SBI ಭರ್ಜರಿ ನೇಮಕಾತಿ: 68 ಹುದ್ದೆಗಳಿಗೆ ಅರ್ಹರು ಇಂದೇ ಅರ್ಜಿ ಸಲ್ಲಿಸಿ
ಬೆಂಗಳೂರು, ಆಗಸ್ಟ್ 06: ಒಂದಷ್ಟು ಜನರು ಬ್ಯಾಂಕಿಂಗ್ ಕ್ಷೇತ್ರದಲ್ಲಿ ಉದ್ಯೋಗದ ಆಸಕ್ತಿ ಹೊಂದಿರುತ್ತಾರೆ. ರಾಷ್ಟ್ರೀಕೃತ ಬ್ಯಾಂಕ್‌ಗಳಲ್ಲಿ ಉದ್ಯೋಗ ಮಾಡಲು ಇಚ್ಛಿಸುವವರಿಗೆ ಭಾರತೀಯ ಸ್ಟೇಟ್ ಬ್ಯಾಂಕ್ (State Bank of India) ಒಂದೊಳ್ಳೆ ಆಫರ್ ನೀಡಿದ್ದಾರೆ.
ಭಾರತೀಯ ಸ್ಟೇಟ್ ಬ್ಯಾಂಕ್ ತನ್ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿ ಪ್ರಕ್ರಿಯೆ ಆರಂಭೀಸಿದೆ. ಈ ಸಂಬಂಧ ಆಸಕ್ತರು ಮತ್ತು ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಕರೆದಿದೆ. ಬ್ಯಾಂಕಿಂಗ್ ಕ್ಷೇತ್ರದಲ್ಲಿ ಆಸಕ್ತಿ ಹೊಂದಿರುವವರಿಗೆ ಇದೊಂದು ಉತ್ತಮ ಅವಕಾಶವಾಗಿದೆ.

ಭಾರತೀಯ ಸ್ಟೇಟ್ ಬ್ಯಾಂಕ್ ನಲ್ಲಿ ಆಫೀಸರ್, ಕ್ಲರಿಕಲ್ ಸ್ಟಾಫ್ ಸೇರಿ ಒಟ್ಟು 68 ಹುದ್ದೆಗಳು ಖಾಲಿ ಇವೆ. ಅರ್ಜಿ ಸಲ್ಲಿಕೆಗೆ ಆಗಸ್ಟ್ 14 ಕೊನೆಯ ದಿನವಾಗಿದ್ದು, ಆನ್‌ಲೈನ್ ಮೂಲಕವೇ ಅರ್ಜಿ ಸಲ್ಲಿಸಬೇಕು. ಕೊನೆಯ ದಿನದವರೆಗೆ ಕಾಯದೇ ಕೂಡಲೇ ಅರ್ಜಿ ಸಲ್ಲಿಸಬೇಕು. ಅದಕ್ಕು ಮೊದಲು ಇಲ್ಲಿ ನೀಡಲಾಗಿರುವ ವಿದ್ಯಾರ್ಹತೆ, ವಯೋಮಿತಿ, ಅರ್ಜಿ ಶುಲ್ಕ ಇನ್ನಿತರ ನೇಮಕಾತಿ ಪೂರ್ಣ ಮಾಹಿತಿ ತಿಳಿಯಿರಿ.
ನೇಮಕಾತಿ ಪೂರ್ಣ ವಿವಿರ ಹೀಗಿದೆ
ಸಂಸ್ಥೆ ಹೆಸರು: ಭಾರತೀಯ ಸ್ಟೇಟ್ ಬ್ಯಾಂಕ್ (ಎಸ್‌ಬಿಐ)
ಹುದ್ದೆ ಹೆಸರು: ಆಫೀಸರ್, ಕ್ಲರಿಕಲ್ ಸ್ಟಾಫ್
ಒಟ್ಟು ಹುದ್ದೆ: 68 ಹುದ್ದೆಗಳು
ಆಫೀಸರ್ (ಕ್ರೀಡಾಪಟು)- 17
ಕ್ಲರಿಕಲ್ ಸ್ಟಾಫ್ (ಕ್ರೀಡಾಪಟು)- 51
ಮಾಸಿಕ ವೇತನ: ಗರಿಷ್ಠ 84,000 ರೂ.
ಪೋಸ್ಟಿಂಗ್ ಎಲ್ಲಿ: ಭಾರತದಲ್ಲಿ
ಅರ್ಜಿ ಸಲ್ಲಿಕೆ ಕೊನೆ ದಿನ: ಆಗಸ್ಟ್ 14
ಶೈಕ್ಷಣಿಕ ಅರ್ಹತೆ
ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ನೇಮಕಾತಿಗಾಗಿ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಪದವಿ ಪಡೆದಿರಬೇಕು ಎಂದು ಬ್ಯಾಂಕ್ ಅಧಿಸೂಚನೆ ತಿಳಿಸಿದೆ.

ವಯಸ್ಸಿನ ಮಿತಿ ಏನಿದೆ?
ಆಫೀಸರ್ (ಕ್ರೀಡಾಪಟು) ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಕನಿಷ್ಠ 21ರಿಂದ ಗರಿಷ್ಠ 30 ವರ್ಷ ವಯಸ್ಸಾಗಿರಬೇಕು. ಇನ್ನೂ ಕ್ಲರಿಕಲ್ ಸ್ಟಾಫ್ (ಕ್ರೀಡಾಪಟು) ಹುದ್ದೆಗೆ ಕನಿಷ್ಠ 20 ಗರಿಷ್ಠ 28 ವರ್ಷ ವಯಸ್ಸಾಗಿರಬೇಕು. ಇಂತವರು ಮಾತ್ರವೇ ಅರ್ಜಿ ಸಲ್ಲಿಸಬಹುದು. ಜಾತಿ ಆಧಾರದಲ್ಲಿ ಅಭ್ಯರ್ಥಿಗಳ ವಯೋಮಿತಿಯಲ್ಲಿ ಸಡಿಲಿಕೆ ಸಿಗಲಿದೆ.
ಅರ್ಜಿ ಶುಲ್ಕ ಎಷ್ಟಿದೆ?
ಪರಿಶಿಷ್ಠ ಜಾತಿ, ಪರಿಶಿಷ್ಟ ಪಂಗಡ ಮತ್ತು ಪಿಡಬ್ಲುಡಿ ಅಭ್ಯರ್ಥಿಗಳಿಗೆ ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ. ಇನ್ನೂ ಸಾಮಾನ್ಯ ವರ್ಗ/EWS/ಹಿಂದುಳಿದ ವರ್ಗಗದ ಅಭ್ಯರ್ಥಿಗಳಿಗೆ ರೂ.750 ಅರ್ಜಿ ಶುಲ್ಕ ನಿಗದಿ ಮಾಡಲಾಗಿದ್ದು, ಈ ಹಣವನ್ನು ನೀವು ಆನ್‌ಲೈನ್ ಮೂಲಕವೇ ಪಾವತಿಸಬೇಕಿದೆ.
ಅಭ್ಯರ್ಥಿಗಳ ಆಯ್ಕೆ ಹೇಗೆ?
ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಮೊದಲು ಶಾರ್ಟ್ ಲಿಸ್ಟಿ ಮಾಡಲಾಗುತ್ತದೆ. ಬಳಿಕ ಶಾರ್ಟ್‌ಲಿಸ್ಟ್‌ನಲ್ಲಿರುವವರಿಗೆ ಮೌಲ್ಯಮಾಪನ ಪರೀಕ್ಷೆ ನಡೆಸಿ ಅಲ್ಲಿ, ಆಯ್ಕೆ ಆಗುವವರಿಗೆ ನೇರ ಸಂದರ್ಶನ ಮಾಡಿ ಆಯ್ಕೆ ಮಾಡಲಾಗುತ್ತದೆ.
ಮಾಸಿಕ ವೇತನ ಮಾಹಿತಿ
ಯಾವುದೇ ಹುದ್ದೆಗೆ ಆಯ್ಕೆ ಆದವರಿಗೆ ಭಾರತದಲ್ಲಿ ಎಲ್ಲಿಯಾದೂ ಪೋಸ್ಟಿಂಗ್ ನೀಡಲಾಗುತ್ತದೆ. ಆಫೀಸರ್ ಹುದ್ದೆಗೆ ಆಯ್ಕೆ ಆಗುವವರಿಗೆ ಮಾಸಿಕ ರೂ.48,480 ನಿಂದ 85,920 ರೂ. ಹಾಗೂ ಕ್ಲರಿಕಲ್ ಸ್ಟಾಫ್ ಹುದ್ದೆ ಅಭ್ಯರ್ಥಿಗಳಿಗೆ ಮಾಸಿಕವಾಗಿ ರೂ.24,050 ನಿಂದ 64,480 ರೂ. ಇರಲಿದೆ ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.
ಅರ್ಜಿ ಸಲ್ಲಿಕೆ ವಿಧಾನ
ಆಸಕ್ತ ಅಭ್ಯರ್ಥಿಗಳು ಈ ಕೂಡಲೇ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು. ಅದಕ್ಕಾಗಿ https://recruitment.bank.sbi/crpd-sports-2024-25-7/apply ಈ ವೆಬ್‌ಸೈಟ್‌ಗೆ ಭೇಟಿ ನೀಡಬೇಕು.












Click it and Unblock the Notifications