30 ಜ್ಯೂನಿಯರ್ ಅಕೌಂಟೆಂಟ್ ಹುದ್ದೆ ಭರ್ತಿಗೆ ಅರ್ಜಿ ಆಹ್ವಾನ
ಬೆಂಗಳೂರು, ಜುಲೈ 27 : ಎಸ್‌ಎಐ 30 ಜ್ಯೂನಿಯರ್ ಅಕೌಂಟೆಂಟ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಗಳನ್ನು ಆಹ್ವಾನಿಸಿದೆ. ಅರ್ಜಿಗಳನ್ನು ಸಲ್ಲಿಸಲು ಆಗಸ್ಟ್ 1, 2018 ಕೊನೆಯ ದಿನವಾಗಿದೆ.
ಭಾರತ ಕ್ರೀಡಾ ಪ್ರಾಧಿಕಾರ (ಎಸ್‌ಎಐ) ಮೂವತ್ತು ಹುದ್ದೆಗಳನ್ನು ಭರ್ತಿ ಮಾಡುತ್ತಿದೆ. ಆಯ್ಕೆಯಾದ ಅಭ್ಯರ್ಥಿಗಳು ದೇಶದ ಯಾವುದೇ ನಗರದಲ್ಲಿ ಕೆಲಸ ಮಾಡಲು ಸಿದ್ಧರಿರಬೇಕು.
ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ವಾಣಿಜ್ಯ/ಅಕೌಂಟ್ಸ್ ವಿಷಯದಲ್ಲಿ ಪದವಿ ಪಡೆದ ಅಭ್ಯರ್ಥಿಗಳು ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ಅರ್ಜಿಗಳನ್ನು ಸಲ್ಲಿಸಲು ಯಾವುದೇ ಶುಲ್ಕವನ್ನು ನಿಗದಿ ಮಾಡಿಲ್ಲ.

ಆಯ್ಕೆಯಾದ ಅಭ್ಯರ್ಥಿಗಳಿಗೆ 20 ರಿಂದ 25 ಸಾವಿರ ರೂ. ವೇತನ ನಿಗದಿ ಮಾಡಲಾಗಿದೆ. ಸಂದರ್ಶನದ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.
ಪ್ರಮುಖ ಅಂಶಗಳು
* ಭಾರತ ಕ್ರೀಡಾ ಪ್ರಾಧಿಕಾರದಲ್ಲಿ ಉದ್ಯೋಗ
* ಒಟ್ಟು ಹುದ್ದೆಗಳು 30
* ಜ್ಯೂನಿಯರ್ ಅಕೌಂಟೆಂಟ್ ಹುದ್ದೆ
* ಆಗಸ್ಟ್ 1, 2018 ಅರ್ಜಿ ಸಲ್ಲಿಸಲು ಕೊನೆ ದಿನ
ಹೆಚ್ಚಿನ ಮಾಹಿತಿಗಾಗಿ ಇಲ್ಲಿ ಕ್ಲಿಕ್ ಮಾಡಿ












Click it and Unblock the Notifications