8904 ಹುದ್ದೆಗಳ ಭರ್ತಿಗೆ ಅರ್ಜಿ ಕರೆದ ಎಸ್‌ಬಿಐ

ಬೆಂಗಳೂರು, ಏಪ್ರಿಲ್ 12 : ಎಸ್‌ಬಿಐ 8904 ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಗಳನ್ನು ಆಹ್ವಾನಿಸಿದೆ. ಆಸಕ್ತರು ಆನ್‌ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಲು 3/5/2019 ಕೊನೆಯ ದಿನವಾಗಿದೆ.

ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಜ್ಯೂನಿಯರ್ ಅಸೋಸಿಯೇಟ್ ಹುದ್ದೆಗಳನ್ನು ಭರ್ತಿ ಮಾಡುತ್ತಿದೆ. ಆಯ್ಕೆಯಾದ ಅಭ್ಯರ್ಥಿಗಳು ದೇಶದ ಯಾವುದೇ ನಗರದಲ್ಲಿ ಕೆಲಸ ಮಾಡಬೇಕಿದೆ.

ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ಯಾವುದೇ ವಿಶ್ವವಿದ್ಯಾಲಯದಿಂದ ಪದವಿ ಪಡೆದಿರಬೇಕು ಅಥವ ತತ್ಸಮಾನ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಕೇಂದ್ರ ಸರ್ಕಾರದಿಂದ ಮಾನ್ಯತೆ ಪಡೆದ ಸಂಸ್ಥೆಯಿಂದ ಪೂರ್ಣಗೊಳಿಸಿರಬೇಕು.

SBI recruitment 2019 apply for 8904 Junior Associate Posts

ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ 28 ವರ್ಷದ ವಯೋಮಿತಿ ನಿಗದಿ ಮಾಡಲಾಗಿದೆ. 1 ಏಪ್ರಿಲ್ 2019ಕ್ಕೆ ಅನ್ವಯವಾಗುವಂತೆ.

ಅಭ್ಯರ್ಥಿಗಳನ್ನು ಪ್ರಾಥಮಿಕ ಮತ್ತು ಮುಖ್ಯ ಪರೀಕ್ಷೆಗಳ ಮೂಲಕ ಆಯ್ಕೆ ಮಾಡಲಾಗುತ್ತದೆ.

ಅರ್ಜಿ ಶುಲ್ಕ : ಎಸ್‌ಸಿ/ಎಸ್‌ಟಿ/ಅಂಗವಿಕಲ/ಮಾಜಿ ಸೈನಿಕರಿಗೆ ಅಭ್ಯರ್ಥಿ 125 ರೂ.ಗಳು. ಸಾಮಾನ್ಯ/ಓಬಿಸಿ/ಇತರರಿಗೆ 750 ರೂ.ಗಳು.

ಪ್ರಮುಖ ದಿನಾಂಕಗಳು : 12/4/2019 ರಿಂದ 3/05/2019ರ ತನಕ ಅರ್ಜಿಗಳನ್ನು ಸಲ್ಲಿಸಬಹುದು.

ಹೆಚ್ಚಿನ ಮಾಹಿತಿಗಾಗಿ ಇಲ್ಲಿ ಕ್ಲಿಕ್ ಮಾಡಿ

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+