31 ಹುದ್ದೆಗಳ ಭರ್ತಿಗೆ ಅರ್ಜಿಗಳನ್ನು ಆಹ್ವಾನಿಸಿದ ಎಸ್‌ಬಿಐ
ಬೆಂಗಳೂರು, ಜನವರಿ 10 : ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ 31 ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಗಳನ್ನು ಆಹ್ವಾನಿಸಿದೆ. ಆನ್‌ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಲು 31 ಜನವರಿ 2019 ಕೊನೆಯ ದಿನವಾಗಿದೆ.
ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (ಎಸ್‌ಬಿಐ) 31 ಡೆಪ್ಯೂಟಿ ಮ್ಯಾನೇಜರ್, ಎಕ್ಸಿಕ್ಯುಟೀವ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಗಳನ್ನು ಆಹ್ವಾನಿಸಿದೆ. ಆಯ್ಕೆಯಾದ ಅಭ್ಯರ್ಥಿಗಳು ದೇಶದ ಯಾವುದೇ ನಗರದಲ್ಲಿ ಕೆಲಸ ಮಾಡಬೇಕಿದೆ.
ಡೆಪ್ಯೂಟಿ ಮ್ಯಾನೇಜರ್ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು Statistics ನಲ್ಲಿ ಸ್ನಾತಕೋತ್ತರ ಪದವಿ ಪಡೆದಿರಬೇಕು ಅಥವ ಡಾಟಾ ಅನಲಿಸ್ಟಿಕ್ ಅನ್ನು ಶೇ 60ರಷ್ಟು ಅಂಕಗಳೊಂದಿಗೆ ಪೂರ್ಣಗೊಳಸಿರಬೇಕು. ಎರಡು ವರ್ಷದ ಪೂರ್ಣಾವಧಿ ತತ್ಸಮಾನ ಕೋರ್ಸ್‌ಗಳನ್ನು ವ್ಯಾಸಂಗ ಮಾಡಿರಬೇಕು.

ಯಾವುದೇ ಕೋರ್ಸ್‌ಗಳನ್ನು ಕಾರೆಸ್ಪಡೆಂಟ್ ಆಗಿ ಪೂರ್ಣಗೊಳಿಸಿದವರು ಅರ್ಜಿ ಹಾಕುವಂತಿಲ್ಲ. ಕೋರ್ಸ್ ಪೂರ್ಣಗೊಳಿಸಿದ ಸಂಸ್ಥೆಗಳು ಸರ್ಕಾರ ಅಥವ ಸರ್ಕಾರದಿಂದ ಮಾನ್ಯತೆ ಪಡೆದ ಸಂಸ್ಥೆಯಿಂದ ಮಾನ್ಯತೆ ಪಡೆದಿರಬೇಕು.
ಎಕ್ಸಿಕ್ಯುಟೀವ್ ಹುದ್ದೆಗೆ ಅರ್ಜಿ ಸಲ್ಲಿಸುವವರು ಚಾರ್ಟಡ್ ಅಕೌಂಟೆಂಟ್ ವ್ಯಾಸಂಗ ಮಾಡಿರಬೇಕು.
ವಯೋಮಿತಿ : ಡೆಪ್ಯೂಟಿ ಮ್ಯಾನೇಜರ್ ಹುದ್ದೆಗೆ 35 ರಿಂದ 42 ವರ್ಷ, ಎಕ್ಸಿಕ್ಯುಟೀವ್ ಹುದ್ದೆಗೆ 22 ರಿಂದ 30 ವರ್ಷದ ವಯೋಮಿತಿ ನಿಗದಿ ಮಾಡಲಾಗಿದೆ. (1 ಡಿಸೆಂಬರ್ 2018ಕ್ಕೆ ಅನ್ವಯವಾಗುವಂತೆ).
ವೇತನ ಶ್ರೇಣಿ : ಡೆಪ್ಯೂಟಿ ಮ್ಯಾನೇಜರ್ 31705-45950 ರೂ.ಪ್ರತಿ ತಿಂಗಳು.
ಅರ್ಜಿ ಶುಲ್ಕ : ಸಾಮಾನ್ಯ/ಓಬಿಸಿ ಅಭ್ಯರ್ಥಿಗಳಿಗೆ 600 ರೂ., ಎಸ್‌ಸಿ/ಎಸ್‌ಟಿ/ಅಂಗವಿಕಲ ಅಭ್ಯರ್ಥಿಗಳಿಗೆ 100 ರೂ.. ಶಾರ್ಟ್ ಲಿಸ್ಟ್ ಮತ್ತು ಸಂದರ್ಶನದ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.
ಹೆಚ್ಚಿನ ಮಾಹಿತಿಗಾಗಿ ಇಲ್ಲಿ ಕ್ಲಿಕ್ ಮಾಡಿ












Click it and Unblock the Notifications