• search
  • Live TV
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts

ಎಸ್‌ಬಿಐ ಬ್ಯಾಂಕ್ ನೇಮಕಾತಿ; 641 ಹುದ್ದೆಗಳಿಗೆ ಅರ್ಜಿ ಹಾಕಿ

|
Google Oneindia Kannada News

ಬೆಂಗಳೂರು, ಮೇ 19; ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ 641 ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಗಳನ್ನು ಆಹ್ವಾನಿಸಿದೆ. ಆಸಕ್ತ, ಅರ್ಹ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಕೆ ಮಾಡಲು ಜೂನ್ 7, 2022 ಕೊನೆಯ ದಿನವಾಗಿದೆ.

ಎಸ್‌ಬಿಐ Channel Manager Facilitator, Support Officer ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದೆ. ಆಯ್ಕೆಯಾದ ಅಭ್ಯರ್ಥಿಗಳು ದೇಶದ ಯಾವುದೇ ನಗರದಲ್ಲಿ ಕೆಲಸ ಮಾಡಬೇಕಿದೆ.

ಕರ್ನಾಟಕದ ಬ್ಯಾಂಕ್ ನೇಮಕಾತಿ: ಕ್ಲರ್ಕ್ ಹುದ್ದೆಗೆ ಅರ್ಜಿ ಆಹ್ವಾನಕರ್ನಾಟಕದ ಬ್ಯಾಂಕ್ ನೇಮಕಾತಿ: ಕ್ಲರ್ಕ್ ಹುದ್ದೆಗೆ ಅರ್ಜಿ ಆಹ್ವಾನ

ಒಟ್ಟು 641 ಹುದ್ದೆಗಳಿವೆ. Channel Manager Facilitator 503, Channel Manager supervisor 130, ಸಪೋರ್ಟ್‌ ಅಫೀಸರ್ 8 ಹುದ್ದೆಗಳಿವೆ. ಆಯ್ಕೆಯಾದ ಅಭ್ಯರ್ಥಿಗಳಿಗೆ 36,000 ದಿಂದ 41,000 ರೂ. ವೇತನವನ್ನು ನಿಗದಿ ಮಾಡಲಾಗಿದೆ.

ಕೊಪ್ಪಳದಲ್ಲಿ ವಿವಿಧ ಹುದ್ದೆಗಳು ಖಾಲಿ ಇವೆ, ಅರ್ಜಿ ಹಾಕಿ ಕೊಪ್ಪಳದಲ್ಲಿ ವಿವಿಧ ಹುದ್ದೆಗಳು ಖಾಲಿ ಇವೆ, ಅರ್ಜಿ ಹಾಕಿ

ಅರ್ಜಿಗಳನ್ನು ಸಲ್ಲಿಕೆ ಮಾಡುವ ಅಭ್ಯರ್ಥಿಗಳಿಗೆ ಸ್ಟೇಟ್ ಬ್ಯಾಂಕ್ ಇಂಡಿಯಾ ನೇಮಕಾತಿ ನಿಯಮಗಳ ಅನ್ವಯ ಶೈಕ್ಷಣಿಕ ವಿದ್ಯಾರ್ಹತೆಯನ್ನು ನಿಗದಿ ಮಾಡಲಾಗಿದೆ.

ಕೆಎಸ್ಆರ್‌ಟಿಸಿ ಉದ್ಯೋಗ ಮಾಹಿತಿ; ತಾತ್ಕಾಲಿಕವಾಗಿ ಚಾಲಕರ ಹುದ್ದೆ ಭರ್ತಿ ಕೆಎಸ್ಆರ್‌ಟಿಸಿ ಉದ್ಯೋಗ ಮಾಹಿತಿ; ತಾತ್ಕಾಲಿಕವಾಗಿ ಚಾಲಕರ ಹುದ್ದೆ ಭರ್ತಿ

ಅನುಭವದ ವಿವರಗಳು; ಎಟಿಎಂ ಕಾರ್ಯಾಚರಣೆಯಲ್ಲಿ ಕಾರ್ಯ ನಿರ್ವಹಣೆ ಮಾಡಿ ನಿವೃತ್ತಿ ಹೊಂದಿದ ಅಭ್ಯರ್ಥಿಗಳಿಗೆ ಆದ್ಯತೆ ನೀಡಲಾಗುತ್ತದೆ.

ನಿವೃತ್ತಿ ಹೊಂದಿದ ಅಭ್ಯರ್ಥಿಗಳು ಕಡ್ಡಾಯವಾಗಿ ಸ್ಮಾರ್ಟ್‌ ಫೋನ್ ಹೊಂದಿರಬೇಕು. ಮೊಬೈಲ್, ಲ್ಯಾಪ್ ಟಾಪ್, ಡೆಸ್ಕ್ ಟಾಪ್ ನಿರ್ವಹಣೆ ಮಾಡುವ ಕೌಶಲ್ಯ ಹೊಂದಿರಬೇಕು.

SBI Recruitment 2022 Apply Till June 7

ಎಸ್‌ಬಿಐ ನೇಮಕಾತಿ ನಿಯಮಗಳ ಪ್ರಕಾರ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಕನಿಷ್ಠ 60 ಮತ್ತು ಗರಿಷ್ಠ 63 ವರ್ಷದ ವಯೋಮಿತಿ ನಿಗದಿ ಮಾಡಲಾಗಿದೆ (18 ಮೇ 2022)ಕ್ಕೆ ಅನ್ವಯವಾಗುವಂತೆ. ನೇಮಕಾತಿ ನಿಯಮಗಳ ಅನ್ವಯ ವಯೋಮಿತಿ ಸಡಿಲಿಕೆ ಇರುತ್ತದೆ.

ಶಾರ್ಟ್‌ ಲಿಸ್ಟ್ ಮತ್ತು ಸಂದರ್ಶನದ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ. ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಕೆ ಮಾಡುವ ಮುನ್ನ ಸರಿಯಾದ ಇ-ಮೇಲ್ ಐಡಿ ಮತ್ತು ಮೊಬೈಲ್ ನಂಬರ್ ನಮೂದಿಸಬೇಕು. ಆಸಕ್ತ ಮತ್ತು ಅರ್ಹರು ಹೆಚ್ಚಿನ ಮಾಹಿತಿಗಾಗಿ sbi.co.in ವೆಬ್‌ಸೈಟ್‌ಗೆ ಭೇಟಿ ನೀಡಬಹುದಾಗಿದೆ.

ರೈತರಿಂದ ಅರ್ಜಿ ಆಹ್ವಾನ; ಮಡಿಕೇರಿಯಲ್ಲಿ 2022-23 ಸಾಲಿನ ರಾಷ್ಟ್ರೀಯ ಕೃಷಿ ವಿಕಾಸ ಯೋಜನೆಯಡಿ ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆಯಿಂದ ಅರ್ಹ ರೈತರಿಗೆ ತಲಾ 2 ಕೌಮ್ಯಾಟ್ (ಜಾನುವಾರುಗಳ ರಬ್ಬರ್ ನೆಲದ ಹಾಸು) ವಿತರಣೆ ಮಾಡಲು ಅರ್ಜಿ ಕರೆಯಲಾಗಿದೆ. ರೈತರಿಗೆ ಘಟಕದ ಮೊತ್ತ ರೂ. 6190 ರಲ್ಲಿ ಶೇ.50 ರ ಸಹಾಯಧನದ ರೂಪದಲ್ಲಿ ರೈತರಿಗೆ ವಿತರಿಸಲಾಗುತ್ತದೆ.

ಅರ್ಜಿ ಸಲ್ಲಿಸುವ ರೈತರು ಕನಿಷ್ಠ 2 ಜಾನುವಾರುಗಳನ್ನು ಹೊಂದಿರಬೇಕು. ಪಶು ವೈದ್ಯಾಧಿಕಾರಿಗಳಿಂದ ಜಾನುವಾರು ಹೊಂದಿರುವ ಬಗ್ಗೆ ದೃಢೀಕರಣ ಪತ್ರ, ಜಾತಿ ಪ್ರಮಾಣ ಪತ್ರ (ಎಸ್‍ಸಿ, ಎಸ್‍ಟಿ) ಹಾಗೂ ಇತರ ದಾಖಲಾತಿಗಳೊಂದಿಗೆ ಭರ್ತಿ ಮಾಡಿದ ಅರ್ಜಿಯನ್ನು ಜೂನ್ 6 ರೊಳಗೆ ಸಲ್ಲಿಸಬೇಕು.

ಆಸಕ್ತರು ಹೆಚ್ಚಿನ ಮಾಹಿತಿಗೆ ಹತ್ತಿರದ ಪಶು ಚಿಕಿತ್ಸಾಲಯಗಳನ್ನು ಸಂಪರ್ಕಿಸುವಂತೆ ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆಯ ಉಪ ನಿರ್ದೇಶಕರು ತಿಳಿಸಿದ್ದಾರೆ.

ವಿವಿಧ ತರಬೇತಿಗೆ ಅರ್ಜಿ ಆಹ್ವಾನ; ಕೊಪ್ಪಳ ಜಿಲ್ಲೆಯಲ್ಲಿ ಕೇಂದ್ರ ಸರ್ಕಾರದ ಗ್ರಾಮೀಣಾಭಿವೃದ್ಧಿ ಮಂತ್ರಲಯದಡಿ ಕೆನರಾ ಬ್ಯಾಂಕ್‌ನ ಸಹಭಾಗಿತ್ವದಲ್ಲಿ ಗ್ರಾಮೀಣ ಭಾಗದ ಅರ್ಹ ಬಿಪಿಎಲ್ ಕುಟುಂಬದ ನಿರುದ್ಯೋಗಿ ಯುವಕ-ಯುವತಿಯರಿಗೆ ವಿವಿಧ ತರಬೇತಿಗಳನ್ನು ಉಚಿತವಾಗಿ ನೀಡಲಾಗುತ್ತಿದೆ. ಆಸಕ್ತರಿಂದ ಅರ್ಜಿ ಆಹ್ವಾನಿಸಲಾಗಿದೆ.

ಬಿಪಿಎಲ್ ಕುಟುಂಬದ 18 ರಿಂದ 45 ವರ್ಷದೊಳಗಿನ ವಾಣಿಜ್ಯ ವಿಷಯವನ್ನು ಓದಿದ ನಿರುದ್ಯೋಗಿ ಯುವಕ/ ಯುವತಿಯರಿಗೆ 10 ದಿನಗಳ ಪೇಪರ್ ಕವರ್, ಬ್ಯಾಗ್ ಮತ್ತು ಪೇಪರ್ ಲಕೋಟೆಗಳ ತಯಾರಿಕಾ ತರಬೇತಿ ನೀಡಲಾಗುತ್ತದೆ.

10 ದಿನಗಳ ಫಾಸ್ಟ್ ಫುಡ್ ತರಬೇತಿ ಹಾಗೂ ನಿರುದ್ಯೋಗಿ ಯುವಕರಿಗಾಗಿ 13 ದಿನಗಳ ಸಿಸಿ ಕ್ಯಾಮೆರಾ ದುರಸ್ತಿ ಮತ್ತು ಅಳವಡಿಕೆಯ ತರಬೇತಿ, 30 ದಿನಗಳ ಎಲೆಕ್ಟ್ರಿಕ್ ಮೋಟರ್ ರಿವೈಂಡಿಂಗ್ ತರಬೇತಿಯನ್ನು ಊಟ ಹಾಗೂ ವಸತಿಯೊಂದಿಗೆ ಉಚಿತವಾಗಿ ನೀಡಲಾಗುತ್ತದೆ ಎಂದು ಪ್ರಕಟಣೆ ತಿಳಿಸಿದೆ.

ಆಸಕ್ತರು ಕೆನರಾ ಬ್ಯಾಂಕ್ ದೇಶಪಾಂಡೆ ಸ್ವ-ಉದ್ಯೋಗ ತರಬೇತಿ ಸಂಸ್ಥೆ, ಹಳಿಯಾಳ, ಉತ್ತರ ಕನ್ನಡ ಜಿಲ್ಲೆ ವಿಳಾಸಕ್ಕೆ ಮೇ 31 ರೊಳಗಾಗಿ ಸಂಪರ್ಕಿಸಬಹುದು.

ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ 08284-295307. ಮೊಬೈಲ್ ಸಂಖ್ಯೆ 9483485489, 9482188780, 9844796998, 8197022501 ಗೆ ಸಂಪರ್ಕಿಸಬಹುದು.

English summary
State Bank of India (SBI) invited applications for channel manager facilitator, support officer posts. Candidates can apply online till June 7, 2022.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X