SBI Bank Jobs 2023: ಭರ್ಜರಿ ಉದ್ಯೋಗವಕಾಶ, 6160 ಹುದ್ದೆಗಳು ಖಾಲಿ ಇವೆ, ವೇತನ ವಿವರ
ಬೆಂಗಳೂರು, ಸೆಪ್ಟಂಬರ್ 13: ಭಾರತೀಯ ಸ್ಟೇಟ್ ಬ್ಯಾಂಕ್ (State Bank of India) ತನ್ನಲ್ಲಿ ಖಾಲಿ ಇರುವ ಸಾವಿರಾರು ಅಪ್ರೆಂಟಿಸ್ ಹುದ್ದೆಗಳ ಭರ್ತಿಗೆ ಅರ್ಹರಿಂದ ಅಹ್ವಾನಿಸಿದೆ. ಬ್ಯಾಂಕಿಂಗ್ ಕ್ಷೇತ್ರದಲ್ಲಿ ಉದ್ಯೋಗ ಹುಡುಕುತ್ತಿರುವವರು ಈ ಕೂಡಲೇ ಅರ್ಜಿ ಸಲ್ಲಿಸಬೇಕಿದೆ.
ಭಾರತೀಯ ಸ್ಟೇಟ್ ಬ್ಯಾಂಕ್ (SBI) ಬ್ಯಾಂಕ್‌ನಲ್ಲಿ ಒಟ್ಟು 6160 ಅಪ್ರೆಂಟಿಸ್ ಹುದ್ದೆಗಳು ಖಾಲಿ ಇವೆ. ಈ ಪೈಕಿ ಕರ್ನಾಟಕದಲ್ಲಿ 175 ಹುದ್ದೆಗಳು ಖಾಲಿ ಇವೆ. ಈ ಸಂಬಂಧ ಬ್ಯಾಂಕ್ ನೇಮಕಾತಿ ಪ್ರಕ್ರಿಯೆ ಆರಂಭಿಸಿದೆ. ಬ್ಯಾಂಕಿಂಗ್ ಕ್ಷೇತ್ರದಲ್ಲಿ ಉದ್ಯೋಗ ಬಯಸುವ ಆಸಕ್ತ ಅಭ್ಯರ್ಥಿಗಳಿಗೆ ಇದೊಂದು ಉತ್ತಮ ಅವಕಾಶವಾಗಿದ್ದು, ಸೆಪ್ಟೆಂಬರ್ 21ರೊಳಗಾಗಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸುವಂತೆ ತಿಳಿಸಲಾಗಿದೆ.

ಎಸ್‌ಬಿಐ ನೇಮಕಾತಿ ಪೂರ್ಣ ಮಾಹಿತಿ
ಸಂಸ್ಥೆ ಹೆಸರು: ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ
ಹುದ್ದೆ ಹೆಸರು: ಅಪ್ರೆಂಟಿಸ್
ಶೈಕ್ಷಣಿಕ ಅರ್ಹತೆ: ಪದವಿ
ಒಟ್ಟು ಖಾಲಿ ಹುದ್ದೆ: 6160
ಮಾಸಿಕ ವೇತನ: 15,000 ರೂಪಾಯಿ
ಉದ್ಯೋಗದ ಸ್ಥಳ: ಭಾರತ
ಶೈಕ್ಷಣಿಕ ಅರ್ಹತೆ ವಿವರ
ಅರ್ಜಿ ಸಲ್ಲಿಸಲು ಇಚ್ಛಿಸುವ ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ ಅಥವಾ ಮಂಡಳಿಯಿಂದ ಕಡ್ಡಾಯವಾಗಿ ಪದವಿ ಮುಗಿಸಿರಬೇಕು ಎಂದು ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಅಥವಾ ಭಾರತೀಯ ಸ್ಟೇಟ್ ಬ್ಯಾಂಕ್ ನೇಮಕಾತಿ ಅಧಿಸೂಚನೆ ತಿಳಿಸಿದೆ.
ವಯಸ್ಸು ಎಷ್ಟರಬೇಕು
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ವಯಸ್ಸು ಇದೇ ವರ್ಷ ಕಳೆದ ಆಗಸ್ಟ್ 1ಕ್ಕೆ ಕನಿಷ್ಠ 20 ವರ್ಷ ಮತ್ತು ಗರಿಷ್ಠ 28 ವರ್ಷ ಮೀರಿರಬಾರದು. ಇನ್ನೂ ಮೀಸಲಾತಿ ಅನುಸಾರ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ನೀಡಲಾಗುತ್ತದೆ ಎಂದು ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಅಥವಾ ಭಾರತೀಯ ಸ್ಟೇಟ್ ಬ್ಯಾಂಕ್ ಸೂಚಿಸಿದೆ.
ಅರ್ಜಿ ಶುಲ್ಕ
ಸಾಮಾನ್ಯ/EWS/OBC ಅಭ್ಯರ್ಥಿಗಳು ಅರ್ಜಿ ತುಂಬಲು 300 ರೂಪಾಯಿ, ಪರಿಶಿಷ್ಟ ಜಾತಿ ಮತ್ತು ಪಂಗಡ, PWD ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕ ಇರುವುದಿಲ್ಲ ಅರ್ಜಿ ಶುಲ್ಕ ಇಲ್ಲ. ಅರ್ಜಿ ಸಲ್ಲಿಕೆ ಬಳಿಕ ಆನ್‌ಲೈನ್ ಮೂಲಕ ಶುಲ್ಕ ಪಾವತಿಸಬೇಕು.
ಉದ್ಯೋಗದ ಸ್ಥಳ: ಆಯ್ಕೆ ಪ್ರಕ್ರಿಯೆ
ಕರ್ನಾಟಕ ಸೇರಿದಂತೆ ಭಾರತದಲ್ಲಿ ಎಲ್ಲಿ ಬೇಕಾದರೂ ಪೋಸ್ಟಿಂಗ್ ನೀಡಲಾಗುವುದು. ಅಭ್ಯರ್ಥಿಗಳಿಗೆ ಮೊದಲು ಲಿಖಿತ ಪರೀಕ್ಷೆ ನಡೆಸಲಾಗುವುದು. ಸ್ಥಳೀಯ ಭಾಷಾ ಪರೀಕ್ಷೆ ಜೊತೆಗೆ ದಾಖಲಾತಿ ಪರಿಶೀಲನೆ ನಡೆಸಿ ವೈದ್ಯಕೀಯ ಪರೀಕ್ಷೆ ನಡೆಸುವ ಮೂಲಕ ಆಯ್ಕೆ ಮಾಡಿಕೊಳ್ಳಲಾಗುವುದು.
ನೆನಪಿಡಬೇಕಾದ ದಿನಾಂಕ
ಅರ್ಜಿ ಸಲ್ಲಿಕೆ: ಸೆಪ್ಟಂಬರ್ 01 ಆರಂಭ
ಅರ್ಜಿ ಸಲ್ಲಿಕೆ ಕೊನೆ ದಿನ: 2023 ಸೆಪ್ಟೆಂಬರ್ 21
ಅರ್ಜಿ ಶುಲ್ಕ ಪಾವತಿಗೆ ಕಡೆ ದಿನ: ಸೆಪ್ಟೆಂಬರ್ 21












Click it and Unblock the Notifications