SBI recruitment 2022 : ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ ಸ್ಪೆಷಲಿಸ್ಟ್ ಕೆಡರ್ ಅಧಿಕಾರಿ ಹುದ್ದೆ
ಬೆಂಗಳೂರು, ಏಪ್ರಿಲ್ 10: ಸರ್ಕಾರಿ ಸ್ವಾಮ್ಯದ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ(ಎಸ್ ಬಿಐ) 2021ನೇ ಸಾಲಿನ ನೇಮಕಾತಿ ಮುಂದುವರೆಸಿದೆ. ಈ ಕುರಿತಂತೆ ಅಧಿಕೃತ ವೆಬ್ ತಾಣದಲ್ಲಿ ಪ್ರಕಟಣೆ ಹೊರಡಿಸಿದೆ. ಸ್ಪೆಷಲಿಸ್ಟ್ ಕೆಡರ್ ಅಧಿಕಾರಿ ಹುದ್ದೆಗಳಿಗೆ ಅರ್ಜಿ ಹಾಕಲು ಬಯಸುವ ಅರ್ಹ, ಆಸಕ್ತ ಅಭ್ಯರ್ಥಿಗಳು ಏಪ್ರಿಲ್ 28ರೊಳಗೆ ಅರ್ಜಿ ಸಲ್ಲಿಸಬಹುದು.
ಸಂಸ್ಥೆ ಹೆಸರು: ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ
ಒಟ್ಟು ಹುದ್ದೆಗಳು: 8
ಹುದ್ದೆ ಹೆಸರು: Specialist Cadre Officers
ಅರ್ಜಿ ಸಲ್ಲಿಸಲು ಕೊನೆ ದಿನಾಂಕ: ಏಪ್ರಿಲ್ 28, 2022
ಹುದ್ದೆಗಳ ವಿವರ/ವಿದ್ಯಾರ್ಹತೆ:
* ಸೀನಿಯರ್ ಎಕ್ಸಿಕ್ಯೂಟಿವ್(ಎಕಾನಾಮಿಸ್ಟ್)
ಒಟ್ಟು ಹುದ್ದೆ: 02
ವಿದ್ಯಾರ್ಹತೆ: Statistics/ಗಣಿತಶಾಸ್ತ್ರದ Statistics/ಗಣಿತದ ಅರ್ಥಶಾಸ್ತ್ರ/ ಅರ್ಥಶಾಸ್ತ್ರ/ ಅರ್ಥಶಾಸ್ತ್ರ/Statistics ಮತ್ತು ಮಾಹಿತಿಶಾಸ್ತ್ರ/Applied Statistics ಮತ್ತು ಮಾಹಿತಿಶಾಸ್ತ್ರವು 60% ಅಂಕಗಳೊಂದಿಗೆ ಅಥವಾ MBA/PGDM ಜೊತೆಗೆ ಹಣಕಾಸು ವಿಷಯದಲ್ಲಿ ವಿಶೇಷತೆ/ ಸ್ನಾತಕೋತ್ತರ ಪದವಿ ಮತ್ತು 60% ಅಂಕಗಳೊಂದಿಗೆ 60% ಕೆಲಸದ ಅನುಭವ.

* ಸಲಹೆಗಾರ (Fraud Risk)
ಒಟ್ಟು ಹುದ್ದೆ: 04
ವಿದ್ಯಾರ್ಹತೆ: ಅಭ್ಯರ್ಥಿಯು ಪದವಿಯನ್ನು ಹೊಂದಿರಬೇಕು ಮತ್ತು ನಿವೃತ್ತ IPS ಅಥವಾ ರಾಜ್ಯ ಪೊಲೀಸ್ / CBI / ಇಂಟೆಲಿಜೆನ್ಸ್ ಬ್ಯೂರೋ / CEIB ಅಧಿಕಾರಿ ಮತ್ತು 5 ವರ್ಷಗಳ ಅನುಭವವನ್ನು ಹೊಂದಿರಬೇಕು.
* ಮ್ಯಾನೇಜರ್ (Performance Planning & Review)
ಒಟ್ಟು ಹುದ್ದೆ: 02
ವಿದ್ಯಾರ್ಹತೆ: ಅಭ್ಯರ್ಥಿಯು B.Com./B.E./B.Tech ಮತ್ತು ಮ್ಯಾನೇಜ್ಮೆಂಟ್ / MBA ನಲ್ಲಿ PG ಮತ್ತು 4 ವರ್ಷಗಳ ಅನುಭವವನ್ನು ಹೊಂದಿರಬೇಕು.
ವಯೋಮಿತಿ: ಸಾಮಾನ್ಯ ಹಾಗೂ ಮೀಸಲಾತಿ ರಹಿತ ಅಭ್ಯರ್ಥಿಗಳಿಗೆ ಕನಿಷ್ಠ 21 ವರ್ಷ ಗರಿಷ್ಠ 30 ವರ್ಷ (ಡಿಸೆಂಬರ್ 1, 2021ರಂತೆ). ಅಭ್ಯರ್ಥಿಗಳು 02/12/1991 ರಿಂದ 01/12/2000ರೊಳಗೆ ಜನಿಸಿದವರಾಗಬೇಕು.ದಿವ್ಯಾಂಗರಿಗೆ, ಆರ್ಥಿಕವಾಗಿ ಹಿಂದುಳಿದ ವರ್ಗದವರಿಗೆ10 ವರ್ಷ, ಎಸ್ ಸಿ, ಎಸ್ಟಿ ಅಭ್ಯರ್ಥಿಗಳಿಗೆ 15 ವರ್ಷ, ಒಬಿಸಿ ಅಭ್ಯರ್ಥಿಗಳಿಗೆ 13 ವರ್ಷ, ಮಾಜಿ ಯೋಧ 05, ಹಿಂದುಳಿದ ವರ್ಗ 03 ವರ್ಷಗಳ ವಯೋಮಿತಿಯಲ್ಲಿ ವಿನಾಯಿತಿ ಇರುತ್ತದೆ.
ಅರ್ಜಿ ಶುಲ್ಕ:
ಸಾಮಾನ್ಯ/ ಒಬಿಸಿ/ಆರ್ಥಿಕವಾಗಿ ಹಿಂದುಳಿದ ವರ್ಗ: 750 ರು
ಎಸ್‌ಸಿ/ ಎಸ್ಟಿ/ ಮಾಜಿ ಯೋಧ: ಯಾವುದೇ ಶುಲ್ಕವಿಲ್ಲ
ಶುಲ್ಕಪಾವತಿ ವಿಧಾನ: ಡೆಬಿಟ್ ಕಾರ್ಡ್/ ಕ್ರೆಡಿಟ್ ಕಾರ್ಡ್/ ಇಂಟರ್ನೆಟ್ ಬ್ಯಾಂಕಿಂಗ್
ನೇಮಕಾತಿ ಪ್ರಕ್ರಿಯೆ: ಪ್ರಾಥಮಿಕ ಪರೀಕ್ಷೆ ಹಾಗೂ ಮುಖ್ಯ ಪರೀಕ್ಷೆ, ಸಂದರ್ಶನ.
ಪ್ರಮುಖ ದಿನಾಂಕ:
ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಕೆ ಆರಂಭ ದಿನ: 08/04/2022
ಆನ್‌ಲೈನ್‌ನಲ್ಲಿಅರ್ಜಿ ಸಲ್ಲಿಸಲು ಕೊನೆ ದಿನಾಂಕ : 28/04/2022
ಆನ್‌ಲೈನ್‌ನಲ್ಲಿ ಪರೀಕ್ಷೆ ಜನವರಿ ತಿಂಗಳಲ್ಲಿ ನಡೆಸುವ ಸಾಧ್ಯತೆಯಿದೆ.
ಅರ್ಜಿ ಸಲ್ಲಿಸುವ ವಿಧಾನ:
* ಎಸ್‌ಬಿಐ ನೇಮಕಾತಿ ಅಧಿಸೂಚನೆ 2022ರಲ್ಲಿ ನೀಡಿರುವಂಥ ಅರ್ಹತೆ ಇದ್ದ ಅಭ್ಯರ್ಥಿಗಳು ನೇಮಕಾತಿ ಲಿಂಕ್ ಕ್ಲಿಕ್ ಮಾಡಿ.
* ಐಬಿಪಿಎಸ್ ಆನ್‌ಲೈನ್ ಮೂಲಕ ನೋಂದಣಿ ಮಾಡಿಕೊಳ್ಳಬೇಕು.
* ಆನ್‌ಲೈನ್ ಅರ್ಜಿ ಸಲ್ಲಿಸುವಾಗ ಚಾಲ್ತಿಯಲ್ಲಿರುವ ಇಮೇಲ್ ಐಡಿ ಹಾಗೂ ಮೊಬೈಲ್ ಸಂಖ್ಯೆಯನ್ನು ನೀಡಿ.
* ವಿದ್ಯಾರ್ಹತೆಗೆ ತಕ್ಕ ದಾಖಲೆ, ವಯೋಮಿತಿ ದಾಖಲೆಯನ್ನು ಲಗತ್ತಿಸಿ
* ಅರ್ಜಿ ಜೊತೆಗೆ 10ನೇ ತರಗತಿ ಅಂಕಪಟ್ಟಿ, ಪದವಿ ಪ್ರಮಾಣ ಪತ್ರ, ಜಾತಿ ಪ್ರಮಾಣ ಪತ್ರ, ಅನುಭವ ಆಧಾರ ಪತ್ರ, ಗುರುತಿನ ದೃಢೀಕರಣ ಪತ್ರ ಹಾಗೂ ಇನ್ನಿತರ ಸಂಬಂಧಿಸಿದ ಪ್ರಮಾಣ ಪತ್ರಗಳನ್ನು ಲಗತ್ತಿಸತಕ್ಕದ್ದು.
* SBI Specialist Cadre Officers ಲಿಂಕ್ ಮಾತ್ರ ಕ್ಲಿಕ್ ಮಾಡಿ
* ಭರ್ತಿಯಾಗಿ ಅರ್ಜಿ ಜೊತೆಗೆ ಅಗತ್ಯ ದಾಖಲೆ, ಪ್ರಮಾಣ ಪತ್ರಗಳನ್ನು ಸ್ಕ್ಯಾನ್ ಮಾಡಿ ಒದಗಿಸಿ, ಇತ್ತೀಚಿನ ಭಾವಚಿತ್ರ ನೀಡಿ
* ಅರ್ಜಿ ಸಲ್ಲಿಕೆ ನಂಬರ್, ಸ್ವೀಕೃತಿ ಸಂಖ್ಯೆಯನ್ನು ಗುರುತಿಟ್ಟುಕೊಳ್ಳಿ, ಪರೀಕ್ಷೆ ನಡೆಯುವ ಮುಂದಿನ ದಿನಾಂಕದ ಬಗ್ಗೆ ನಿಮ್ಮ ಇಮೇಲ್, ಮೊಬೈಲ್ ಸಂಖ್ಯೆಗೆ ಮಾಹಿತಿ ನೀಡಲಾಗುತ್ತದೆ.
ಅರ್ಜಿ ಸಲ್ಲಿಸುವ ವಿಧಾನ ಹಾಗೂ ಇನ್ನಿತರ ಮಾಹಿತಿಗಾಗಿ ಕ್ಲಿಕ್ ಮಾಡಿ (https://sbi.co.in)
-
Gold Price March 11: ಚಿನ್ನದ ಬೆಲೆಯಲ್ಲಿ ಹೊಸ ದಾಖಲೆ: ಬೆಳ್ಳಿ ಪ್ರಿಯರಿಗೆ ಅಚ್ಚರಿ, ಎಷ್ಟಿದೆ ಇಂದಿನ ಚಿನ್ನ - ಬೆಳ್ಳಿ ಬೆಲೆ -
Karnataka Weather Mar 12: ಬಿಸಿಲು ಹೆಚ್ಚಳದ ನಡುವೆ ಮಾರ್ಚ್ 15ರಿಂದ ಕರ್ನಾಟಕದಲ್ಲಿ ಮಳೆ, ಹೇಗಿದೆ ಇಂದಿನ ವೆದರ್ -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
Rain In Karnataka: ಈ ವಾರದಲ್ಲಿ ಕರ್ನಾಟಕದ ಈ ಭಾಗಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ಹೇಗಿದೆ ವೆದರ್ -
Gold Rate March 12: ಚಿನ್ನದ ಬೆಲೆ 10,900 ರೂ., ಬೆಳ್ಳಿ ಬೆಲೆ 10,000 ರೂ. ಭರ್ಜರಿ ಇಳಿಕೆ, ಬಂಗಾರ ಪ್ರಿಯರು ಫಿದಾ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
ನಮ್ಮದು ಲವ್ ಜಿಹಾದ್ ಅಲ್ಲ, ಮತಾಂತರವೂ ಇಲ್ಲ, ಹಿಂದೂ ಸಂಪ್ರದಾಯದಂತೆ ವಿವಾಹ: ಮೊನಾಲಿಸಾ-ಫರ್ಹಾನ್ ಖಾನ್ ಸ್ಪಷ್ಟನೆ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್‌ಲೈನ್ ವ್ಯವಸ್ಥೆ












Click it and Unblock the Notifications