• search
 • Live TV
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ 1226ಕ್ಕೂ ಅಧಿಕ ಹುದ್ದೆಗಳಿವೆ

|
Google Oneindia Kannada News

ಬೆಂಗಳೂರು, ಡಿಸೆಂಬರ್ 10: ಸರ್ಕಾರಿ ಸ್ವಾಮ್ಯದ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ(ಎಸ್ ಬಿಐ) 2021ನೇ ಸಾಲಿನ ನೇಮಕಾತಿ ಮುಂದುವರೆಸಿದೆ. ಈ ಕುರಿತಂತೆ ಅಧಿಕೃತ ವೆಬ್ ತಾಣದಲ್ಲಿ ಪ್ರಕಟಣೆ ಹೊರಡಿಸಿದೆ. ಸರ್ಕಲ್ ಆಧಾರಿತ ಅಧಿಕಾರಿ ಹುದ್ದೆಗಳಿಗೆ ಅರ್ಜಿ ಹಾಕಲು ಬಯಸುವ ಅರ್ಹ, ಆಸಕ್ತ ಅಭ್ಯರ್ಥಿಗಳು ಡಿಸೆಂಬರ್ 29ರೊಳಗೆ ಅರ್ಜಿ ಸಲ್ಲಿಸಬಹುದು.

ಸಂಸ್ಥೆ ಹೆಸರು: ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ
ಒಟ್ಟು ಹುದ್ದೆಗಳು: 1226
ಹುದ್ದೆ ಹೆಸರು: Circle Based Officer
ಸಂಬಳ ನಿರೀಕ್ಷೆ: 36,000-63,840/ ಪ್ರತಿ ತಿಂಗಳು

ಹುದ್ದೆಗಳ ವಿವರ

ವಿದ್ಯಾರ್ಹತೆ: ಸರ್ಕಾರದಿಂದ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪದವಿ.

ರಾಜ್ಯದ ಹೆಸರು: ಒಟ್ಟು ಹುದ್ದೆ
ಗುಜರಾತ್: 354
ಕರ್ನಾಟಕ: 278
ಮಧ್ಯಪ್ರದೇಶ: 162
ಛತ್ತೀಸ್ ಗಢ: 52
ತಮಿಳುನಾಡು: 276
ರಾಜಸ್ಥಾನ: 104

ವಿದ್ಯಾರ್ಹತೆ: ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದ ನೇಮಕಾತಿಯ ಅಧಿಸೂಚನೆಯಂತೆ ಸರ್ಕಾರದಿಂದ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪದವಿ.

ವಿದ್ಯಾರ್ಹತೆ ಜೊತೆಗೆ ಅನುಭವ ಹೊಂದಿರ ತಕ್ಕದ್ದು, ಆರ್ ಬಿ ಐ ಮಾನ್ಯತೆ ಪಡೆದಿರುವ ವಾಣಿಜ್ಯ ಬ್ಯಾಂಕ್ ಅಥವಾ ಪ್ರಾದೇಶಿಕ ಗ್ರಾಮೀಣ ಬ್ಯಾಂಕ್‌ನಲ್ಲಿ 2 ವರ್ಷಗಳ ಅನುಭವ ಹೊಂದಿರತಕ್ಕದ್ದು.

ವಯೋಮಿತಿ: ಸಾಮಾನ್ಯ ಹಾಗೂ ಮೀಸಲಾತಿ ರಹಿತ ಅಭ್ಯರ್ಥಿಗಳಿಗೆ ಕನಿಷ್ಠ 21 ವರ್ಷ ಗರಿಷ್ಠ 30 ವರ್ಷ (ಡಿಸೆಂಬರ್ 1, 2021ರಂತೆ). ಅಭ್ಯರ್ಥಿಗಳು 02/12/1991 ರಿಂದ 01/12/2000ರೊಳಗೆ ಜನಿಸಿದವರಾಗಬೇಕು.
ದಿವ್ಯಾಂಗರಿಗೆ, ಆರ್ಥಿಕವಾಗಿ ಹಿಂದುಳಿದ ವರ್ಗದವರಿಗೆ10 ವರ್ಷ, ಎಸ್ ಸಿ, ಎಸ್ಟಿ ಅಭ್ಯರ್ಥಿಗಳಿಗೆ 15 ವರ್ಷ, ಒಬಿಸಿ ಅಭ್ಯರ್ಥಿಗಳಿಗೆ 13 ವರ್ಷ, ಮಾಜಿ ಯೋಧ 05, ಹಿಂದುಳಿದ ವರ್ಗ 03 ವರ್ಷಗಳ ವಯೋಮಿತಿಯಲ್ಲಿ ವಿನಾಯಿತಿ ಇರುತ್ತದೆ.

ಅರ್ಜಿ ಶುಲ್ಕ:
ಸಾಮಾನ್ಯ/ ಒಬಿಸಿ/ಆರ್ಥಿಕವಾಗಿ ಹಿಂದುಳಿದ ವರ್ಗ: 750 ರು
ಎಸ್‌ಸಿ/ ಎಸ್ಟಿ/ ಮಾಜಿ ಯೋಧ: ಯಾವುದೇ ಶುಲ್ಕವಿಲ್ಲ
ಶುಲ್ಕಪಾವತಿ ವಿಧಾನ: ಡೆಬಿಟ್ ಕಾರ್ಡ್/ ಕ್ರೆಡಿಟ್ ಕಾರ್ಡ್/ ಇಂಟರ್ನೆಟ್ ಬ್ಯಾಂಕಿಂಗ್

ನೇಮಕಾತಿ ಪ್ರಕ್ರಿಯೆ: ಪ್ರಾಥಮಿಕ ಪರೀಕ್ಷೆ ಹಾಗೂ ಮುಖ್ಯ ಪರೀಕ್ಷೆ, ಸಂದರ್ಶನ.

ಪ್ರಮುಖ ದಿನಾಂಕ:
ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಕೆ ಆರಂಭ ದಿನ: 09/12/2021
ಆನ್‌ಲೈನ್‌ನಲ್ಲಿಅರ್ಜಿ ಸಲ್ಲಿಸಲು ಕೊನೆ ದಿನಾಂಕ : 29/12/2021
ಆನ್‌ಲೈನ್‌ನಲ್ಲಿ ಪರೀಕ್ಷೆ ಜನವರಿ ತಿಂಗಳಲ್ಲಿ ನಡೆಸುವ ಸಾಧ್ಯತೆಯಿದೆ.

ಅರ್ಜಿ ಸಲ್ಲಿಸುವ ವಿಧಾನ:
* ಎಸ್‌ಬಿಐ ನೇಮಕಾತಿ ಅಧಿಸೂಚನೆ 2021ರಲ್ಲಿ ನೀಡಿರುವಂಥ ಅರ್ಹತೆ ಇದ್ದ ಅಭ್ಯರ್ಥಿಗಳು ನೇಮಕಾತಿ ಲಿಂಕ್ ಕ್ಲಿಕ್ ಮಾಡಿ.
* ಐಬಿಪಿಎಸ್ ಆನ್‌ಲೈನ್ ಮೂಲಕ ನೋಂದಣಿ ಮಾಡಿಕೊಳ್ಳಬೇಕು.
* ಆನ್‌ಲೈನ್ ಅರ್ಜಿ ಸಲ್ಲಿಸುವಾಗ ಚಾಲ್ತಿಯಲ್ಲಿರುವ ಇಮೇಲ್ ಐಡಿ ಹಾಗೂ ಮೊಬೈಲ್ ಸಂಖ್ಯೆಯನ್ನು ನೀಡಿ.
* ವಿದ್ಯಾರ್ಹತೆಗೆ ತಕ್ಕ ದಾಖಲೆ, ವಯೋಮಿತಿ ದಾಖಲೆಯನ್ನು ಲಗತ್ತಿಸಿ
* ಅರ್ಜಿ ಜೊತೆಗೆ 10ನೇ ತರಗತಿ ಅಂಕಪಟ್ಟಿ, ಪದವಿ ಪ್ರಮಾಣ ಪತ್ರ, ಜಾತಿ ಪ್ರಮಾಣ ಪತ್ರ, ಅನುಭವ ಆಧಾರ ಪತ್ರ, ಗುರುತಿನ ದೃಢೀಕರಣ ಪತ್ರ ಹಾಗೂ ಇನ್ನಿತರ ಸಂಬಂಧಿಸಿದ ಪ್ರಮಾಣ ಪತ್ರಗಳನ್ನು ಲಗತ್ತಿಸತಕ್ಕದ್ದು.
* SBI Circle Based Officer Apply Online ಲಿಂಕ್ ಮಾತ್ರ ಕ್ಲಿಕ್ ಮಾಡಿ
* ಭರ್ತಿಯಾಗಿ ಅರ್ಜಿ ಜೊತೆಗೆ ಅಗತ್ಯ ದಾಖಲೆ, ಪ್ರಮಾಣ ಪತ್ರಗಳನ್ನು ಸ್ಕ್ಯಾನ್ ಮಾಡಿ ಒದಗಿಸಿ, ಇತ್ತೀಚಿನ ಭಾವಚಿತ್ರ ನೀಡಿ
* ಅರ್ಜಿ ಸಲ್ಲಿಕೆ ನಂಬರ್, ಸ್ವೀಕೃತಿ ಸಂಖ್ಯೆಯನ್ನು ಗುರುತಿಟ್ಟುಕೊಳ್ಳಿ, ಪರೀಕ್ಷೆ ನಡೆಯುವ ಮುಂದಿನ ದಿನಾಂಕದ ಬಗ್ಗೆ ನಿಮ್ಮ ಇಮೇಲ್, ಮೊಬೈಲ್ ಸಂಖ್ಯೆಗೆ ಮಾಹಿತಿ ನೀಡಲಾಗುತ್ತದೆ.

Recommended Video

   Rohit Sharmaಗೆ T20ಗಿಂತಲೂ ODI ನಾಯಕತ್ವದ ಮೇಲೆ ಕಾಣ್ತಿತ್ತು | Oneindia Kannada

   ಅರ್ಜಿ ಸಲ್ಲಿಸುವ ವಿಧಾನ ಹಾಗೂ ಇನ್ನಿತರ ಮಾಹಿತಿಗಾಗಿ ಕ್ಲಿಕ್ ಮಾಡಿ (https://ibpsonline.ibps.in/sbircbonov21/)

   English summary
   SBI recruitment 2021 notification has been released on official website for the recruitment of 1226 Circle Based Officers vacancies at State Bank of India (SBI).
   ತಾಜಾ ಸುದ್ದಿ ತಕ್ಷಣ ಪಡೆಯಿರಿ
   Enable
   x
   Notification Settings X
   Time Settings
   Done
   Clear Notification X
   Do you want to clear all the notifications from your inbox?
   Settings X