಹೆಚ್ಚಿನ ಮಾಹಿತಿಗಾಗಿ ಇಲ್ಲಿ ಕ್ಲಿಕ್ ಮಾಡಿ












Click it and Unblock the Notifications