ಎಸ್ ಬಿಐ ನೇಮಕಾತಿ 2020: 446 ಹುದ್ದೆಗಳಿಗೆ ಆರ್ಜಿ ಆಹ್ವಾನ
ಬೆಂಗಳೂರು, ಜೂನ್ 23: ಸರ್ಕಾರಿ ಸ್ವಾಮ್ಯದ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ(ಎಸ್ ಬಿಐ) 2020ನೇ ಸಾಲಿನ ನೇಮಕಾತಿ ಮುಂದುವರೆಸಿದೆ. 446 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿ ಅಧಿಕೃತ ವೆಬ್ ತಾಣದಲ್ಲಿ ಪ್ರಕಟಣೆ ಹೊರಡಿಸಿದೆ. SCO ಹುದ್ದೆಗಳಿಗೆ ಅರ್ಜಿ ಹಾಕಲು ಬಯಸುವ ಅರ್ಹ, ಆಸಕ್ತ ಅಭ್ಯರ್ಥಿಗಳು ಜುಲೈ 13ರೊಳಗೆ ಅರ್ಜಿ ಸಲ್ಲಿಸಬಹುದು.
ಸಂಸ್ಥೆ ಹೆಸರು: ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ
ಹುದ್ದೆ ಹೆಸರು: SCO, Executive
ಒಟ್ಟು ಹುದ್ದೆ: 446
ಉದ್ಯೋಗ ಸ್ಥಳ: ಭಾರತದೆಲ್ಲೆಡೆ
ಅರ್ಜಿ ಸಲ್ಲಿಸಲು ಕೊನೆ ದಿನಾಂಕ: ಜುಲೈ 13, 2020
ವಿದ್ಯಾರ್ಹತೆ: ಸರ್ಕಾರದಿಂದ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪದವಿ, ಎಂಬಿಎ, ಸಿಎ, ಪಿಜಿಡಿಎಂ ಅಥವಾ ತತ್ಸಮಾನ ಅರ್ಹತೆ,

ವಯೋಮಿತಿ: ಎಸ್ಬಿಐ ಪ್ರಕಟಣೆಯಂತೆ...
ಸಾಮಾನ್ಯ ಹಾಗೂ ಮೀಸಲಾತಿ ರಹಿತ ಅಭ್ಯರ್ಥಿಗಳಿಗೆ ಕನಿಷ್ಠ 20 ವರ್ಷ ಗರಿಷ್ಠ 28 ವರ್ಷ(01.01.2020ರಂತೆ). ವಿಕಲ ಚೇತನರಿಗೆ 10 ವರ್ಷ ,ಎಸ್ ಸಿ, ಎಸ್ಟಿ ಅಭ್ಯರ್ಥಿಗಳಿಗೆ 5 ವರ್ಷ, ಒಬಿಸಿ ಅಭ್ಯರ್ಥಿಗಳಿಗೆ 03 ವರ್ಷ ವಯೋಮಿತಿಯಲ್ಲಿ ವಿನಾಯಿತಿ ಇರುತ್ತದೆ.
ನೇಮಕಾತಿ ಪ್ರಕ್ರಿಯೆ: ಪ್ರಾಥಮಿಕ ಪರೀಕ್ಷೆ ಹಾಗೂ ಮುಖ್ಯ ಪರೀಕ್ಷೆ.
ಅರ್ಜಿ ಶುಲ್ಕ:
ಸಾಮಾನ್ಯ/ ಒಬಿಸಿ: 750 ರು
ಎಸ್ ಸಿ/ ಎಸ್ಟಿ/ ಮಾಜಿ ಯೋಧ: ಯಾವುದೇ ಶುಲ್ಕವಿಲ್ಲ
ಪ್ರಮುಖ ದಿನಾಂಕ:
ಆನ್ ಲೈನ್ ನಲ್ಲಿ ಅರ್ಜಿ ಸಲ್ಲಿಕೆ ಆರಂಭ ದಿನ : 23-06-2020
ಅರ್ಜಿ ಸಲ್ಲಿಸಲು ಕೊನೆ ದಿನಾಂಕ: 13-07-2020
ಅರ್ಜಿ ಸಲ್ಲಿಸುವ ವಿಧಾನ ಹಾಗೂ ಇನ್ನಿತರ ಮಾಹಿತಿಗಾಗಿ ಕ್ಲಿಕ್ ಮಾಡಿ












Click it and Unblock the Notifications