SAI Recruitment 2024: ಕ್ರೀಡಾ ಪ್ರಾಧಿಕಾರದಲ್ಲಿ ಭರ್ಜರಿ ಉದ್ಯೋಗವಕಾಶ, ವೇತನ, ಆಯ್ಕೆ ವಿಧಾನದ ವಿವರ
ಬೆಂಗಳೂರು, ಜನವರಿ 22: ಭಾರತೀಯ ಕ್ರೀಡಾ ಪ್ರಾಧಿಕಾರವು (SAI) ತನ್ನಲ್ಲಿರುವ ಖಾಲಿ ಹುದ್ದೆಗಳ ಭರ್ತಿ ಪ್ರಕ್ರಿಯೆ ಆರಂಭವಾಗಿದೆ. ಈ ನಿಮಿತ್ತ ಅರ್ಹ ಅಭ್ಯರ್ಥಿಗಳಿಗೆ ಖಾಲಿ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. ಕೇಂದ್ರ ಸರ್ಕಾರಿ ವ್ಯಾಪ್ತಿಯಲ್ಲಿ ಕೆಲಸ ಮಾಡುವ ಅವಕಾಶ ಇದ್ದು, ಇದನ್ನು ಅರ್ಹರು ಸದುಪಯೋಗ ಮಾಡಿಕೊಳ್ಳುವಂತೆ ಪ್ರಾಧಿಕಾರ ತಿಳಿಸಿದೆ.
ಭಾರತೀಯ ಕ್ರೀಡಾ ಪ್ರಾಧಿಕಾರದಲ್ಲಿ (SAI) ಒಟ್ಟು 25 ಯಂಗ್ ಪ್ರೊಫೆಶನಲ್ (ಜನರಲ್ ಮ್ಯಾನೇಜ್ಮೆಂಟ್) ಹುದ್ದೆಗಳು ಖಾಲಿ ಇವೆ. ಆಸಕ್ತರು ಫೆಬ್ರವರಿ 5ರೊಳಗೆ ಅರ್ಜಿ ಸಲ್ಲಿಸಬೇಕು. ಕೊನೆಯ ದಿನದವರೆಗೂ ಕಾಯದೇ ಈ ಕೂಡಲೇ ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬೇಕಿದೆ. ಅರ್ಜಿ ಸಲ್ಲಿಸುವ ಮೂಲದು ಹುದ್ದೆ ಕುರಿತು ಮಹತ್ವದ ಮಾಹಿತಿ, ಪೂರ್ಣ ನೇಮಕಾತಿ ವಿವರ ಇಲ್ಲಿ ತಿಳಿದು ಅರ್ಜಿ ಸಲ್ಲಿಸಿ.

ನೇಮಕಾತಿ ಪೂರ್ಣ ವಿವರ
ಸಂಸ್ಥೆ ಹೆಸರು: ಭಾರತೀಯ ಕ್ರೀಡಾ ಪ್ರಾಧಿಕಾರ
ಹುದ್ದೆ ಹೆಸರು: ಯಂಗ್ ಪ್ರೊಫೆಶನಲ್
ಖಾಲಿ ಹುದ್ದೆ: 25
ಮಾಸಿಕ ವೇತನ: ₹50,000
ಪೋಸ್ಟಿಂಗ್: ₹50,000
ಅರ್ಜಿ ಸಲ್ಲಿಕೆ ಕೊನೆ ದಿನ: ಫೆಬ್ರವರಿ 5
ಶೈಕ್ಷಣಿಕ ಅರ್ಹತೆ
ಅರ್ಜಿ ಸಲ್ಲಿಸಲಿರುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ ಸಿಎ ಅಥವಾ ICWA, ಎಲ್ಎಲ್ಬಿ, ಬಿಇ/ಬಿ.ಟೆಕ್, ಎಂಬಿಬಿಎಸ್, ಸ್ನಾತಕೋತ್ತರ ಪದವಿ ಪೂರ್ಣಗೊಳಿಸಿರಬೇಕು ಎಂದು ಭಾರತೀಯ ಕ್ರೀಡಾ ಪ್ರಾಧಿಕಾರ ನೇಮಕಾತಿ ಅಧಿಸೂಚನೆ ತಿಳಿಸಿದೆ.

ವಯಸ್ಸಿನ ಮಿತಿ
ಅಭ್ಯರ್ಥಿಗಳ ವಯಸ್ಸು ಗರಿಷ್ಠ 32 ವರ್ಷ ಮೀರಿರಬಾರದು. ಮೀಸಲಾತಿ ಅನುಸಾರ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ನೀಡಲಾಗುವುದು. ಅಲ್ಲದೇ ಅರ್ಜಿ ಸಲ್ಲಿಸುವ ಯಾವೊಂದು ಅಭ್ಯರ್ಥಿಗಳಿಗೂ ಯಾವ ಅರ್ಜಿ ಶುಲ್ಕವನ್ನು ನಿಗದಿ ಮಾಡಲಾಗಿಲ್ಲ ಎಂದು ಭಾರತೀಯ ಕ್ರೀಡಾ ಪ್ರಾಧಿಕಾರ ಮಾಹಿತಿ ನೀಡಿದೆ.
ಆಯ್ಕೆ ಪ್ರಕ್ರಿಯೆ ಹೇಗಿರುತ್ತದೆ
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಲಿಖಿತ ಪರೀಕ್ಷೆ ಎದುರಿಸಬೇಕಿರುತ್ತದೆ. ಬಳಿಕ ಅಭ್ಯರ್ಥಿಗಳಿಗೆ ಸಂಸ್ಥೆಯು ನೇರ ಸಂದರ್ಶನ ನಡೆಸಿ ಆಯ್ಕೆ ಮಾಡಿಕೊಳ್ಳುತ್ತದೆ. ಆಯ್ಕೆ ಆಗುವವರಿಗೆ ಮಾಸಿಕವಾಗಿ 50,000 ರೂಪಾಯಿ ವೇತನ ನೀಡಿ ಭಾರತದಲ್ಲಿ ಎಲ್ಲಿಯಾದರೂ ಪೋಸ್ಟಿಂಗ್ ನೀಡಲಿದ್ದಾರೆ.
ಅರ್ಜಿ ಸಲ್ಲಿಕೆಯ ಮಾಹಿತಿ
ಆಸಕ್ತು ಅಭ್ಯರ್ಥಿಗಳು ನಿಗದಿತ ಸಮಯಗೊಳಗೆ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು ಎಂದು ಅಧಿಸೂಚನೆಯಲ್ಲಿ ತಿಳಿಸಿದೆ. ಅರ್ಜಿಯನ್ನು ನೀವು ಈ (https://sportsauthorityofindia.nic.in/saijobs/) ಮೇಲೆ ಕ್ಲಿಕ್ ಮಾಡಿ ಸಲ್ಲಿಸಬೇಕು.
ನೆನಪಿಡಬೇಕಾದ ದಿನಗಳು
ಅರ್ಜಿ ಸಲ್ಲಿಕೆ ಆರಂಭವಾಗಿದ್ದು- ಜನವರಿ 20
ಅರ್ಜಿ ಸಲ್ಲಿಕೆ ಕೊನೆ ದಿನ: ಫೆಬ್ರವರಿ 5












Click it and Unblock the Notifications