ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

39 ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದ ಎಸ್‌ಬಿಐ

|
Google Oneindia Kannada News

ಬೆಂಗಳೂರು, ಡಿಸೆಂಬರ್ 04 : ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ 39 ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಗಳನ್ನು ಆಹ್ವಾನಿಸಿದೆ. ಆನ್‌ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಲು ಡಿಸೆಂಬರ್ 28, 2018 ಕೊನೆಯ ದಿನವಾಗಿದೆ.

ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ 39 ಡೆಪ್ಯೂಟಿ ಮ್ಯಾನೇಜರ್ ಹುದ್ದೆಗಳನ್ನು ಭರ್ತಿ ಮಾಡುತ್ತಿದೆ. ಆಯ್ಕೆಯಾದ ಅಭ್ಯರ್ಥಿಗಳು ಮುಂಬೈ ಮತ್ತು ದೇಶದ ಇತರ ನಗರಗಳಲ್ಲಿ ಕೆಲಸ ಮಾಡಬೇಕಿದೆ.

163 ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಕರೆದ ವಾಯುಪಡೆ 163 ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಕರೆದ ವಾಯುಪಡೆ

ಒಟ್ಟು 39 ಹುದ್ದೆಗಳಿಗಳಿದ್ದು ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ 20, ಓಬಿಸಿ 11, ಎಸ್‌ಸಿ 6, ಎಸ್‌ಟಿ 2 ಹುದ್ದೆಗಳಿವೆ. ಆನ್‌ಲೈನ್ ಮೂಲಕ ಮಾತ್ರ ಅರ್ಜಿಗಳನ್ನು ಸಲ್ಲಿಸಬೇಕಾಗಿದೆ.

SBI recruitment notification Deputy Manager post

ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಸಿಎ ಕೋರ್ಸ್ ಪೂರ್ಣಗೊಳಿಸಿದವರು ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ 21 ರಿಂದ 35 ವರ್ಷದ ವಯೋಮಿತಿ ನಿಗದಿ ಮಾಡಲಾಗಿದೆ. 30 ಸೆಪ್ಟೆಂಬರ್ 2018ಕ್ಕೆ ಅನ್ವಯವಾಗುವಂತೆ.

ಎಸ್‌ಸಿ/ಎಸ್‌ಟಿ ಅಭ್ಯರ್ಥಿಗಳಿಗೆ 5 ವರ್ಷ, ಓಬಿಸಿ (ಎನ್‌ಸಿಎಲ್) ಅಭ್ಯರ್ಥಿಗಳಿಗೆ 3 ವರ್ಷದ ವಯೋಮಿತಿ ಸಡಿಲಿಕೆ ಇರುತ್ತದೆ. ಅರ್ಜಿ ಸಲ್ಲಿಸುವ ಎಸ್‌ಸಿ/ಎಸ್‌ಟಿ ಅಭ್ಯರ್ಥಿಗಳು 100 ರೂ., ಇತರ ಅಭ್ಯರ್ಥಿಗಳು 600 ರೂ. ಶುಲ್ಕವನ್ನು ಪಾವತಿ ಮಾಡಬೇಕಿದೆ.

ಎಎಐನಲ್ಲಿ 372 ಹುದ್ದೆಗಳ ಭರ್ತಿ, ಪದವೀಧರರು ಅರ್ಜಿ ಹಾಕಿ ಎಎಐನಲ್ಲಿ 372 ಹುದ್ದೆಗಳ ಭರ್ತಿ, ಪದವೀಧರರು ಅರ್ಜಿ ಹಾಕಿ

ಆಯ್ಕೆಯಾದ ಅಭ್ಯರ್ಥಿಗಳಿಗೆ 31705-45950 ರೂ. ವೇತನ ಶ್ರೇಣಿ ನಿಗದಿ ಮಾಡಲಾಗಿದೆ. ಅಭ್ಯರ್ಥಿಗಳನ್ನು ಆನ್‌ಲೈನ್ ಪರೀಕ್ಷೆ, ಗುಂಪು ಚರ್ಚೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ.

ಹೆಚ್ಚಿನ ಮಾಹಿತಿಗಾಗಿ ಇಲ್ಲಿ ಕ್ಲಿಕ್ ಮಾಡಿ

English summary
State Bank of India released a new recruitment notification for the posts of Deputy Manager. Candidates can apply before 28th December 2018.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X