15 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದ ಎಸ್‌ಬಿಐ

ಬೆಂಗಳೂರು, ಜನವರಿ 23 : ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಗಳನ್ನು ಆಹ್ವಾನಿಸಿದೆ. ಆನ್‌ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಲು 11/2/2019 ಕೊನೆಯ ದಿನವಾಗಿದೆ.

ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (ಎಸ್‌ಬಿಐ) ಸೀನಿಯರ್ ಎಕ್ಸಿಕ್ಯೂಟೀವ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಗಳನ್ನು ಆಹ್ವಾನಿಸಿದೆ. ಆಯ್ಕೆಯಾದ ಅಭ್ಯರ್ಥಿಗಳು ಮುಂಬೈ (ಮಹಾರಾಷ್ಟ್ರ)ದಲ್ಲಿ ಕೆಲಸ ಮಾಡಬೇಕಿದೆ.

ಸೀನಿಯರ್ ಎಕ್ಸಿಕ್ಯೂಟೀವ್ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಸಿಎ/ಎಂಬಿಎ/ಪಿಜಿಡಿಎಂ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪಡೆದಿರಬೇಕು.

SBI recruitment notification for Senior Executive post

ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು 1 ಡಿಸೆಂಬರ್ 2018ಕ್ಕೆ ಅನ್ವಯಿಸುವಂತೆ ಕನಿಷ್ಠ 25 ವರ್ಷ ಗರಿಷ್ಠ 35 ವರ್ಷದ ವಯೋಮಿತಿ ನಿಗದಿ ಮಾಡಲಾಗಿದೆ. ಎಸ್‌ಸಿ/ಎಸ್‌ಟಿ ಅಭ್ಯರ್ಥಿಗಳಿಗೆ 05, ಓಬಿಸಿ ಅಭ್ಯರ್ಥಿಗಳಿಗೆ 3, ಅಂಗವಿಕಲ ಅಭ್ಯರ್ಥಿಗಳಿಗೆ 10 ವರ್ಷದ ವಯೋಮಿತಿ ನಿಗದಿ ಮಾಡಲಾಗಿದೆ.

ಅರ್ಜಿ ಸಲ್ಲಿಸುವ ಎಸ್‌ಸಿ/ಎಸ್‌ಟಿ/ಅಂಗವಿಕಲ/ಮಹಿಳಾ ಅಭ್ಯರ್ಥಿಗಳಿಗೆ 100 ರೂ., ಇತರ ಅಭ್ಯರ್ಥಿಗಳಿಗೆ 600 ರೂ.ಗಳ ಅರ್ಜಿ ಶುಲ್ಕವನ್ನು ನಿಗದಿ ಮಾಡಲಾಗಿದೆ.

ಹೆಚ್ಚಿನ ಮಾಹಿತಿಗಾಗಿ ಇಲ್ಲಿ ಕ್ಲಿಕ್ ಮಾಡಿ

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+