ಎಸ್ ಬಿಐನಲ್ಲಿ 2313 ಪ್ರೊಬೆಷನರಿ ಅಧಿಕಾರಿ ಹುದ್ದೆ, ಮಾ.6 ಕೊನೆ ದಿನ

Posted By: Ramesh
Subscribe to Oneindia Kannada

ಬೆಂಗಳೂರು. ಫೆಬ್ರವರಿ. 09 : ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ 2313 ಪ್ರೊಬೆಷನರಿ ಅಧಿಕಾರಿ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ.

ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ನಿಗದಿತ ದಿನಾಂಕ ಮಾರ್ಚ್ 6ರೊಳಗೆ ಅರ್ಜಿ ಸಲ್ಲಿಸಬಹುದಾಗಿದೆ. ಫೆಬ್ರವರಿ 7ರಿಂದ ಅರ್ಜಿ ಸಲ್ಲಿಸುವ ಪ್ರಕ್ರಿಯೆ ಆರಂಭವಾಗಿದೆ.

SBI recruitment 2017 Apply For 2313 Probation Officers posts

ಹುದ್ದೆ: ಪ್ರೊಬೆಷನರಿ ಅಧಿಕಾರಿ(2313)
ಸ್ಥಳ: ಭಾರತದಾದ್ಯಂತ
ವೇತನ: 23700 ರಿಂದ 42020 ರು.(ತಿಂಗಳಿಗೆ)

ವಯೋಮಿತಿ: 21 ವಯಸ್ಸಿಗಿಂತ ಮೇಲೆ 30 ವರ್ಷದೊಳಗಿರಬೇಕು. ಎಸ್ ಸಿ. ಎಸ್ಟಿ ಅಭ್ಯರ್ಥಿಗಳಿಗೆ 5 ವರ್ಷ ವಿನಾಯಿತಿ ಇರುತ್ತದೆ. ಇತರೆ ಹಿಂದುಳಿದ ವರ್ಗಗಳ ಅಭ್ಯರ್ಥಿಗಳಿಗೆ 3 ವರ್ಷಗಳ ವಿನಾಯಿತಿ ನೀಡಲಾಗಿದೆ.

ವಿದ್ಯಾರ್ಹತೆ: ಕೇಂದ್ರ ಸರ್ಕಾರದಿಂದ ಅಥವಾ ರಾಜ್ಯ ಸರ್ಕಾರಗಳ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪದವಿ ಪಡೆದ ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ.

ಆಯ್ಕೆ ವಿಧಾನ: ಮೊದಲಿಗೆ ಪ್ರಾಥಮಿಕ ಪರೀಕ್ಷೆಯನ್ನು ನಡೆಸಲಾಗುತ್ತಿದ್ದು ಅದರಲ್ಲಿ ಅರ್ಹತೆ ಪಡೆದ ಅಭ್ಯರ್ಥಿಗಳು ಮತ್ತೊಂದು ಮುಖ್ಯ ಪರೀಕ್ಷೆ ಬರೆಯಬೇಕಾಗುತ್ತದೆ. ಈ ಪರೀಕ್ಷೆಯಲ್ಲಿ ಪಾಸಾದ ಅಭ್ಯರ್ಥಿಗಳಿಗೆ ವೈಯಕ್ತಿ ಸಂದರ್ಶನ ಇರುತ್ತದೆ.

ಅರ್ಜಿ ಶುಲ್ಕ: ಎಸ್ ಸಿ/ ಎಸ್ಟಿ ಅಭ್ಯರ್ಥಿಗಳಿಗೆ 100ರು ಅರ್ಜಿ ಶುಲ್ಕ ಮತ್ತು ಇತರೆ ಹಿಂದುಳಿದ ವರ್ಗ, ಸಾಮಾನ್ಯ ಅಭ್ಯರ್ಥಿಗಳಿಗೆ 600 ರು ನಿಗದಿ ಮಾಡಲಾಗಿದೆ. ಮಾಸ್ಟರ್ / ವೀಸಾ ಡೆಬಿಟ್, ಕ್ರೆಡಿಟ್ ಕಾರ್ಡ್ ಅಥವಾ ಇಂಟರ್ ನೆಟ್ ಬ್ಯಾಂಕಿಂಗ್ ಮೂಲಕ ಶುಲ್ಕವನ್ನು ಪಾವತಿಸಬಹುದು.

ಇನ್ನಷ್ಟು ಹೆಚ್ಚಿನ ಮಾಹಿತಿಗಾಗಿ ಇಲ್ಲಿ ಕ್ಲಿಕ್ಕಿಸಿ.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

English summary
State Bank of India released new notification on their official website for the recruitment of total 2313 (two thousand three hundred thirteen) Probationary Officers (POs) vacancy. Job seekers should apply from 7th February 2017 to 6th March 2017.
Please Wait while comments are loading...