ಎಸ್ಬಿಐ 2020 ನೇಮಕಾತಿ: 8134 ಕ್ಲರ್ಕ್ ಹುದ್ದೆಗಳಿವೆ
ಬೆಂಗಳೂರು, ಜನವರಿ 03: ಸರ್ಕಾರಿ ಸ್ವಾಮ್ಯದ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ(ಎಸ್ ಬಿಐ) 2020ನೇ ಸಾಲಿನ ನೇಮಕಾತಿ ಆರಂಭಿಸಿದೆ. 8134 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿ ಅಧಿಕೃತ ವೆಬ್ ತಾಣದಲ್ಲಿ ಪ್ರಕಟಣೆ ಹೊರಡಿಸಿದೆ. ಕ್ಲರ್ಕ್ ಹುದ್ದೆಗಳಿಗೆ ಅರ್ಜಿ ಹಾಕಲು ಬಯಸುವ ಅರ್ಹ, ಆಸಕ್ತ ಅಭ್ಯರ್ಥಿಗಳು ಜನವರಿ 26ರೊಳಗೆ ಅರ್ಜಿ ಸಲ್ಲಿಸಬಹುದು.
ಸಂಸ್ಥೆ ಹೆಸರು: ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ
ಹುದ್ದೆ ಹೆಸರು: ಕ್ಲರ್ಕ್
ಒಟ್ಟು ಹುದ್ದೆ: 8134
ಉದ್ಯೋಗ ಸ್ಥಳ: ಭಾರತದೆಲ್ಲೆಡೆ
ಅರ್ಜಿ ಸಲ್ಲಿಸಲು ಕೊನೆ ದಿನಾಂಕ: 26.01.2020.
ವಿದ್ಯಾರ್ಹತೆ: ಸರ್ಕಾರದಿಂದ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪದವಿ ಅಥವಾ ತತ್ಸಮಾನ ಅರ್ಹತೆ.

ವಯೋಮಿತಿ:
ಸಾಮಾನ್ಯ ಹಾಗೂ ಮೀಸಲಾತಿ ರಹಿತ ಅಭ್ಯರ್ಥಿಗಳಿಗೆ ಕನಿಷ್ಠ 20 ವರ್ಷ ಗರಿಷ್ಠ 28 ವರ್ಷ(01.01.2020ರಂತೆ). ವಿಕಲ ಚೇತನರಿಗೆ 10 ವರ್ಷ ,ಎಸ್ ಸಿ, ಎಸ್ಟಿ ಅಭ್ಯರ್ಥಿಗಳಿಗೆ 5 ವರ್ಷ, ಒಬಿಸಿ ಅಭ್ಯರ್ಥಿಗಳಿಗೆ 03 ವರ್ಷ ವಯೋಮಿತಿಯಲ್ಲಿ ವಿನಾಯಿತಿ ಇರುತ್ತದೆ.
ನೇಮಕಾತಿ ಪ್ರಕ್ರಿಯೆ: ಪ್ರಾಥಮಿಕ ಪರೀಕ್ಷೆ ಹಾಗೂ ಮುಖ್ಯ ಪರೀಕ್ಷೆ.
ಅರ್ಜಿ ಶುಲ್ಕ:
ಸಾಮಾನ್ಯ/ ಒಬಿಸಿ: 750 ರು
ಎಸ್ ಸಿ/ ಎಸ್ಟಿ/ ಮಾಜಿ ಯೋಧ: ಯಾವುದೇ ಶುಲ್ಕವಿಲ್ಲ
ಪ್ರಮುಖ ದಿನಾಂಕ:
ಆನ್ ಲೈನ್ ನಲ್ಲಿ ಅರ್ಜಿ ಸಲ್ಲಿಕೆ ಆರಂಭ ದಿನ : 03.01.2020
ಅರ್ಜಿ ಸಲ್ಲಿಸಲು ಕೊನೆ ದಿನಾಂಕ : 26.01.2020
ಅರ್ಜಿ ಸಲ್ಲಿಸುವ ವಿಧಾನ ಹಾಗೂ ಇನ್ನಿತರ ಮಾಹಿತಿಗಾಗಿ ಕ್ಲಿಕ್ ಮಾಡಿ












Click it and Unblock the Notifications