ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಎಸ್‌ಬಿಐ ನೇಮಕಾತಿ; ಮುಂಬೈ ಮತ್ತು ಬೆಂಗಳೂರಿನಲ್ಲಿ ಕೆಲಸ

|
Google Oneindia Kannada News

ಬೆಂಗಳೂರು, ಫೆಬ್ರವರಿ 08; ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ 48 ಅಸಿಸ್ಟೆಂಟ್ ಮ್ಯಾನೇಜರ್ ಹುದ್ದೆಗಳಿಗೆ ಅರ್ಜಿಗಳನ್ನು ಕರೆದಿದೆ. ಆಸಕ್ತರು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಕೆ ಮಾಡಲು ಫೆಬ್ರವರಿ 25 ಕೊನೆಯ ದಿನವಾಗಿದೆ.

ಅಸಿಸ್ಟೆಂಟ್ ಮ್ಯಾನೇಜರ್ (ನೆಟ್‌ವರ್ಕ್ ಸೆಕ್ಯುರಿಟಿ ಸ್ಪೆಷಲಿಸ್ಟ್) 15 ಹುದ್ದೆಗಳು. ಅಸಿಸ್ಟೆಂಟ್ ಮ್ಯಾನೇಜರ್ (ರೂಟಿಂಗ್ & ಸ್ವಿಚ್ಚಿಂಗ್) 33 ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದೆ. ಆನ್‌ಲೈನ್ ಮೂಲಕ ಮಾತ್ರ ಅರ್ಜಿ ಸಲ್ಲಿಸಬೇಕು.

ಕಾರ್ಮಿಕ ರಾಜ್ಯ ವಿಮಾ ನಿಗಮ ನೇಮಕಾತಿ; ಮಾ.7ರ ತನಕ ಅರ್ಜಿ ಹಾಕಿ ಕಾರ್ಮಿಕ ರಾಜ್ಯ ವಿಮಾ ನಿಗಮ ನೇಮಕಾತಿ; ಮಾ.7ರ ತನಕ ಅರ್ಜಿ ಹಾಕಿ

ಆಯ್ಕೆಯಾದ ಅಭ್ಯರ್ಥಿಗಳು ಬೆಂಗಳೂರು, ಮುಂಬೈನಲ್ಲಿ ಕೆಲಸ ಮಾಡಬೇಕಿದೆ. ಅಭ್ಯರ್ಥಿಗಳಿಗೆ ವೇತನ ಶ್ರೇಣಿ 36,000-63,840 ರೂ. ನಿಗದಿ ಮಾಡಲಾಗಿದೆ.

ಕೆಪಿಟಿಸಿಎಲ್ ನೇಮಕಾತಿ ವಿವರಗಳು; 1492 ಹುದ್ದೆಗಳಿಗೆ ಅರ್ಜಿ ಹಾಕಿಕೆಪಿಟಿಸಿಎಲ್ ನೇಮಕಾತಿ ವಿವರಗಳು; 1492 ಹುದ್ದೆಗಳಿಗೆ ಅರ್ಜಿ ಹಾಕಿ

SBI Recruitment Apply For 48 Assistant Manager Posts

ಸ್ಟೇಟ್ ಬ್ಯಾಂಕ್‌ ಆಫ್ ಇಂಡಿಯಾ ನೇಮಕಾತಿ ನಿಯಮಗಳ ಅನ್ವಯ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ಬೋರ್ಡ್ & ವಿಶ್ವವಿದ್ಯಾಲಯದಿಂದ ಪದವಿ ಪಡೆದಿರಬೇಕು.

ಮಂಡ್ಯದಲ್ಲಿ ಕೆಲಸ ಖಾಲಿ ಇದೆ; ಫೆಬ್ರವರಿ 17ರ ತನಕ ಅರ್ಜಿ ಹಾಕಿ ಮಂಡ್ಯದಲ್ಲಿ ಕೆಲಸ ಖಾಲಿ ಇದೆ; ಫೆಬ್ರವರಿ 17ರ ತನಕ ಅರ್ಜಿ ಹಾಕಿ

31/8/2021ಕ್ಕೆ ಅನ್ವಯವಾಗುವಂತೆ ಅಭ್ಯರ್ಥಿಗಳು ಯಾವುದಾದರೂ ಮಾನ್ಯತೆ ಪಡೆದ ಸಂಸ್ಥೆಯಲ್ಲಿ ನೆಟ್‌ವರ್ಕ್ ಮ್ಯಾನೇಜ್‌ಮೆಂಟ್‌ನಲ್ಲಿ 1.5 ಅಥವ 3 ವರ್ಷದ ಅನುಭವ ಹೊಂದಿರಬೇಕು.

ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ನೇಮಕಾತಿ ನಿಯಮಗಳ ಅನುಸಾರ ಅಭ್ಯರ್ಥಿಗೆ ಗರಿಷ್ಠ ವಯೋಮಿತಿ 40 ವರ್ಷಗಳು (ಆಗಸ್ಟ್ 31,2021ಕ್ಕೆ ಅನ್ವಯ). ನೇಮಕಾತಿ ನಿಯಮಗಳ ಅನ್ವಯ ವಯೋಮಿತಿ ಸಡಿಲಿಕೆ ಸಹ ಇರುತ್ತದೆ.

ಅರ್ಜಿಗಳನ್ನು ಸಲ್ಲಿಸುವ ಸಾಮಾನ್ಯ/ ಒಬಿಸಿ/ ಇಡ್ಲ್ಯುಎಸ್ ಅಭ್ಯರ್ಥಿಗಳು 750 ರೂ. ಶುಲ್ಕವ ಪಾವತಿ ಮಾಡಬೇಕು. ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ/ ಅಂಗವಿಕಲ ಅಭ್ಯರ್ಥಿಗಳಿಗೆ ಯಾವುದೇ ಶುಲ್ಕವಿಲ್ಲ. ಆನ್‌ಲೈನ್ ಪೇಮೆಂಟ್ ಮೂಲಕ ಶುಲ್ಕ ಪಾವತಿ ಮಾಡಬೇಕಿದೆ.

ಆನ್‌ಲೈನ್‌ ಲಿಖಿತ ಪರೀಕ್ಷೆ, ಸಂದರ್ಶನದ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ. ಆನ್‌ಲೈನ್ ಪರೀಕ್ಷೆ ತಾತ್ಕಾಲಿಕ ದಿನಾಂಕ ಮಾರ್ಚ್20, 2022. ಮಾರ್ಚ್‌ 5ರ ಬಳಿಕ ಪರೀಕ್ಷೆಗೆ ಕಾಲ್ ಲೆಟರ್ ಡೌನ್‌ ಲೋಡ್ ಮಾಡಿಕೊಳ್ಳಬಹುದಾಗಿದೆ.

ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಹೆಚ್ಚಿನ ಮಾಹಿತಿಗಾಗಿ ವೆಬ್‌ಸೈಟ್‌ಗೆ ಭೇಟಿ ನೀಡಬಹುದಾಗಿದೆ. sbi.co.in

ಕಾನೂನು ಸಲಹೆಗಾರರ ಹುದ್ದೆ; ಕಂದಾಯ ಇಲಾಖೆಯಲ್ಲಿ ಭೂಸ್ವಾಧೀನ ಪ್ರಕರಣಗಳಿಗೆ ಸಂಬಂಧಿಸಿದ ವ್ಯಾಜ್ಯಗಳನ್ನು ನಿರ್ವಹಿಸಲು ಕಲಬುರಗಿ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಸೃಜಿಸಲಾಗಿರುವ ಕಾನೂನು ಸಲಹೆಗಾರರ ಹುದ್ದೆಗೆ ತಾತ್ಕಾಲಿಕ ನೇಮಕಾತಿಗಾಗಿ ನಿವೃತ್ತಿ ಹೊಂದಿರುವ ಜಿಲ್ಲಾ ಸಿವಿಲ್ ನ್ಯಾಯಾಧೀಶರಿಂದ ಅರ್ಜಿ ಕರೆಯಲಾಗಿದೆ.

ನಿವೃತ್ತಿ ಹೊಂದಿರುವ ಸಿವಿಲ್ ನ್ಯಾಯಾಧೀಶರು ನೇರವಾಗಿ ಕಲಬುರಗಿ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ 2022ರ ಫೆಬ್ರವರಿ 15ರ ಮಧ್ಯಾಹ್ನ 3 ಗಂಟೆಯೊಳಗಾಗಿ ಅರ್ಜಿ ಸಲ್ಲಿಸಬೇಕು. ನಿಗದಿತ ಅವಧಿ ನಂತರ ಬಂದ ಅರ್ಜಿಗಳನ್ನು ಪರಿಗಣಿಸಲಾಗುವುದಿಲ್ಲ ಎಂದು ತಿಳಿಸಲಾಗಿದೆ. ಹೆಚ್ಚಿನ ಮಾಹಿತಿಗಾಗಿ ಕಲಬುರಗಿ ಜಿಲ್ಲಾಧಿಕಾರಿಗಳ ಕಚೇರಿಯನ್ನು ಸಂಪರ್ಕಿಸಲು ಮನವಿ ಮಾಡಲಾಗಿದೆ.

ಉಚಿತ ತರಬೇತಿಗೆ ಅರ್ಜಿ ಆಹ್ವಾನ; ಕೆನರಾ ಬ್ಯಾಂಕ್ ದೇಶಪಾಂಡೆ ಆರ್‌ಸೆಟಿ ಸಂಸ್ಥೆ ವತಿಯಿಂದ ಗ್ರಾಮೀಣ ಭಾಗದ ನಿರುದ್ಯೋಗಿ ಯುವಕ, ಯುವತಿಯರಿಗೆ ಉಚಿತ ಕೌಶಲ್ಯಾಧಾರಿತ ತರಬೇತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ.

ಉಚಿತ ಕೌಶಲ್ಯಾಧಾರಿತ ತರಬೇತಿಯಡಿ ಗ್ರಾಮೀಣ ಭಾಗದ ನಿರುದ್ಯೋಗಿ ಯುವಕ, ಯುವತಿಯರಿಗೆ 30 ದಿನಗಳ ಹೌಸ್ ವೈರಿಂಗ್ ಮತ್ತು ವಿದ್ಯುತ್ ಉಪಕರಣ ದುರಸ್ತಿ ತರಬೇತಿ ಹಾಗೂ ಕೌಶಲ್ಯ, ಸಾಫ್ಟ್ ಸ್ಕೀಲ್, ಯೋಗ ತರಬೇತಿ, ಬ್ಯಾಂಕಿಂಗ್, ಸರಕಾರಿ ಯೋಜನೆಗಳು ಮತ್ತು ವರದಿ ತಯಾರಿಕೆ ಬಗೆಗಿನ ಮಾಹಿತಿಯನ್ನು ಉಚಿತವಾಗಿ ನೀಡಲಾಗುವದು.

ಅರ್ಜಿ ಸಲ್ಲಿಸುವವರು 18 ರಿಂದ 45 ವರ್ಷದೊಳಗಿರಬೇಕು. ರಾಜ್ಯದ ಗ್ರಾಮೀಣ ಭಾಗದ ಬಡ ಯುವಜನರಾಗಿರಬೇಕು. ತರಬೇತಿಯ ಸಮಯದಲ್ಲಿ ಊಟ, ವಸತಿ ಉಚಿತವಾಗಿರುತ್ತದೆ. ಅರ್ಜಿ ಸಲ್ಲಿಸಲು ಫೆಬ್ರವರಿ 15 ಕೊನೆಯದಿನವಾಗಿದ್ದು, ಆಸಕ್ತರು ಕೆನರಾ ಬ್ಯಾಂಕ್ ದೇಶಪಾಂಡೆ ಆರ್‌ಸೆಟ್ ಸಂಸ್ಥೆ ಹಳಿಯಾಳ, ಉತ್ತರ ಕನ್ನಡ ಜಿಲ್ಲೆ, ಈ ವಿಳಾಸಕ್ಕೆ ಸಂಪರ್ಕಿಸಲು ಕೋರಿದೆ.

ಹೆಚ್ಚಿನ ವಿವರಗಳಿಗಾಗಿ 9483485489, 9482188780, 08284-295307/220807 ಮತ್ತು 9743321062 ಸಂಖ್ಯೆಗೆ ಕರೆ ಮಾಡಬಹುದು. ಆಸಕ್ತರು ಇದರ ಸದುಪಯೊಗ ಮಾಡಿಕೊಳ್ಳಬೇಕೆಂದು ಕೆನರಾ ಬ್ಯಾಂಕ್ ದೇಶಪಾಂಡೆ ಆರ್‌ಸೆಟಿ ಸಂಸ್ಥೆಯ ನಿರ್ದೇಶಕರು ಮವಿ ಮಾಡಿದ್ದಾರೆ.

Recommended Video

ಧರ್ಮ ಪಾಲಿಸುವುದು ತಪ್ಪಲ್ಲ, ಹಿಜಾಬ್ ಪರ ನಿಂತ ಡಿಕೆ ಶಿವಕುಮಾರ್ | Oneindia Kannada

English summary
State Bank of India invited applications for assistant manager posts. Candidates can apply online till February 25.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X