ಎಸ್ ಬಿಐನಲ್ಲಿ 56 ಮೆಡಿಕಲ್ ಆಫೀಸರ್ ಹುದ್ದೆಗಳಿಗೆ ಅರ್ಜಿ ಆಹ್ವಾನ
ಬೆಂಗಳೂರು, ಆಗಸ್ಟ್ 27: ಸರ್ಕಾರಿ ಸ್ವಾಮ್ಯದ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ(ಎಸ್ ಬಿಐ) 2019ನೇ ಸಾಲಿನ ನೇಮಕಾತಿ ಮುಂದುವರೆಸಿದೆ. 56 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿ ಅಧಿಕೃತ ವೆಬ್ ತಾಣದಲ್ಲಿ ಪ್ರಕಟಣೆ ಹೊರಡಿಸಿದೆ. ಬ್ಯಾಂಕ್ ಮೆಡಿಕಲ್ ಆಫೀಸರ್ ಸೇರಿದಂತೆ ವಿವಿಧ ಹುದ್ದೆಗಳಿಗೆ ಅರ್ಜಿ ಹಾಕಲು ಬಯಸುವ ಅರ್ಹ, ಆಸಕ್ತ ಅಭ್ಯರ್ಥಿಗಳು ಸೆಪ್ಟೆಂಬರ್ 19ರೊಳಗೆ ಅರ್ಜಿ ಸಲ್ಲಿಸಬಹುದು.
ಸಂಸ್ಥೆ ಹೆಸರು: ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ
ಹುದ್ದೆ ಹೆಸರು: ಬ್ಯಾಂಕ್ ಮೆಡಿಕಲ್ ಆಫೀಸರ್.
ಒಟ್ಟು ಹುದ್ದೆ : 56
ಉದ್ಯೋಗ ಸ್ಥಳ: ಭಾರತದೆಲ್ಲೆಡೆ
ಅರ್ಜಿ ಸಲ್ಲಿಸಲು ಕೊನೆ ದಿನಾಂಕ : 19.09.2019
ವಿದ್ಯಾರ್ಹತೆ:
ಬ್ಯಾಂಕಿಂಗ್ ಮೆಡಿಕಲ್ ಆಫೀಸರ್ : ಸರ್ಕಾರದಿಂದ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಎಂಬಿಬಿಎಸ್ ಹಾಗೂ ಮೆಡಿಕಲ್ ಕೌನ್ಸಿಲ್ ಆಫ್ ಇಂಡಿಯಾದಿಂದ ಪ್ರಮಾಣ ಪತ್ರ.
ವಯೋಮಿತಿ: ಬ್ಯಾಂಕ್ ಮೆಡಿಕಲ್ ಆಫೀಸರ್: 35 ವರ್ಷ (ಮಾರ್ಚ್ 31, 2019ರಂತೆ)
ನೇಮಕಾತಿ ಪ್ರಕ್ರಿಯೆ: ವೈಯಕ್ತಿಕ ಸಂದರ್ಶನ.
ಅರ್ಜಿ ಶುಲ್ಕ;
ಸಾಮಾನ್ಯ/ ಒಬಿಸಿ: 750 ರು
ಎಸ್ ಸಿ/ ಎಸ್ಟಿ/ ಮಾಜಿ ಯೋಧ: 125 ರು
ಪ್ರಮುಖ ದಿನಾಂಕ
ಅರ್ಜಿ ಸಲ್ಲಿಕೆ ಆರಂಭ ದಿನ : 27.08.2019
ಅರ್ಜಿ ಸಲ್ಲಿಸಲು ಕೊನೆ ದಿನಾಂಕ : 19.09.2019
ಅರ್ಜಿ ಸಲ್ಲಿಸುವ ವಿಧಾನ ಹಾಗೂ ಇನ್ನಿತರ ಮಾಹಿತಿಗಾಗಿ ಕ್ಲಿಕ್ ಮಾಡಿ.