ಎಸ್ ಬಿಐನಲ್ಲಿ 65 ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

ಬೆಂಗಳೂರು, ಮೇ 21: ಸರ್ಕಾರಿ ಸ್ವಾಮ್ಯದ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ(ಎಸ್ ಬಿಐ) 2019ನೇ ಸಾಲಿನ ನೇಮಕಾತಿ ಮುಂದುವರೆಸಿದೆ. 65 ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿ ಅಧಿಕೃತ ವೆಬ್ ತಾಣದಲ್ಲಿ ಪ್ರಕಟಣೆ ಹೊರಡಿಸಿದೆ. ಬ್ಯಾಂಕ್ ಮೆಡಿಕಲ್ ಆಫೀಸರ್ ಸೇರಿದಂತೆ ವಿವಿಧ ಹುದ್ದೆಗಳಿಗೆ ಅರ್ಜಿ ಹಾಕಲು ಬಯಸುವ ಅರ್ಹ, ಆಸಕ್ತ ಅಭ್ಯರ್ಥಿಗಳು ಜೂನ್ 12ರೊಳಗೆ ಅರ್ಜಿ ಸಲ್ಲಿಸಬಹುದು.

ಸಂಸ್ಥೆ ಹೆಸರು: ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ
ಹುದ್ದೆ ಹೆಸರು: ಬ್ಯಾಂಕ್ ಮೆಡಿಕಲ್ ಆಫೀಸರ್, ಮ್ಯಾನೇಜರ್ ಅನಾಲಿಸ್ಟ್, ಅಡ್ವೈಸರ್ ಫಾರ್ ಫ್ರಾಡ್ ಮ್ಯಾನೇಜ್ಮೆಂಟ್.
ಒಟ್ಟು ಹುದ್ದೆ : 65
ಉದ್ಯೋಗ ಸ್ಥಳ: ಭಾರತದೆಲ್ಲೆಡೆ
ಅರ್ಜಿ ಸಲ್ಲಿಸಲು ಕೊನೆ ದಿನಾಂಕ : 12.06.2019

SBI recruitment 2019 apply for 65 Various Post

ವಿದ್ಯಾರ್ಹತೆ:
ಬ್ಯಾಂಕಿಂಗ್ ಮೆಡಿಕಲ್ ಆಫೀಸರ್ : ಸರ್ಕಾರದಿಂದ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಎಂಬಿಬಿಎಸ್ ಹಾಗೂ ಮೆಡಿಕಲ್ ಕೌನ್ಸಿಲ್ ಆಫ್ ಇಂಡಿಯಾದಿಂದ ಪ್ರಮಾಣ ಪತ್ರ.
ಮ್ಯಾನೇಜರ್ ಅನಾಲಿಸ್ಟ್: ಸಿಎ/ಎಂಬಿಎ ಅಥವಾ ತತ್ಸಮಾನ, ಪಿಜಿಡಿಎಂ
ಅಡ್ವೈಸರ್ ಫಾರ್ ಫ್ರಾಡ್ ಮ್ಯಾನೇಜ್ಮೆಂಟ್: ಐಪಿಎಸ್ ಅಧಿಕಾರಿಯಾಗಿ ನಿವೃತ್ತರಾಗಿರಬೇಕು/ ಡಿಎಸ್ ಪಿ ಅಥವಾ ಗುಪ್ತಚರ ಇಲಾಖೆಯಲ್ಲಿ ಕಾರ್ಯ ನಿರ್ವಹಿಸಿದ ಅನುಭವವಿರಬೇಕು. ಸೈಬರ್ ಕ್ರೈಂಬಗ್ಗೆ ತಿಳಿದಿರಬೇಕು.

ವಯೋಮಿತಿ:
ಬ್ಯಾಂಕ್ ಮೆಡಿಕಲ್ ಆಫೀಸರ್: 35 ವರ್ಷ (ಮಾರ್ಚ್ 31, 2019ರಂತೆ)
ಮ್ಯಾನೇಜರ್ ಅನಾಲಿಸ್ಟ್: 27 ರಿಂದ 35 ವರ್ಷ (30 ಏಪ್ರಿಲ್ 2019)
ಅಡ್ವೈಸರ್ ಫಾರ್ ಫ್ರಾಡ್ ಮ್ಯಾನೇಜ್ಮೆಂಟ್ : 63 ವರ್ಷ (31 ಮೇ 2019)

ನೇಮಕಾತಿ ಪ್ರಕ್ರಿಯೆ: ವೈಯಕ್ತಿಕ ಸಂದರ್ಶನ.

ಅರ್ಜಿ ಶುಲ್ಕ;
ಸಾಮಾನ್ಯ/ ಒಬಿಸಿ: 750 ರು
ಎಸ್ ಸಿ/ ಎಸ್ಟಿ/ ಮಾಜಿ ಯೋಧ: 125 ರು

ಪ್ರಮುಖ ದಿನಾಂಕ
ಅರ್ಜಿ ಸಲ್ಲಿಕೆ ಆರಂಭ ದಿನ : 21.05.2019
ಅರ್ಜಿ ಸಲ್ಲಿಸಲು ಕೊನೆ ದಿನಾಂಕ : 12.06.2019

ಅರ್ಜಿ ಸಲ್ಲಿಸುವ ವಿಧಾನ ಹಾಗೂ ಇನ್ನಿತರ ಮಾಹಿತಿಗಾಗಿ ಕ್ಲಿಕ್ ಮಾಡಿ

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+