ಸ್ಟೀಲ್ ಅಥಾರಿಟಿ ಆಫ್ ಇಂಡಿಯಾದಲ್ಲಿ 129 ಹುದ್ದೆಗಳಿಗೆ ಅರ್ಜಿ ಆಹ್ವಾನ
ನವದೆಹಲಿ, ಜೂನ್ 10: ಸ್ಟೀಲ್ ಅಥಾರಿಟಿ ಆಫ್ ಇಂಡಿಯಾ (SAIL) ತನ್ನ ಅಧಿಕೃತ ವೆಬ್ ತಾಣದಲ್ಲಿ 129 ಹುದ್ದೆಗಳ ನೇಮಕಾತಿಗಾಗಿ ಅಧಿಕೃತ ಪ್ರಕಟಣೆ ಹೊರಡಿಸಿದೆ. ಮೆಡಿಕಲ್ ಆಫೀಸರ್ ಹುದ್ದೆಗಳಿಗೆ ಅರ್ಜಿ ಹಾಕಲು ಬಯಸುವ ಅರ್ಜಿದಾರರು ತಮ್ಮ ತುಂಬಿದ ಅರ್ಜಿಯನ್ನು ಜೂನ್ 26ರೊಳಗೆ ಸಲ್ಲಿಸತಕ್ಕದ್ದು.
ಸಂಸ್ಥೆ ಹೆಸರು: Steel Authority of India Limited
ಹುದ್ದೆ ಹೆಸರು: ಮೆಡಿಕಲ್ ಆಫೀಸರ್, ಮೆಡಿಕಲ್ ಸ್ಪೆಷಲಿಸ್ಟ್
ಒಟ್ಟು ಹುದ್ದೆ : 129
ಉದ್ಯೋಗ ಸ್ಥಳ : ಭಾರತದೆಲ್ಲೆಡೆ
ಅರ್ಜಿ ಸಲ್ಲಿಸಲು ಕೊನೆ ದಿನಾಂಕ : 26.06.2019
10 ಸಾವಿರ ಹುದ್ದೆಗಳ ಭರ್ತಿಗೆ ಕರ್ನಾಟಕ ಸರ್ಕಾರದ ಸುತ್ತೋಲೆ
ವಿದ್ಯಾರ್ಹತೆ: ಸರ್ಕಾರದಿಂದ ಮಾನ್ಯತೆ ಪಡೆದ ವಿದ್ಯಾಸಂಸ್ಥೆಯಿಂದ ಎಂಬಿಬಿಎಸ್, ಪದವಿ, ಡಿಪ್ಲೋಮಾ, ಪಿಜಿ ಡಿಗ್ರಿ, ಅಥವಾ ತತ್ಸಮಾನ ಅರ್ಹತೆ.
ವಯೋಮಿತಿ: ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ 30 ವರ್ಷ ಕನಿಷ್ಠ ಹಾಗೂ 37 ಗರಿಷ್ಠ ವಯೋಮಿತಿ ನಿಗದಿ ಮಾಡಲಾಗಿದೆ.
ಅರ್ಜಿ ಸಲ್ಲಿಸುವ ಸಾಮಾನ್ಯ/ಓಬಿಸಿ ಅಭ್ಯರ್ಥಿಗಳು 700 ರೂ. ಶುಲ್ಕವನ್ನು ಪಾವತಿಸಬೇಕು. ಎಸ್‌ಸಿ/ಎಸ್‌ಟಿ/ಅಂಗವಿಕಲ/ಇಡಬ್ಲ್ಯುಎಸ್/ಇಲಾಖಾ ಅಭ್ಯರ್ಥಿಗಳಿಗೆ 100 ರೂ. ಶುಲ್ಕ ನಿಗದಿ ಮಾಡಲಾಗಿದೆ.
1991 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದ EPFO
ನೇಮಕಾತಿ ಪ್ರಕ್ರಿಯೆ: ಆನ್ ಲೈನ್ ಪರೀಕ್ಷೆ ಹಾಗೂ ಸಂದರ್ಶನ.
ಪ್ರಮುಖ ದಿನಾಂಕಗಳು:
ಆನ್ ಲೈನ್ ನಲ್ಲಿ ಅರ್ಜಿ ಸಲ್ಲಿಸಲು ಆರಂಭ ದಿನಾಂಕ: 06.06.2019
ಅರ್ಜಿ ಸಲ್ಲಿಸಲು ಕೊನೆ ದಿನಾಂಕ : 26.06.2019
ಅರ್ಜಿ ಸಲ್ಲಿಸುವ ವಿಧಾನ ಹಾಗೂ ಹೆಚ್ಚಿನ ಮಾಹಿತಿಗಾಗಿ ಇಲ್ಲಿ ಕ್ಲಿಕ್ ಮಾಡಿ