SBI Recruitment 2022: 1422 CBO ಹುದ್ದೆಗಳಿಗೆ ಅರ್ಜಿ ಆಹ್ವಾನ
ಬೆಂಗಳೂರು, ಅ.18: ಸರ್ಕಾರಿ ಸ್ವಾಮ್ಯದ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ(ಎಸ್ ಬಿಐ) 2022ನೇ ಸಾಲಿನ ನೇಮಕಾತಿ ಮುಂದುವರೆಸಿದೆ. ಈ ಕುರಿತಂತೆ ಅಧಿಕೃತ ವೆಬ್ ತಾಣದಲ್ಲಿ ಪ್ರಕಟಣೆ ಹೊರಡಿಸಿದೆ. ಸರ್ಕಲ್ ಬೇಸ್ಡ್ ಆಫೀಸರ್ (CBO) ಹುದ್ದೆಗಳಿಗೆ ಅರ್ಜಿ ಹಾಕಲು ಬಯಸುವ ಅರ್ಹ, ಆಸಕ್ತ ಅಭ್ಯರ್ಥಿಗಳು ನವೆಂಬರ್ 07, 2022ರಿಂದ ತಮ್ಮ ತುಂಬಿದ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ.
ಸಂಸ್ಥೆ ಹೆಸರು: ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ(ಎಸ್ ಬಿಐ)
ಹುದ್ದೆ ಹೆಸರು: Circle Based Officer Posts(CBO)
ಒಟ್ಟು ಹುದ್ದೆ: 1422
ಉದ್ಯೋಗ ಸ್ಥಳ: ಭಾರತದೆಲ್ಲೆಡೆ
ಅರ್ಜಿ ಸಲ್ಲಿಸಲು ಕೊನೆ ದಿನಾಂಕ: ನವೆಂಬರ್ 07, 2022
ಸಂಬಳ ವಿವರ: 36,000-63,840/- ರು ಪ್ರತಿ ತಿಂಗಳು
ರಾಜ್ಯ-ಹುದ್ದೆಗಳ ಸಂಖ್ಯೆ
- ಮಧ್ಯಪ್ರದೇಶ/ಛತ್ತೀಸ್ ಗಢ: 183
- ಒಡಿಶಾ: 175
- ತೆಲಂಗಾಣ: 176
- ರಾಜಸ್ಥಾನ: 201
- ಪಶ್ಚಿಮ ಬಂಗಾಳ/ಸಿಕ್ಕಿಂ/ಅಂಡಮಾನ್ ಅಂಡ್ ನಿಕೋಬಾರ್ ದ್ವೀಪ: 175
- ಮಹಾರಾಷ್ಟ್ರ/ಗೋವಾ: 212
- ಅಸ್ಸಾಂ/ಅರುಣಾಚಲ ಪ್ರದೇಶ/ಮಣಿಪುರ/ಮೇಘಾಲಯ/ಮಿಜೋರಾಂ/ನಾಗಾಲ್ಯಾಂಡ್/ತ್ರಿಪುರಾ: 300
ನೇಮಕಾತಿ ಕುಸಿತ: ಮುಂಚೂಣಿಯಲ್ಲಿ ಟಿಸಿಎಸ್, ಇನ್ಫಿ, ಎಚ್‌ಸಿಎಲ್, ವಿಪ್ರೋ
ಸಂಬಳ ವಿವರ, ವಿದ್ಯಾರ್ಹತೆ, ವಯೋಮಿತಿ, ಅರ್ಜಿ ಶುಲ್ಕ, ನೇಮಕಾತಿ ಪ್ರಕ್ರಿಯೆ, ಅರ್ಜಿ ಸಲ್ಲಿಸುವ ವಿಧಾನ ಇನ್ನಿತರ ಮಾಹಿತಿ ಮುಂದಿದೆ...

ಸಂಬಳ ವಿವರ
ಸಂಬಳ ವಿವರ:
ಪ್ರಸ್ತುತ, ಆರಂಭಿಕವಾಗಿ ಮೂಲ ವೇತನವು 41,960/- (4 ಮುಂಗಡ ಏರಿಕೆ(increments)ಗಳೊಂದಿಗೆ) 36000-1490/ 7-46430-1740/ 2-49910-1990/ 7-63840 ಜೂನಿಯರ್ ಮ್ಯಾನೇಜ್‌ಮೆಂಟ್ ಗ್ರೇಡ್ ಸ್ಕೇಲ್‌ಗೆ ಅನ್ವಯಿಸುತ್ತದೆ. ಅಧಿಕಾರಿಯು ಕಾಲಕಾಲಕ್ಕೆ ಜಾರಿಯಲ್ಲಿರುವ ನಿಯಮಗಳ ಪ್ರಕಾರ D.A, H.R.A/ ಲೀಸ್ ಬಾಡಿಗೆ, C.C.A, ವೈದ್ಯಕೀಯ, ಮತ್ತು ಇತರ ಭತ್ಯೆಗಳು ಮತ್ತು ಅಗತ್ಯಕ್ಕೆ ಅರ್ಹರಾಗಿರುತ್ತಾರೆ.ವಿದ್ಯಾರ್ಹತೆ: ಸರ್ಕಾರಿ ಸ್ವಾಮ್ಯದ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ(ಎಸ್ ಬಿಐ) ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು ಕೇಂದ್ರ ಸರ್ಕಾರದಿಂದ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪದವಿ ಪಡೆದಿರಬೇಕು.
ತಮ್ಮ ಪದವಿಯ ಅಂತಿಮ ವರ್ಷ/ಸೆಮಿಸ್ಟರ್‌ನಲ್ಲಿರುವವರು ಸಂದರ್ಶನಕ್ಕೆ ಕರೆದರೆ, ಅವರು ಸೆ 31, 2022 ರಂದು ಅಥವಾ ಮೊದಲು ಪದವಿ ಪರೀಕ್ಷೆಯಲ್ಲಿ ಉತ್ತೀರ್ಣರಾದ ಪುರಾವೆಯನ್ನು ಸಲ್ಲಿಸಬೇಕು ಎಂಬ ಷರತ್ತಿಗೆ ತಾತ್ಕಾಲಿಕವಾಗಿ ಅನ್ವಯಿಸಬಹುದು.

ವಯೋಮಿತಿ
ವಯೋಮಿತಿ: ಸಾಮಾನ್ಯ ಹಾಗೂ ಮೀಸಲಾತಿ ರಹಿತ ಅಭ್ಯರ್ಥಿಗಳಿಗೆ ಕನಿಷ್ಠ 21 ವರ್ಷ ಗರಿಷ್ಠ 30 ವರ್ಷ (ಸೆ 30, 2022ರಂತೆ). ದಿವ್ಯಾಂಗರಿಗೆ, ಆರ್ಥಿಕವಾಗಿ ಹಿಂದುಳಿದ ವರ್ಗದವರಿಗೆ10 ವರ್ಷ, ಎಸ್ ಸಿ, ಎಸ್ಟಿ ಅಭ್ಯರ್ಥಿಗಳಿಗೆ 5 ವರ್ಷ, ಮಾಜಿ ಯೋಧ 05, ಹಿಂದುಳಿದ ವರ್ಗ 03 ವರ್ಷಗಳ ವಯೋಮಿತಿಯಲ್ಲಿ ವಿನಾಯಿತಿ ಇರುತ್ತದೆ.
ಅರ್ಜಿ ಶುಲ್ಕ:
ಸಾಮಾನ್ಯ/ ಒಬಿಸಿ/ಆರ್ಥಿಕವಾಗಿ ಹಿಂದುಳಿದ ವರ್ಗ: 750 ರು
ಎಸ್‌ಸಿ/ ಎಸ್ಟಿ/ ಮಾಜಿ ಯೋಧ: ಯಾವುದೇ ಶುಲ್ಕವಿಲ್ಲಶುಲ್ಕಪಾವತಿ ವಿಧಾನ: ಡೆಬಿಟ್ ಕಾರ್ಡ್/ ಕ್ರೆಡಿಟ್ ಕಾರ್ಡ್/ ಇಂಟರ್ನೆಟ್ ಬ್ಯಾಂಕಿಂಗ್
ಕೆನರಾ ಡಿಸಿಸಿ ಬ್ಯಾಂಕ್‌ನಲ್ಲಿ ಕೆಲಸ ಖಾಲಿ ಇದೆ, 41 ಹುದ್ದೆಗಳು
ಪ್ರಮುಖ ದಿನಾಂಕ
ನೇಮಕಾತಿ ಪ್ರಕ್ರಿಯೆ: ಪ್ರಾಥಮಿಕ ಪರೀಕ್ಷೆ ಹಾಗೂ ಮುಖ್ಯ ಪರೀಕ್ಷೆ, ಸಂದರ್ಶನ. ಕರ್ನಾಟಕದಲ್ಲಿ ಕನ್ನಡ ಅಲ್ಲದೆ ಇಂಗ್ಲೀಷ್, ಹಿಂದಿ ಭಾಷೆಯಲ್ಲೂ ಪರೀಕ್ಷೆ ಬರೆಯಲು ಅವಕಾಶ ಇರಲಿದೆ. 10 ಅಥವಾ 12ನೇ ತರಗತಿಯಲ್ಲಿ ಪ್ರಾದೇಶಿಕ ಭಾಷೆ ವ್ಯಾಸಂಗ ಮಾಡಿದ ಅಭ್ಯರ್ಥಿಗಳಿಗೆ ಭಾಷಾ ಪರೀಕ್ಷೆ ಅಗತ್ಯವಿರುವುದಿಲ್ಲ. ಮಿಕ್ಕ ಅಭ್ಯರ್ಥಿಗಳಿಗೆ ಸ್ಥಳೀಯ ಭಾಷಾ ಪರೀಕ್ಷೆಯಲ್ಲಿ ಪಾಸಾದರೆ ಪೂರ್ವಭಾವಿ ಪರೀಕ್ಷೆಗೆ ಅರ್ಹತೆ ಸಿಗಲಿದೆ.
ಪ್ರಮುಖ ದಿನಾಂಕ:
ಅರ್ಜಿ ನೋಂದಣಿ/ಮಾರ್ಪಾಡು ಸೇರಿದಂತೆ ಆನ್‌ಲೈನ್ ನೋಂದಣಿ: ಅಕ್ಟೋಬರ್ 18, 2022ಅರ್ಜಿ ಶುಲ್ಕ ಹಾಗೂ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: ನವೆಂಬರ್ 7, 2022
ಪೂರ್ವಭಾವಿ ಪರೀಕ್ಷೆಯ ಕಾಲ್ ಲೆಟರ್ ಡೌನ್‌ಲೋಡ್ : ನವೆಂಬರ್/ ಡಿಸೆಂಬರ್ 2022

ಅರ್ಜಿ ಸಲ್ಲಿಸುವ ವಿಧಾನ
- ಎಸ್‌ಬಿಐ ನೇಮಕಾತಿ ಅಧಿಸೂಚನೆ 2022ರಲ್ಲಿ ನೀಡಿರುವಂಥ ಅರ್ಹತೆ ಇದ್ದ ಅಭ್ಯರ್ಥಿಗಳು ನೇಮಕಾತಿ ಲಿಂಕ್ ಕ್ಲಿಕ್ ಮಾಡಿ.
- ಐಬಿಪಿಎಸ್ ಆನ್‌ಲೈನ್ ಮೂಲಕ ನೋಂದಣಿ ಮಾಡಿಕೊಳ್ಳಬೇಕು.
- ಆನ್‌ಲೈನ್ ಅರ್ಜಿ ಸಲ್ಲಿಸುವಾಗ ಚಾಲ್ತಿಯಲ್ಲಿರುವ ಇಮೇಲ್ ಐಡಿ ಹಾಗೂ ಮೊಬೈಲ್ ಸಂಖ್ಯೆಯನ್ನು ನೀಡಿ.
- ವಿದ್ಯಾರ್ಹತೆಗೆ ತಕ್ಕ ದಾಖಲೆ, ವಯೋಮಿತಿ ದಾಖಲೆಯನ್ನು ಲಗತ್ತಿಸಿ
- ಅರ್ಜಿ ಜೊತೆಗೆ 10ನೇ ತರಗತಿ ಅಂಕಪಟ್ಟಿ, ಪದವಿ ಪ್ರಮಾಣ ಪತ್ರ, ಜಾತಿ ಪ್ರಮಾಣ ಪತ್ರ, ಅನುಭವ ಆಧಾರ ಪತ್ರ, ಗುರುತಿನ ದೃಢೀಕರಣ ಪತ್ರ ಹಾಗೂ ಇನ್ನಿತರ ಸಂಬಂಧಿಸಿದ ಪ್ರಮಾಣ ಪತ್ರಗಳನ್ನು ಲಗತ್ತಿಸತಕ್ಕದ್ದು.
- SBI CBO(Circle Based Officer) ಲಿಂಕ್ ಮಾತ್ರ ಕ್ಲಿಕ್ ಮಾಡಿ
- ಭರ್ತಿಯಾಗಿ ಅರ್ಜಿ ಜೊತೆಗೆ ಅಗತ್ಯ ದಾಖಲೆ, ಪ್ರಮಾಣ ಪತ್ರಗಳನ್ನು ಸ್ಕ್ಯಾನ್ ಮಾಡಿ ಒದಗಿಸಿ, ಇತ್ತೀಚಿನ ಭಾವಚಿತ್ರ ನೀಡಿ
- ಅರ್ಜಿ ಸಲ್ಲಿಕೆ ನಂಬರ್, ಸ್ವೀಕೃತಿ ಸಂಖ್ಯೆಯನ್ನು ಗುರುತಿಟ್ಟುಕೊಳ್ಳಿ, ಪರೀಕ್ಷೆ ನಡೆಯುವ ಮುಂದಿನ ದಿನಾಂಕದ ಬಗ್ಗೆ ನಿಮ್ಮ ಇಮೇಲ್, ಮೊಬೈಲ್ ಸಂಖ್ಯೆಗೆ ಮಾಹಿತಿ ನೀಡಲಾಗುತ್ತದೆ.
ಅರ್ಜಿ ಸಲ್ಲಿಸುವ ವಿಧಾನ ಹಾಗೂ ಇನ್ನಿತರ ಮಾಹಿತಿಗಾಗಿ ಕ್ಲಿಕ್ ಮಾಡಿ
-
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
ಬೆಂಗಳೂರು ಬಿಸಿನೆಸ್ ಕಾರಿಡಾರ್ ಯೋಜನೆಗೆ ಚಾಲನೆ: ಕಾಮಗಾರಿಗೆ 3,348 ಕೋಟಿ ರೂ ಟೆಂಡರ್ ಆಹ್ವಾನ -
Kerosene: ಎಲ್ಪಿಜಿ ಸಮಸ್ಯೆಗೆ ಕೇಂದ್ರದಿಂದ ಹೊಸ ಪರಿಹಾರ: ಮತ್ತೆ ಸಿಗಲಿದೆ ಸೀಮೆಎಣ್ಣೆ, ಪೆಟ್ರೋಲ್ ಬಂಕ್ಗಳಲ್ಲಿ ವಿತರಣೆ -
Dolly Dhananjay: ಆ ಚಿತ್ರಕಥೆ.. 6 ತಿಂಗಳು ನನ್ನ ಟೇಬಲ್ ಮೇಲೆ ಬಿದ್ದಿತ್ತು: ನಟ ಡಾಲಿ ಧನಂಜಯ್ -
SSLC Maths Exam: ಎಸ್ಎಸ್ಎಲ್ಸಿ ಗಣಿತ ಪರೀಕ್ಷೆಯಲ್ಲಿ ಪಠ್ಯದ ಹೊರತಾದ ಪ್ರಶ್ನೆಗಳ ಆರೋಪ, ಕೃಪಾಂಕಕ್ಕಾಗಿ ಹೆಚ್ಚಿದ ಒತ್ತಾಯ -
ಪರಮಾತ್ಮ ಹೇಳಿದ್ರೂ ಹಿಂದೆ ಸರಿಯಲ್ಲ ಎಂದಿದ್ದ ಕಾಂಗ್ರೆಸ್ನ ಸಾದಿಕ್ ಪೈಲ್ವಾನ್ ನಾಮಪತ್ರ ಹಿಂಪಡೆಯಲು ಇದೆ ಹಲವು ಕಾರಣ -
Tamil Nadu Election: ತನ್ನ ಡ್ರೈವರ್ ಮಗನಿಗೆ MLA ಟಿಕೆಟ್ ಘೋಷಿಸಿದ ನಟ ದಳಪತಿ ವಿಜಯ್, ಭಾವುಕ ಕ್ಷಣದ ವಿಡಿಯೋ ವೈರಲ್ -
ವಿರಾಟ್ ಅಸಲಿ ಆಟ ಇನ್ನೂ ಬಾಕಿಯಿದೆ; ಕಿಂಗ್ ಕೊಹ್ಲಿಗೆ ವಿಶೇಷ ಮನವಿ ಮಾಡಿಕೊಂಡ ಅಂಬಟಿ ರಾಯುಡು, ಭಾರೀ ವೈರಲ್ -
Bengaluru Weather: ನಗರಕ್ಕೆ ಇಂದು ಸೋಮವಾರವು ಗುಡುಗು ಸಹಿತ ಮಳೆ ಎಚ್ಚರಿಕೆ, ಸವಾರರೇ ಗಮನಿಸಿ -
Prakash Raj Mother passed Away: ನಟ ಪ್ರಕಾಶ್ ರಾಜ್ ತಾಯಿ ಸ್ವರ್ಣಲತಾ ನಿಧನ, ಚಿತ್ರರಂಗದ ಗಣ್ಯರಿಂದ ಸಂತಾಪ












Click it and Unblock the Notifications