ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ 67 ಹುದ್ದೆಗಳಿಗೆ ಅರ್ಜಿ ಆಹ್ವಾನ
ನವದೆಹಲಿ, ಅಕ್ಟೋಬರ್ 16: ಸರ್ಕಾರಿ ಸ್ವಾಮ್ಯದ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ(ಎಸ್ ಬಿಐ) 2019ನೇ ಸಾಲಿನ ನೇಮಕಾತಿ ಮುಂದುವರೆಸಿದೆ. 67 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿ ಅಧಿಕೃತ ವೆಬ್ ತಾಣದಲ್ಲಿ ಪ್ರಕಟಣೆ ಹೊರಡಿಸಿದೆ. ಮ್ಯಾನೇಜರ್ ಸೇರಿದಂತೆ ವಿವಿಧ ಹುದ್ದೆಗಳಿಗೆ ಅರ್ಜಿ ಹಾಕಲು ಬಯಸುವ ಅರ್ಹ, ಆಸಕ್ತ ಅಭ್ಯರ್ಥಿಗಳು ನವೆಂಬರ್ 16ರೊಳಗೆ ಅರ್ಜಿ ಸಲ್ಲಿಸಬಹುದು.
ಸಂಸ್ಥೆ ಹೆಸರು: ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ
ಹುದ್ದೆ ಹೆಸರು: ಮ್ಯಾನೇಜರ್, ಹಿರಿಯ ವಿಶೇಷ ಎಕ್ಸಿಕ್ಯೂಟಿವ್
ಒಟ್ಟು ಹುದ್ದೆ: 67

ಉದ್ಯೋಗ ಸ್ಥಳ: ಭಾರತದೆಲ್ಲೆಡೆ
ಅರ್ಜಿ ಸಲ್ಲಿಸಲು ಕೊನೆ ದಿನಾಂಕ: 16.11.2019
ವಿದ್ಯಾರ್ಹತೆ: ಸರ್ಕಾರದಿಂದ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಸಿಎ, ಎಂಬಿಎ, ಪಿಜಿಡಿಎಂ, ಪದವಿ, ಬಿಇ/ ಬಿ.ಟೆಕ್, ಎಂಸಿಎ, ಎಂಎಸ್ ಸಿ, ಪಿಜಿ ಡಿಪ್ಲೋಮಾ.
ವಯೋಮಿತಿ: ಕನಿಷ್ಠ 30 ವರ್ಷ ಗರಿಷ್ಠ 37 ವರ್ಷ.
ನೇಮಕಾತಿ ಪ್ರಕ್ರಿಯೆ: ವೈಯಕ್ತಿಕ ಸಂದರ್ಶನ.
ಅರ್ಜಿ ಶುಲ್ಕ;
ಸಾಮಾನ್ಯ/ ಒಬಿಸಿ: 750 ರು
ಎಸ್ ಸಿ/ ಎಸ್ಟಿ/ ಮಾಜಿ ಯೋಧ: ಯಾವುದೇ ಶುಲ್ಕವಿಲ್ಲ
ಪ್ರಮುಖ ದಿನಾಂಕ:
ಅರ್ಜಿ ಸಲ್ಲಿಕೆ ಆರಂಭ ದಿನ :15.10.2019
ಅರ್ಜಿ ಸಲ್ಲಿಸಲು ಕೊನೆ ದಿನಾಂಕ : 16.11.2019
ಅರ್ಜಿ ಸಲ್ಲಿಸುವ ವಿಧಾನ ಹಾಗೂ ಇನ್ನಿತರ ಮಾಹಿತಿಗಾಗಿ ಕ್ಲಿಕ್ ಮಾಡಿ.











Click it and Unblock the Notifications