ಸೈಲ್ ನೇಮಕಾತಿ : ಇಂಜಿನಿಯರಿಂಗ್ ಪದವೀಧರರು ಅರ್ಜಿ ಹಾಕಿ
ಬೆಂಗಳೂರು, ಮೇ 29 : ಸೈಲ್ 142 ಹುದ್ದೆಗಳನ್ನು ಭರ್ತಿ ಮಾಡಲು ಆನ್‌ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಿದೆ. ಆಸಕ್ತರು ಅರ್ಜಿಗಳನ್ನು ಸಲ್ಲಿಸಲು 14/6/2019 ಕೊನೆಯ ದಿನವಾಗಿದೆ.
ಸ್ಟೀಲ್ ಆಥಾರಿಟಿ ಆಫ್ ಇಂಡಿಯಾ (ಸೈಲ್) ಮ್ಯಾನೇಜ್ ಮೆಂಟ್ ಟ್ರೈನಿ ಹುದ್ದೆಗಳನ್ನು ಭರ್ತಿ ಮಾಡುತ್ತಿದೆ. ಆಯ್ಕೆಯಾದವರು ದೇಶದ ಯಾವುದೇ ನಗರದಲ್ಲಿ ಕೆಲಸ ಮಾಡಬೇಕಿದೆ.
ಒಟ್ಟು 142 ಹುದ್ದೆಗಳಿದ್ದು ಇಂಜಿನಿಯರಿಂಗ್ ಪದವಿಯನ್ನು ಶೇ 65ರಷ್ಟು ಅಂಕಗಳೊಂದಿಗೆ ಪೂರ್ಣಗೊಳಿಸಿದವರು ಅರ್ಜಿಗಳನ್ನು ಸಲ್ಲಿಸಬಹುದಾಗಿದೆ.

ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ 28 ವರ್ಷದ ವಯೋಮಿತಿ ನಿಗದಿ ಮಾಡಲಾಗಿದೆ. 14 ಜೂನ್ 2019ಕ್ಕೆ ಅನ್ವಯವಾಗುವಂತೆ.
ಅರ್ಜಿ ಸಲ್ಲಿಸುವ ಸಾಮಾನ್ಯ/ಓಬಿಸಿ ಅಭ್ಯರ್ಥಿಗಳು 700 ರೂ. ಶುಲ್ಕವನ್ನು ಪಾವತಿಸಬೇಕು. ಎಸ್‌ಸಿ/ಎಸ್‌ಟಿ/ಅಂಗವಿಕಲ/ಇಡಬ್ಲ್ಯುಎಸ್/ಇಲಾಖಾ ಅಭ್ಯರ್ಥಿಗಳಿಗೆ 100 ರೂ. ಶುಲ್ಕ ನಿಗದಿ ಮಾಡಲಾಗಿದೆ.
ಹೆಚ್ಚಿನ ಮಾಹಿತಿಗಾಗಿ ಇಲ್ಲಿ ಕ್ಲಿಕ್ ಮಾಡಿ












Click it and Unblock the Notifications