ರೈಲ್ವೆ ವೀಲ್ ಫ್ಯಾಕ್ಟರಿ ನೇಮಕಾತಿ; ಬೆಂಗಳೂರಲ್ಲಿ ಕೆಲಸ
ಬೆಂಗಳೂರು, ಅಕ್ಟೋಬರ್ 04 : ರೈಲ್ವೆ ವೀಲ್ ಫ್ಯಾಕ್ಟರಿ 20 ಹುದ್ದೆಗಳ ಭರ್ತಿಗೆ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಅರ್ಜಿಗಳನ್ನು ಸಲ್ಲಿಸಲು 10/10/2019 ಕೊನೆಯ ದಿನವಾಗಿದೆ.
ರೈಲ್ವೆ ವೀಲ್ ಫ್ಯಾಕ್ಟರಿ 20 ಸುಪ್ರಿವೈಸರ್, ಟೆಕ್ನಿಶಿಯನ್ ಹುದ್ದೆಗಳನ್ನು ಭರ್ತಿ ಮಾಡುತ್ತಿದೆ. ಆಯ್ಕೆಯಾದವರು ಕರ್ನಾಟಕ ಬೆಂಗಳೂರಿನಲ್ಲಿ ಕೆಲಸ ಮಾಡಬೇಕಿದೆ. ವಿದ್ಯಾರ್ಹತೆಯ ಮಾಹಿತಿಗಾಗಿ ಅಧಿಸೂಚನೆಯನ್ನು ನೋಡಬಹುದಾಗಿದೆ.
2019ರ ಡಿಸೆಂಬರ್ 1ಕ್ಕೆ ಅನ್ವಯವಾಗುವಂತೆ 65 ವರ್ಷ ಮೀರದ ಅಭ್ಯರ್ಥಿಗಳು ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ಸಂದರ್ಶನದ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ ಎಂದು ನೇಮಕಾತಿ ಆದೇಶದಲ್ಲಿ ತಿಳಿಸಲಾಗಿದೆ.

ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಯಾವುದೇ ಶುಲ್ಕವನ್ನು ನಿಗದಿ ಮಾಡಿಲ್ಲ. ನಿಗದಿತ ಅರ್ಜಿ ನಮೂನೆಯನ್ನು ಭರ್ತಿ ಮಾಡಿ, ಅಗತ್ಯ ದಾಖಲೆಗಳನ್ನು ಲಗತ್ತಿಸಿ ಅಂಚೆ ಮೂಲಕ ಅಭ್ಯರ್ಥಿಗಳು 10/10/2019ರೊಳಗೆ ಕಳಿಸಬಹುದಾಗಿದೆ.
ಅರ್ಜಿಗಳನ್ನು ಕಳುಹಿಸಲು ವಿಳಾಸ
The Senior Personnel Officer
Rail Wheel Factory
Yelahanka
Bangalore - 560064
ಅಭ್ಯರ್ಥಿಗಳು ಹೆಚ್ಚಿನ ಮಾಹಿತಿಗಾಗಿ ಇಲ್ಲಿ ಕ್ಲಿಕ್ ಮಾಡಬಹುದಾಗಿದೆ












Click it and Unblock the Notifications