SBI Recruitment 2022: 1673 ಪ್ರೊಬೆಷನರಿ ಅಧಿಕಾರಿ ಹುದ್ದೆಗಳಿಗೆ ಅರ್ಜಿ ಆಹ್ವಾನ
ಬೆಂಗಳೂರು, ಸೆ. 22: ಸರ್ಕಾರಿ ಸ್ವಾಮ್ಯದ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ(ಎಸ್ ಬಿಐ) 2022ನೇ ಸಾಲಿನ ನೇಮಕಾತಿ ಮುಂದುವರೆಸಿದೆ. ಈ ಕುರಿತಂತೆ ಅಧಿಕೃತ ವೆಬ್ ತಾಣದಲ್ಲಿ ಪ್ರಕಟಣೆ ಹೊರಡಿಸಿದೆ. ಪ್ರೊಬೆಷನರಿ ಅಧಿಕಾರಿ ಹುದ್ದೆಗಳಿಗೆ ಅರ್ಜಿ ಹಾಕಲು ಬಯಸುವ ಅರ್ಹ, ಆಸಕ್ತ ಅಭ್ಯರ್ಥಿಗಳು ಸೆಪ್ಟೆಂಬರ್ 22, 2022ರಿಂದ ತಮ್ಮ ತುಂಬಿದ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ.
ಸಂಸ್ಥೆ ಹೆಸರು: ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ(ಎಸ್ ಬಿಐ)
ಹುದ್ದೆ ಹೆಸರು: ಪ್ರೊಬೆಷನರಿ ಆಫೀಸರ್ (Probationary Officer )
ಒಟ್ಟು ಹುದ್ದೆ: 1673
ಉದ್ಯೋಗ ಸ್ಥಳ: ಭಾರತದೆಲ್ಲೆಡೆ
ಅರ್ಜಿ ಸಲ್ಲಿಸಲು ಕೊನೆ ದಿನಾಂಕ: ಅಕ್ಟೋಬರ್ 22, 2022
ಸಂಬಳ ವಿವರ: 17900-47920/- ರು ಪ್ರತಿ ತಿಂಗಳು
ಹುದ್ದೆಗಳ ಸಂಖ್ಯೆ
ರೆಗ್ಯುಲರ್ ಹುದ್ದೆಗಳು: 1600
ಬ್ಯಾಕ್ ಲಾಗ್ ಹುದ್ದೆಗಳು: 73
ಸಂಬಳ ವಿವರ:
ಪ್ರಸ್ತುತ, ಆರಂಭಿಕವಾಗಿ ಮೂಲ ವೇತನವು 41,960/- (4 ಮುಂಗಡ ಏರಿಕೆ(increments)ಗಳೊಂದಿಗೆ) 36000-1490/ 7-46430-1740/ 2-49910-1990/ 7-63840 ಜೂನಿಯರ್ ಮ್ಯಾನೇಜ್‌ಮೆಂಟ್ ಗ್ರೇಡ್ ಸ್ಕೇಲ್‌ಗೆ ಅನ್ವಯಿಸುತ್ತದೆ. ಅಧಿಕಾರಿಯು ಕಾಲಕಾಲಕ್ಕೆ ಜಾರಿಯಲ್ಲಿರುವ ನಿಯಮಗಳ ಪ್ರಕಾರ D.A, H.R.A/ ಲೀಸ್ ಬಾಡಿಗೆ, C.C.A, ವೈದ್ಯಕೀಯ, ಮತ್ತು ಇತರ ಭತ್ಯೆಗಳು ಮತ್ತು ಅಗತ್ಯಕ್ಕೆ ಅರ್ಹರಾಗಿರುತ್ತಾರೆ.

ವಿದ್ಯಾರ್ಹತೆ
ಸರ್ಕಾರಿ ಸ್ವಾಮ್ಯದ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ(ಎಸ್ ಬಿಐ) ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು ಕೇಂದ್ರ ಸರ್ಕಾರದಿಂದ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪದವಿ ಪಡೆದಿರಬೇಕು.
ತಮ್ಮ ಪದವಿಯ ಅಂತಿಮ ವರ್ಷ/ಸೆಮಿಸ್ಟರ್‌ನಲ್ಲಿರುವವರು ಸಂದರ್ಶನಕ್ಕೆ ಕರೆದರೆ, ಅವರು ಸೆ 31, 2022 ರಂದು ಅಥವಾ ಮೊದಲು ಪದವಿ ಪರೀಕ್ಷೆಯಲ್ಲಿ ಉತ್ತೀರ್ಣರಾದ ಪುರಾವೆಯನ್ನು ಸಲ್ಲಿಸಬೇಕು ಎಂಬ ಷರತ್ತಿಗೆ ತಾತ್ಕಾಲಿಕವಾಗಿ ಅನ್ವಯಿಸಬಹುದು.

ಅರ್ಜಿ ಶುಲ್ಕ
ವಯೋಮಿತಿ: ಸಾಮಾನ್ಯ ಹಾಗೂ ಮೀಸಲಾತಿ ರಹಿತ ಅಭ್ಯರ್ಥಿಗಳಿಗೆ ಕನಿಷ್ಠ 21 ವರ್ಷ ಗರಿಷ್ಠ 30 ವರ್ಷ (ಆಗಸ್ಟ್ 1, 2022ರಂತೆ). ದಿವ್ಯಾಂಗರಿಗೆ, ಆರ್ಥಿಕವಾಗಿ ಹಿಂದುಳಿದ ವರ್ಗದವರಿಗೆ10 ವರ್ಷ, ಎಸ್ ಸಿ, ಎಸ್ಟಿ ಅಭ್ಯರ್ಥಿಗಳಿಗೆ 5 ವರ್ಷ, ಮಾಜಿ ಯೋಧ 05, ಹಿಂದುಳಿದ ವರ್ಗ 03 ವರ್ಷಗಳ ವಯೋಮಿತಿಯಲ್ಲಿ ವಿನಾಯಿತಿ ಇರುತ್ತದೆ.
ಅರ್ಜಿ ಶುಲ್ಕ:
ಸಾಮಾನ್ಯ/ ಒಬಿಸಿ/ಆರ್ಥಿಕವಾಗಿ ಹಿಂದುಳಿದ ವರ್ಗ: 750 ರು
ಎಸ್‌ಸಿ/ ಎಸ್ಟಿ/ ಮಾಜಿ ಯೋಧ: ಯಾವುದೇ ಶುಲ್ಕವಿಲ್ಲ
ಶುಲ್ಕಪಾವತಿ ವಿಧಾನ: ಡೆಬಿಟ್ ಕಾರ್ಡ್/ ಕ್ರೆಡಿಟ್ ಕಾರ್ಡ್/ ಇಂಟರ್ನೆಟ್ ಬ್ಯಾಂಕಿಂಗ್
FCI ನೇಮಕಾತಿ 2022: 5043 ಹುದ್ದೆಗಳಿವೆ, ತಕ್ಷಣವೇ ಅರ್ಜಿ ಹಾಕಿ
ಸ್ಥಳೀಯ ಭಾಷಾ ಪರೀಕ್ಷೆ
ನೇಮಕಾತಿ ಪ್ರಕ್ರಿಯೆ: ಪ್ರಾಥಮಿಕ ಪರೀಕ್ಷೆ ಹಾಗೂ ಮುಖ್ಯ ಪರೀಕ್ಷೆ, ಸಂದರ್ಶನ. ಕರ್ನಾಟಕದಲ್ಲಿ ಕನ್ನಡ ಅಲ್ಲದೆ ಇಂಗ್ಲೀಷ್, ಹಿಂದಿ ಭಾಷೆಯಲ್ಲೂ ಪರೀಕ್ಷೆ ಬರೆಯಲು ಅವಕಾಶ ಇರಲಿದೆ. 10 ಅಥವಾ 12ನೇ ತರಗತಿಯಲ್ಲಿ ಪ್ರಾದೇಶಿಕ ಭಾಷೆ ವ್ಯಾಸಂಗ ಮಾಡಿದ ಅಭ್ಯರ್ಥಿಗಳಿಗೆ ಭಾಷಾ ಪರೀಕ್ಷೆ ಅಗತ್ಯವಿರುವುದಿಲ್ಲ. ಮಿಕ್ಕ ಅಭ್ಯರ್ಥಿಗಳಿಗೆ ಸ್ಥಳೀಯ ಭಾಷಾ ಪರೀಕ್ಷೆಯಲ್ಲಿ ಪಾಸಾದರೆ ಪೂರ್ವಭಾವಿ ಪರೀಕ್ಷೆಗೆ ಅರ್ಹತೆ ಸಿಗಲಿದೆ.

ಅರ್ಜಿ ನೋಂದಣಿ
- ಅರ್ಜಿ ನೋಂದಣಿ/ಮಾರ್ಪಾಡು ಸೇರಿದಂತೆ ಆನ್‌ಲೈನ್ ನೋಂದಣಿ: ಅಕ್ಟೋಬರ್ 12, 2022
- ಅರ್ಜಿ ಶುಲ್ಕವನ್ನು ಸಲ್ಲಿಸಲು ಕೊನೆಯ ದಿನಾಂಕ: ಅಕ್ಟೋಬರ್ 12, 2022
- ಅರ್ಜಿ ಸಲ್ಲಿಸಲು ಕೊನೆ ದಿನಾಂಕ: ಅಕ್ಟೋಬರ್ 22, 2022
- ಪೂರ್ವಭಾವಿ ಪರೀಕ್ಷೆಯ ಕಾಲ್ ಲೆಟರ್ ಡೌನ್‌ಲೋಡ್ : ಡಿಸೆಂಬರ್ 2022 ರ 1 ನೇ / 2 ನೇ ವಾರ
- ಹಂತ-I: ಆನ್‌ಲೈನ್ ಪೂರ್ವಭಾವಿ ಪರೀಕ್ಷೆ 17ನೇ/18ನೇ/19ನೇ/20ನೇ ಡಿಸೆಂಬರ್ 2022
- ಪೂರ್ವಭಾವಿ ಪರೀಕ್ಷೆಯ ಫಲಿತಾಂಶದ ಘೋಷಣೆ: ಡಿಸೆಂಬರ್ 2022 / ಜನವರಿ 2023
- ಮುಖ್ಯ ಪರೀಕ್ಷೆಯ ಕರೆ ಪತ್ರದ ಡೌನ್‌ಲೋಡ್: ಜನವರಿ 2023 / ಫೆಬ್ರವರಿ 2023
- ಹಂತ-II: ಆನ್‌ಲೈನ್ ಮುಖ್ಯ ಪರೀಕ್ಷೆ ಜನವರಿ 2023 / ಫೆಬ್ರವರಿ 2023
- ಮುಖ್ಯ ಪರೀಕ್ಷೆಯ ಫಲಿತಾಂಶದ ಘೋಷಣೆ : ಫೆಬ್ರವರಿ 2023
- ಫೆಬ್ರವರಿ 2023 ರಿಂದ ಹಂತ-III ಕರೆ ಪತ್ರವನ್ನು ಡೌನ್‌ಲೋಡ್ ಮಾಡಿ
- ಹಂತ-III: ಸೈಕೋಮೆಟ್ರಿಕ್ ಪರೀಕ್ಷೆ: ಫೆಬ್ರವರಿ / ಮಾರ್ಚ್ 2023
- ಸಂದರ್ಶನ ಮತ್ತು ಗುಂಪು ಚರ್ಚೆಗಳು: ಫೆಬ್ರವರಿ / ಮಾರ್ಚ್ 2023
- ಮಾರ್ಚ್ 2023 ರಿಂದ ಅಂತಿಮ ಫಲಿತಾಂಶದ ಘೋಷಣೆ

ಅರ್ಜಿ ಸಲ್ಲಿಸುವ ವಿಧಾನ
- ಎಸ್‌ಬಿಐ ನೇಮಕಾತಿ ಅಧಿಸೂಚನೆ 2022ರಲ್ಲಿ ನೀಡಿರುವಂಥ ಅರ್ಹತೆ ಇದ್ದ ಅಭ್ಯರ್ಥಿಗಳು ನೇಮಕಾತಿ ಲಿಂಕ್ ಕ್ಲಿಕ್ ಮಾಡಿ.
- ಐಬಿಪಿಎಸ್ ಆನ್‌ಲೈನ್ ಮೂಲಕ ನೋಂದಣಿ ಮಾಡಿಕೊಳ್ಳಬೇಕು.
- ಆನ್‌ಲೈನ್ ಅರ್ಜಿ ಸಲ್ಲಿಸುವಾಗ ಚಾಲ್ತಿಯಲ್ಲಿರುವ ಇಮೇಲ್ ಐಡಿ ಹಾಗೂ ಮೊಬೈಲ್ ಸಂಖ್ಯೆಯನ್ನು ನೀಡಿ.
- ವಿದ್ಯಾರ್ಹತೆಗೆ ತಕ್ಕ ದಾಖಲೆ, ವಯೋಮಿತಿ ದಾಖಲೆಯನ್ನು ಲಗತ್ತಿಸಿ
- ಅರ್ಜಿ ಜೊತೆಗೆ 10ನೇ ತರಗತಿ ಅಂಕಪಟ್ಟಿ, ಪದವಿ ಪ್ರಮಾಣ ಪತ್ರ, ಜಾತಿ ಪ್ರಮಾಣ ಪತ್ರ, ಅನುಭವ ಆಧಾರ ಪತ್ರ, ಗುರುತಿನ ದೃಢೀಕರಣ ಪತ್ರ ಹಾಗೂ ಇನ್ನಿತರ ಸಂಬಂಧಿಸಿದ ಪ್ರಮಾಣ ಪತ್ರಗಳನ್ನು ಲಗತ್ತಿಸತಕ್ಕದ್ದು.
- SBI PO(Probationary Officer) ಲಿಂಕ್ ಮಾತ್ರ ಕ್ಲಿಕ್ ಮಾಡಿ
- ಭರ್ತಿಯಾಗಿ ಅರ್ಜಿ ಜೊತೆಗೆ ಅಗತ್ಯ ದಾಖಲೆ, ಪ್ರಮಾಣ ಪತ್ರಗಳನ್ನು ಸ್ಕ್ಯಾನ್ ಮಾಡಿ ಒದಗಿಸಿ, ಇತ್ತೀಚಿನ ಭಾವಚಿತ್ರ ನೀಡಿ
- ಅರ್ಜಿ ಸಲ್ಲಿಕೆ ನಂಬರ್, ಸ್ವೀಕೃತಿ ಸಂಖ್ಯೆಯನ್ನು ಗುರುತಿಟ್ಟುಕೊಳ್ಳಿ, ಪರೀಕ್ಷೆ ನಡೆಯುವ ಮುಂದಿನ ದಿನಾಂಕದ ಬಗ್ಗೆ ನಿಮ್ಮ ಇಮೇಲ್, ಮೊಬೈಲ್ ಸಂಖ್ಯೆಗೆ ಮಾಹಿತಿ ನೀಡಲಾಗುತ್ತದೆ.
- ಅರ್ಜಿ ಸಲ್ಲಿಸುವ ವಿಧಾನ ಹಾಗೂ ಇನ್ನಿತರ ಮಾಹಿತಿಗಾಗಿ ಕ್ಲಿಕ್ ಮಾಡಿ












Click it and Unblock the Notifications