SBI PO 2025: ಎಸ್‌ಬಿಐನಿಂದ ಭರ್ಜರಿ ಉದ್ಯೋಗಾವಕಾಶ, 600 ಹುದ್ದೆಗಳಿಗೆ ಅರ್ಜಿ ಆಹ್ವಾನ
ಉದ್ಯೋಗ ಹುಡುಕುತ್ತಿರುವವರಿಗೆ ಎಸ್‌ಬಿಐ ಗುಡ್‌ನ್ಯೂಸ್‌ವೊಂದನ್ನು ಕೊಟ್ಟಿದೆ. ಎಸ್‌ಬಿಐನಲ್ಲಿ ವಿವಿಧ ಹುದ್ದೆಗಳು ಖಾಲಿ ಇದ್ದು, ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (SBI) 2025ರ ಪ್ರೊಬೇಷನರಿ ಆಫೀಸರ್ (PO) ನೇಮಕಾತಿಗಾಗಿ ಅರ್ಜಿ ಆಹ್ವಾನಿಸಿದೆ. ಈ ಮೂಲಕ ಒಟ್ಟು 600 ಹುದ್ದೆಗಳನ್ನು ಭರ್ತಿ ಮಾಡಲು ಮುಂದಾಗಿದೆ.
SBI PO 2025 ನೇಮಕಾತಿ ಅಧಿಸೂಚನೆಯನ್ನು ತನ್ನ ಅಧಿಕೃತ ವೆಬ್‌ಸೈಟ್‌ನಲ್ಲಿ ಪ್ರಕಟಿಸಿದೆ. ಅರ್ಜಿ ಸಲ್ಲಿಕೆ ಪ್ರಕ್ರಿಯೆಯು ಈಗಾಗಲೇ ಶುರುವಾಗಿದೆ. ಮುಂದಿನ ವರ್ಷ ಅಂದರೆ 2025ನೇ ಸಾಲಿನ ಜನವರಿ 16ರ ವರೆಗೆ ಅರ್ಜಿ ಸಲ್ಲಿಸುವುದಕ್ಕೆ ಅವಕಾಶ ಇದೆ. ಒಟ್ಟು 600 ಹುದ್ದೆಗಳು ಖಾಲಿ ಇದ್ದು, ಆಸಕ್ತರು ಆನ್‌ಲೈನ್‌ನ ಮೂಲಕ ಅರ್ಜಿ ಸಲ್ಲಿಸುವುದಕ್ಕೆ ಅವಕಾಶ ಇದೆ.

ಯಾರೆಲ್ಲ ಅರ್ಜಿ ಸಲ್ಲಿಸಬಹುದು: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಆಸಕ್ತಿ ಇರುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಸ್ನಾತಕೋತ್ತರ ಪದವಿ (ಉತ್ತೀರ್ಣ ಅಥವಾ ಹಾಜರಾಗಿರಬೇಕು) ಹೊಂದಿರಬೇಕು. ವಯಸ್ಸಿನ ಮಿತಿಯು ಏಪ್ರಿಲ್ 1, 2024ಕ್ಕೆ ಅನ್ವಯವಾಗುವಂತೆ 21 ರಿಂದ 30 ವರ್ಷಗಳ ನಡುವೆ ಇರಬೇಕು. ಇನ್ನು ಸರ್ಕಾರಿ ಮಾನದಂಡಗಳ ಪ್ರಕಾರ ಸಡಿಲಿಕೆ ಇರಲಿದೆ ಎಂದು ಹೇಳಲಾಗಿದೆ.
ಮೂರು ಹಂತದಲ್ಲಿ SBI PO 2025 ಆಯ್ಕೆ ಪ್ರಕ್ರಿಯೆ
SBI PO 2025ರ ಆಯ್ಕೆ ಪ್ರಕ್ರಿಯೆಯು ಮೂರು ಹಂತಗಳಲ್ಲಿ ಇರಲಿದೆ. ಮೊದಲ ಎರಡು ಹಂತಗಳಲ್ಲಿ ಮುಖ್ಯ ಪರೀಕ್ಷೆಗಳು ಇರಲಿವೆ.
ಮೊದಲ ಹಂತ: ಪ್ರಾಥಮಿಕ ಪರೀಕ್ಷೆ: ಪಾಸ್ ಆಗುವ ಅಭ್ಯರ್ಥಿಗಳು ಮುಂದಿನ ಹಂತಕ್ಕೆ ಹೋಗಲಿದ್ದಾರೆ
ಎರಡನೇ ಹಂತ: ಮುಖ್ಯ ಪರೀಕ್ಷೆ: ಇದರಲ್ಲಿ ಪಾಸ್ ಆಗುವವರು ಮೂರನೇ ಹಂತಕ್ಕೆ ಆಯ್ಕೆಯಾಗಲಿದ್ದಾರೆ.
ಮೂರನೇ ಹಾಗೂ ಅಂತಿಮ ಹಂತ: ಇದರಲ್ಲಿ ವಿವಿಧ ಪರೀಕ್ಷೆ ಹಾಗೂ ಸಂದರ್ಶನ ನಡೆಯಲಿದೆ.
SBI PO 2025ಕ್ಕೆ ಅರ್ಜಿ ಶುಲ್ಕ ವಿವರ
* ಸಾಮಾನ್ಯ, ಒಬಿಸಿ ಹಾಗೂ ಇಡಬ್ಲ್ಯೂಸಿ ವರ್ಗಕ್ಕೆ: 750 ರೂಪಾಯಿ ಇರಲಿದೆ
* ಎಸ್‌ಸಿ, ಎಸ್‌ಟಿ ಹಾಗೂ ವಿಶೇಷ ಚೇತನರಿಗೆ: ಯಾವುದೇ ಶುಲ್ಕವಿಲ್ಲ.
SBI PO 2025 ಪರೀಕ್ಷಾ ವೇಳಾಪಟ್ಟಿ ವಿವರ ಈ ರೀತಿ ಇದೆ.
* ಪೂರ್ವಭಾವಿ ಪರೀಕ್ಷೆ: ಮಾರ್ಚ್ 8 ರಿಂದ ಮಾರ್ಚ್ 15 (2025)ರ ವರೆಗೆ
* ಮುಖ್ಯ ಪರೀಕ್ಷೆ: ಏಪ್ರಿಲ್/ಮೇ 2025
ಜ್ಯೂನಿಯರ್ ಅಸೋಸಿಯೇಟ್ ಹುದ್ದೆಗೆ ಅರ್ಜಿ ಆಹ್ವಾನ
ಭಾರತೀಯ ಸ್ಟೇಟ್ ಬ್ಯಾಂಕ್ (SBI) ನಲ್ಲಿ ಸಹಾಯಕ ಸಿಬ್ಬಂದಿ (ಕ್ಲರ್ಕ್) ವರ್ಗದಲ್ಲಿ ಜ್ಯೂನಿಯರ್ ಅಸೋಸಿಯೇಟ್ (ಕಸ್ಟಮರ್ ಸಪೋರ್ಟ್ ಮತ್ತು ಸೇಲ್ಸ್) ಗಳ ನೇಮಕಾತಿಗೆ ಸಂಬಂಧಿಸಿದಂತೆ ಅರ್ಜಿ ಆಹ್ವಾನಿಸಲಾಗಿದೆ. ಈ ಸಂಬಂಧ ಎಸ್‌ಬಿಐ ಪ್ರಕರಣೆ ಹೊರಡಿಸಿದ್ದು, ಖಾಲಿ ಹುದ್ದೆಗಳ ಸಂಖ್ಯೆ ವಿವರವನ್ನು ಸಹ ಹಂಚಿಕೊಂಡಿದೆ. ನಿಯಮಿತ 13,735 + ಬಾಕಿ ಹುದ್ದೆ: 456 ಆಗಿದೆ. ಈ ಖಾಲಿ ಹುದ್ದೆಗಳಿಗೆ ಆಸಕ್ತರು ಅರ್ಜಿ ಸಲ್ಲಿಸಬಹುದು ಎಂದು ಹೇಳಲಾಗಿದೆ. ಇದಕ್ಕೆ ಅರ್ಜಿ ಸಲ್ಲಿಸುವುದು ಹೇಗೆ, ಕೊನೆಯ ದಿನಾಂಕ ಯಾವಾಗ ಎನ್ನುವ ಸಂಪೂರ್ಣ ವಿವರ ಇಲ್ಲಿದೆ.
ಭಾರತೀಯ ಸ್ಟೇಟ್ ಬ್ಯಾಂಕ್ ಉದ್ಯೋಗ ನಿರೀಕ್ಷೆಯಲ್ಲಿ ಇರುವವರಿಗೆ ಭರ್ಜರಿ ನ್ಯೂಸ್ ಕೊಟ್ಟಿದೆ. ನಿಯಮಿತ ಆಧಾರದಲ್ಲಿ ಜ್ಯೂನಿಯರ್ ಅಸೋಸಿಯೇಟ್ (ಕಸ್ಟಮರ್ ನಪೋರ್ಟ್ ಮತ್ತು ನೇಲ್ಸ್)ಗಳ ನೇಮಕಾತಿಗಾಗಿ ಆಸಕ್ತರಿಂದ ಅರ್ಜಿ ಆಹ್ವಾನಿಸಲಾಗಿದೆ. ಆನ್‌ಲೈನ್‌ನ ಮೂಲಕ ಅರ್ಜಿ ಸಲ್ಲಿಸುವುದಕ್ಕೆ ಅವಕಾಶ ಇದೆ. ಆನ್‌ಲೈನ್ ಅರ್ಜಿ ಸಲ್ಲಿಸುವ ಮತ್ತು ಶುಲ್ಕಪಾವತಿಸುವುದಕ್ಕೆ 17.12.2024 ರಿಂದ 07.01.2025 ವರೆಗೆ ಅವಕಾಶ ಇರಲಿದೆ ಎಂದು ಎಸ್‌ಬಿಐ ಹೇಳಿದೆ.
ವಿವರ ಪರಿಶೀಲನೆ ಮಾಡುವುದು ಹೇಗೆ: ಎಸ್‌ಬಿಐನಲ್ಲಿ ಖಾಲಿ ಇರುವ ಉದ್ಯೋಗಗಳಿಗೆ ಆನ್‌ಲೈನ್‌ನಲ್ಲಿ ಅರ್ಜಿಗಳನ್ನು ಸಲ್ಲಿಸಲು ಮತ್ತು ಆನ್‌ಲೈನ್‌ನಲ್ಲಿ ಶುಲ್ಕದ ಪಾವತಿ ಮಾಡುವುದು. ಯಾರೆಲ್ಲ ಇದಕ್ಕೆ ಅರ್ಹರಾಗಿದ್ದಾರೆ ಹಾಗೂ ಇದಕ್ಕೆ ಇರುವ ಪ್ರಮುಖ ಮಾನದಂಡಗಳು. ವಯಸ್ಸು ಹಾಗೂ ವಿದ್ಯಾರ್ಹತೆ ಸೇರಿದಂತೆ ಅವಶ್ಯಕವಾದ ಶುಲ್ಕ ಮತ್ತು ಇತರ ವಿವರಗಳು ಬ್ಯಾಂಕ್‌ನ ಅಧಿಕೃತ ವೆಬ್‌ಸೈಟ್‌ನಲ್ಲಿ https://bank.sbi/ ಪ್ರಕಟಿಸಿರುವುದಾಗಿ ಎಸ್‌ಬಿಐ ಹೇಳಿದೆ. ಬ್ಯಾಂಕ್‌ನ ವೆಬ್‌ಸೈಟ್‌ನಲ್ಲಿ ಲಭ್ಯವಿದೆ https://sbi.co.in/web/careers ನಲ್ಲೂ ಮಾಹಿತಿ ನೀಡಿರುವುದಾಗಿ ಹೇಳಿದೆ.
-
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ












Click it and Unblock the Notifications