ಎಸ್‌ಬಿಐ ನೇಮಕಾತಿ; ಬೆಂಗಳೂರಲ್ಲಿ 475 ಹುದ್ದೆಗಳು
ಬೆಂಗಳೂರು, ಜನವರಿ 03: ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ 8000 ಹುದ್ದೆಗಳ ಭರ್ತಿಗೆ ಅರ್ಜಿಗಳನ್ನು ಆಹ್ವಾನಿಸಿದೆ. ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಲು ಜನವರಿ 26, 2020 ಕೊನೆಯ ದಿನವಾಗಿದೆ.
ಎಸ್‌ಬಿಐ ಜ್ಯುನಿಯರ್ ಅಸಿಸ್ಟೆಂಟ್ ಹುದ್ದೆಗಳನ್ನು (ಕಸ್ಟಮರ್ ಸಪೋರ್ಟ್, ಸೇಲ್ಸ್) ಭರ್ತಿ ಮಾಡುತ್ತಿದೆ. ಆಯ್ಕೆಯಾದವರು ದೇಶದ ಯಾವುದೇ ನಗರದಲ್ಲಿ ಕೆಲಸ ಮಾಡಬೇಕಿದೆ. ಬೆಂಗಳೂರಿನಲ್ಲಿ 475 ಹುದ್ದೆಗಳಿವೆ. ಆಸಕ್ತರು ಆನ್‌ಲೈನ್ ಮೂಲಕ ಅರ್ಜಿ ಹಾಕಬಹುದು.
ಅರ್ಜಿಗಳನ್ನು ಸಲ್ಲಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ಯಾವುದೇ ವಿಶ್ವವಿದ್ಯಾಲಯದಿಂದ ಪದವಿಯನ್ನು ಪಡೆದಿರಬೇಕು. ಪ್ರಾಥಮಿಕ ಮತ್ತು ಮುಖ್ಯ ಪರೀಕ್ಷೆ ಮೂಲಕ (ಆ ರಾಜ್ಯದ ಪ್ರಾದೇಶಿಕ ಭಾಷಾ ಪರೀಕ್ಷೆ) ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.

ಅರ್ಜಿ ಸಲ್ಲಿಸುವವರಿಗೆ ಕನಿಷ್ಠ 20 ವರ್ಷ, ಗರಿಷ್ಠ 28 ವರ್ಷಗಳ ವಯೋಮಿತಿ ನಿಗದಿ ಮಾಡಲಾಗಿದೆ. ಒಬಿಸಿ/2ಎ/2ಬಿ/3ಎ/3ಬಿ ಅಭ್ಯರ್ಥಿಗಳಿಗೆ 3 ವರ್ಷ, ಎಸ್‌ಸಿ/ಎಸ್‌ಟಿ ಅಭ್ಯರ್ಥಿಗಳಿಗೆ 5, ವಿಕಲಚೇತನರಿಗೆ 10 ವರ್ಷದ ವಯೋಮಿತಿ ಸಡಿಲಿಕೆ ಇರುತ್ತದೆ.
ಅರ್ಜಿ ಸಲ್ಲಿಸುವ 2ಎ/2ಬಿ/3ಎ/3ಬಿ ಅಭ್ಯರ್ಥಿಗಳು 750 ರೂ. ಅರ್ಜಿ ಶುಲ್ಕವನ್ನು ಪಾವತಿ ಮಾಡಬೇಕು. ಎಸ್‌ಸಿ/ಎಸ್‌ಟಿ ಅಭ್ಯರ್ಥಿಗಳಿಗೆ ಯಾವುದೇ ಶುಲ್ಕವಿಲ್ಲ.
ಹುದ್ದೆಗಳ ವಿವರ: ಗುಜರಾತ್‌ನಲ್ಲಿ 550, ಅಮರಾವತಿ 150, ಬೆಂಗಳೂರು 475, ಚೆನ್ನೈ 393, ಕೇರಳ 394, ಮಹಾರಾಷ್ಟ್ರ 865 ಸೇರಿದಂತೆ 8 ಸಾವಿರ ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದೆ.
ಆಸಕ್ತರು ಹೆಚ್ಚಿನ ಮಾಹಿತಿಗಾಗಿ ಇಲ್ಲಿ ಕ್ಲಿಕ್ ಮಾಡಿ












Click it and Unblock the Notifications