ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಎಸ್‌ಬಿಐ ನೇಮಕಾತಿ; 2056 ಹುದ್ದೆಗೆ ಅನ್‌ಲೈನ್ ಮೂಲಕ ಅರ್ಜಿ ಹಾಕಿ

|
Google Oneindia Kannada News

ಬೆಂಗಳೂರು, ಅಕ್ಟೋಬರ್ 05; ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ( ಎಸ್) Probationary Officer ಹುದ್ದೆಗಳ ಭರ್ತಿಗೆ ಅರ್ಜಿಗಳನ್ನು ಕರೆದಿದೆ. ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಕೆ ಮಾಡಲು ಅಕ್ಟೋಬರ್ 25 ಕೊನೆಯ ದಿನವಾಗಿದೆ.

ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಒಟ್ಟು 2056 Probationary Officer ಹುದ್ದೆಗಳನ್ನು ಭರ್ತಿ ಮಾಡುತ್ತಿದೆ. ಆಯ್ಕೆಯಾದ ಅಭ್ಯರ್ಥಿಗಳು ದೇಶದ ಯಾವುದೇ ನಗರದಲ್ಲಿ ಕೆಲಸ ಮಾಡಬೇಕಿದೆ.

ಸ್ಟಾಫ್ ಸೆಲೆಕ್ಷನ್ ಕಮಿಷನ್ ನೇಮಕಾತಿ: 3261 ಹುದ್ದೆಗಳಿವೆ ಸ್ಟಾಫ್ ಸೆಲೆಕ್ಷನ್ ಕಮಿಷನ್ ನೇಮಕಾತಿ: 3261 ಹುದ್ದೆಗಳಿವೆ

ಅರ್ಜಿಗಳನ್ನು ಸಲ್ಲಿಸುವ ಅಭ್ಯರ್ಥಿಗಳು ಎಸ್‌ಬಿಐ ನೇಮಕಾತಿ ನಿಯಮಗಳ ಅನ್ವಯ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪದವಿಯನ್ನು ಪಡೆದಿರಬೇಕು. ನೇಮಕಾತಿ ನಿಯಮಗಳ ಅನ್ವಯ ವೇತನವನ್ನು ನಿಗದಿ ಮಾಡಲಾಗಿದೆ.

ಬಿಎಂಆರ್‌ಸಿಎಲ್ ನೇಮಕಾತಿ; ಅ.27ರ ತನಕ ಅರ್ಜಿ ಹಾಕಿ ಬಿಎಂಆರ್‌ಸಿಎಲ್ ನೇಮಕಾತಿ; ಅ.27ರ ತನಕ ಅರ್ಜಿ ಹಾಕಿ

SBI Recruitment Apply For 2056 Probationary Officer Post

ಎಸ್‌ಬಿಐ ನೇಮಕಾತಿ ನಿಯಮಗಳ ಪ್ರಕಾರ ಅರ್ಜಿ ಸಲ್ಲಿಸುವ ಅಭ್ಯರ್ಥಿಗೆ ಕನಿಷ್ಠ ವಯೋಮಿತಿ 21 ವರ್ಷ. ಏಪ್ರಿಲ್ 1, 2021ಕ್ಕೆ ಅನ್ವಯವಾಗುವಂತೆ ಗರಿಷ್ಠ ವಯೋಮಿತಿ 30 ವರ್ಷಗಳು. ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ 5, ಇತರೆ ಹಿಂದುಳಿದ ವರ್ಗದ ಅಭ್ಯರ್ಥಿಗಳಿಗೆ 3 ವರ್ಷದ ವಯೋಮಿತಿ ಸಡಿಲಿಕೆ ಇದೆ.

ಗ್ರಾಮ ಲೆಕ್ಕಾಧಿಕಾರಿಗಳ ನೇಮಕಾತಿ; ಸರ್ಕಾರ ಹೇಳುವುದೇನು?ಗ್ರಾಮ ಲೆಕ್ಕಾಧಿಕಾರಿಗಳ ನೇಮಕಾತಿ; ಸರ್ಕಾರ ಹೇಳುವುದೇನು?

ಅರ್ಜಿಗಳನ್ನು ಸಲ್ಲಿಕೆ ಮಾಡುವ ಸಾಮಾನ್ಯ/ ಒಬಿಸಿ ವರ್ಗದ ಅಭ್ಯರ್ಥಿಗಳು 750 ರೂ. ಶುಲ್ಕವನ್ನು ಪಾವತಿ ಮಾಡಬೇಕಿದೆ. ಎಸ್‌ಸಿ/ ಎಸ್‌ಟಿ ವರ್ಗದ ಅಭ್ಯರ್ಥಿಗಳಿಗೆ ಯಾವುದೇ ಶುಲ್ಕ ಇರುವುದಿಲ್ಲ.

ಆಸಕ್ತ ಅಭ್ಯರ್ಥಿಗಳು sbi.co.in ವೆಬ್‌ಸೈಟ್‌ಗೆ ಭೇಟಿ ನೀಡಿ ಅರ್ಜಿಗಳನ್ನು ಸಲ್ಲಿಸಬೇಕಿದೆ. ಅರ್ಜಿ ಸಲ್ಲಿಕೆ ಮಾಡುವಾಗ ಮುಂದಿನ ಸಂಪರ್ಕಕ್ಕಾಗಿ ಸರಿಯಾದ ಇ-ಮೇಲ್ ಐಡಿ ಮತ್ತು ಮೊಬೈಲ್ ಸಂಖ್ಯೆಯನ್ನು ನಮೂದಿಸಿ.

ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಮೊದಲ ಲಿಖಿತ ಪರೀಕ್ಷೆ ಆನ್‌ಲೈನ್ ಮೂಲಕ ನವೆಂಬರ್/ ಡಿಸೆಂಬರ್‌ನಲ್ಲಿ ನಡೆಸಲಾಗುತ್ತದೆ. ಡಿಸೆಂಬರ್‌ನಲ್ಲಿ ಫಲಿತಾಂಶ ಪ್ರಕಟಿಸಲಾಗುತ್ತದೆ. ಆನ್‌ಲೈನ್ ಮೂಲಕ ಮುಖ್ಯ ಪರೀಕ್ಷೆ ಡಿಸೆಂಬರ್‌ನಲ್ಲಿ ನಡೆಯಲಿದೆ.

ಸ್ವ ಉದ್ಯೋಗ ತರಬೇತಿ; ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಹಾಗೂ ಜೀವನೋಪಾಯ ಇಲಾಖೆ ಪ್ರಾಯೋಕತ್ವದಲ್ಲಿ ಸಿಡಾಕ್ ಧಾರವಾಡ ಸಂಸ್ಥೆಯ ಮೂಲಕ ಅನುಷ್ಠಾನಗೊಳ್ಳುತ್ತಿರುವ 10 ದಿನಗಳ ಉದ್ಯಮಶೀಲತಾ ತರಬೇತಿ ಕಾರ್ಯಕ್ರಮವನ್ನು ನವೆಂಬರ್ ತಿಂಗ 2ನೇ ವಾರ ದಾವಣಗೆರೆ ಜಿಲ್ಲೆಯಲ್ಲಿ ಆಯೋಜಿಸಲಾಗುತ್ತಿದೆ.

'ಸ್ವಂತ ಉದ್ಯೋಗ ಸ್ಥಾಪಿಸಿ, ಸುಖ ಸಮೃದ್ಧಿ ಸಾಧಿಸಿ' ಎಂಬಂತೆ ದಾವಣಗೆರೆಯ ಸಿಡಾಕ್ ಕೇಂದ್ರದಿಂದ ಸ್ವಂತ ಉದ್ಯಮ ಸ್ಥಾಪಿಸಲು ಇಚ್ಛಿಸುವ ಹಾಗೂ ಸ್ವ-ಉದ್ಯಮ ಪ್ರಾರಂಭಿಸಿ ಉದ್ಯಮವನ್ನು ಅಭಿವೃದ್ಧಿಪಡಿಸಲು ಆಸಕ್ತ ಹೊಂದಿರುವ ಅಭ್ಯರ್ಥಿಗಳಿಗೆ 10 ದಿನಗಳ ವಸತಿ ಸಹಿತ ಉಚಿತ ತರಬೇತಿ ನೀಡಲಾಗುತ್ತದೆ.

ಅದರಂತೆ ಉದ್ಯಮಕ್ಕೆ ಸಂಬಂಧಿಸಿದಂತೆ ಉದ್ಯಮ ಸ್ಥಾಪಿಸಲು ಅನುಸರಿಸಬೇಕಾದ ಮಜಲುಗಳು, ಸರ್ಕಾರದ ನಿಯಮಗಳು ಮತ್ತು ನಿಯಂತ್ರಣಗಳು, ಸ್ಥಳೀಯ ಸಂಪನ್ಮೂಲಗಳ ಬಳಕೆ, ವ್ಯವಹಾರ ನೋಂದಣಿ ಮಾಡುವ ವಿಧಾನ, ತೆರಿಗೆ ನಿಯಮಗಳು, ಬ್ಯಾಂಕ್ ಸಾಲ ಯೋಜನೆಗಳು, ಸಾಲಕ್ಕೆ ಅರ್ಜಿ ಸಲ್ಲಿಸುವ ವಿಧಾನ, ಸರ್ಕಾರದ ಯೋಜನೆಗಳು, ಯೋಜನಾ ವರದಿ ತಯಾರಿಕೆ, ಹಣಕಾಸು ನಿರ್ವಹಣೆ, ಮಾರುಕಟ್ಟೆ ನಿರ್ವಹಣೆ ಹಾಗೂ ಮುಂತಾದ ವಿಷಯಗಳ ಬಗ್ಗೆ ತರಬೇತಿಯಲ್ಲಿ ಮಾಹಿತಿ ಕೊಡಲಾಗುತ್ತದೆ.

ತರಬೇತಿಯನ್ನು ಪಡೆಯಲು ಆಸಕ್ತಿ ಇರುವವರು ಹೆಚ್ಚಿನ ವಿವರಗಳಿಗಾಗಿ 9164742033 ಬಸವರಾಜ ಜಿ. ಬಿ. ತರಬೇತುದಾರರು, ಜಂಟಿ ನಿರ್ದೇಶಕರು, ಸಿಡಾಕ್ ಕಚೇರಿ, ಪ್ಲಾಟ್ ನಂ.78 ಎ-(ಪಿ1), ಕರೂರು ಕೈಗಾರಿಕಾ ಪ್ರದೇಶ, ಪಿ.ಬಿ ರಸ್ತೆ ದಾವಣಗೆರೆ ಇವರನ್ನು ಸಂಪರ್ಕಿಸಬಹುದು.

ತರಬೇತಿಗೆ ಅರ್ಜಿ ಆಹ್ವಾನ; 2021-22ನೇ ಸಾಲಿನಲ್ಲಿ ಬೀದರ್‌ಜಿಲ್ಲೆಯಲ್ಲಿ ಕಾನೂನು ಪದವಿ ಪಡೆದಿರುವ ಮತೀಯ ಅಲ್ಪಸಂಖ್ಯಾತರ 3 ಅಭ್ಯರ್ಥಿಗಳಿಗೆ ಸರಕಾರಿ ವಕೀಲರು ಹಾಗೂ 20 ವರ್ಷಗಳಿಗಿಂತ ಹೆಚ್ಚಿನ ಅನುಭವವುಳ್ಳ ವಕೀಲರಿಂದ ತರಬೇತಿ ಕೊಡಿಸಲು ಅರ್ಜಿ ಕರೆಯಲಾಗಿದೆ. ತರಬೇತಿಯ ಅವಧಿಯು 4 ವರ್ಷ ಇದ್ದು, ತರಬೇತಿಯ ಅವಧಿಯಲ್ಲಿ ಮಾಸಿಕ 5 ಸಾವಿರ ರೂ. ತರಬೇತಿ ಭತ್ಯೆ ನೀಡಲಾಗುತ್ತದೆ.

ಅಭ್ಯರ್ಥಿಗಳು ಜಿಲ್ಲಾ ಅಧಿಕಾರಿಗಳು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಬೀದರ್, ಮೌಲಾನಾ ಆಜಾದ ಭವನ, ಗುರುನಾನಕ ಝಿರಾದಿಂದ ಚಿಕ್ಕಪೇಟರಿಂಗ್ ರಸ್ತೆ, ಬೀದರ್ ಇವರಿಗೆ ಅರ್ಜಿಗಳನ್ನು ಅಕ್ಟೋಬರ್ 30ರ ತನಕ ಸಲ್ಲಿಸಬುದು. ಹೆಚ್ಚಿನ ಮಾಹಿತಿಗೆ ಬೀದರ್ ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯನ್ನು ಸಂಪರ್ಕಿಸಬಹುದು.

English summary
State Bank of India invited applications for Probationary Officer post. Candidates can apply online for 2056 post till October 25, 2021.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X