Get Updates
Get notified of breaking news, exclusive insights, and must-see stories!

ಶಿಕ್ಷಣ ಇಲಾಖೆಯಿಂದ ಬೋಧಕ ಹುದ್ದೆ ಭರ್ತಿ, ಷರತ್ತುಗಳು

ಬೆಂಗಳೂರು, ಆಗಸ್ಟ್‌ 08: ಖಾಸಗಿ ಅನುದಾನಿತ ಪ್ರೌಢಶಾಲೆ ಮತ್ತು ಪದವಿಪೂರ್ವ ಕಾಲೇಜುಗಳಲ್ಲಿ ವಿವಿಧ ಕಾರಣಕ್ಕೆ ಖಾಲಿ ಆಗಿರುವ ಬೋಧಕ ಹುದ್ದೆಗಳನ್ನು ಭರ್ತಿ ಮಾಡುವ ಬಗ್ಗೆ ಆದೇಶ ಹೊರಡಿಸಲಾಗಿದೆ. ಷರತ್ತುಗಳಿಗೊಳಪಟ್ಟು ಮತ್ತು ಆರ್ಥಿಕ ಇಲಾಖೆಯ ಅನುಮತಿ ಬಳಿಕ ಶಿಕ್ಷಣ ಇಲಾಖೆ ಈ ಹುದ್ದೆಗಳ ನೇಮಕಾತಿ ಕುರಿತು ಆದೇಶವನ್ನು ಪ್ರಕಟಿಸಿದೆ.

ಈ ಕುರಿತು ಕರ್ನಾಟಕ ರಾಜ್ಯಪಾಲರ ಆಜ್ಞಾನುಸಾರ ಮತ್ತು ಅವರ ಹೆಸರಿನಲ್ಲಿ, ಎಸ್. ಪಕಾಶ, ಸರ್ಕಾರದ ಅಧೀನ ಕಾರ್ಯದರ್ಶಿ (ಪ್ರೌಢ), ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಆದೇಶ ಹೊರಡಿಸಿದ್ದಾರೆ. ನೇಮಕಾತಿಗೆ ಇರುವ ಷರತ್ತುಗಳನ್ನು ಸಹ ಉಲ್ಲೇಖ ಮಾಡಿದ್ದಾರೆ.

School Education Department Teaching Staff Recruitment

ಆದೇಶ ರಾಜ್ಯದ ಖಾಸಗಿ ಅನುದಾನಿತ ಪ್ರೌಢಶಾಲೆ ಮತ್ತು ಪದವಿಪೂರ್ವ ಕಾಲೇಜುಗಳಲ್ಲಿ ನಿಧನ, ನಿವೃತ್ತಿ, ರಾಜೀನಾಮೆ ಮತ್ತು ಇತರೆ ಕಾರಣಗಳಿಂದ ತೆರವಾದ ಖಾಲಿ ಇರುವ ಬೋಧಕ ಹುದ್ದೆಗಳನ್ನು ಭರ್ತಿ ಮಾಡುವ ಬಗ್ಗೆ ಎಂಬ ವಿಷಯ ಒಳಗೊಂಡಿದೆ. ಅಲ್ಲದೇ ಸರ್ಕಾರದ ವಿವಿಧ ಆದೇಶ, ನಿರ್ದೇಶಕರು (ಪ್ರೌಢ ಶಿಕ್ಷಣ) ಆಯುಕ್ತರ ಕಛೇರಿ, ಶಾಲಾ ಶಿಕ್ಷಣ ಇಲಾಖೆ, ಅಪರ ಆಯುಕ್ತರು, ಶಾಲಾ ಶಿಕ್ಷಣ ಇಲಾಖೆ, ಧಾರವಾಡ ಅಪರ ಆಯುಕ್ತರು, ಶಾಲಾ ಶಿಕ್ಷಣ ಇಲಾಖೆ, ಕಲಬುರಗಿ ಅವರ ಪತ್ರ ಉಲ್ಲೇಖ ಮಾಡಲಾಗಿದೆ.

ದಿನಾಂಕ 31/03/2008ರಲ್ಲಿ ಖಾಸಗಿ ಅನುದಾನಿತ ಪದವಿ ಪೂರ್ವ ಕಾಲೇಜುಗಳಲ್ಲಿ 401 ಖಾಲಿ ಹುದ್ದೆಗಳನ್ನು ತುಂಬಲು ಅನುಮತಿ ನೀಡಲಾಗಿದ್ದು, ಈ ಪೈಕಿ ವಿವಿಧ ಕಾರಣದಿಂದ ತುಂಬದೇ ಬಾಕಿ ಇರುವ 189 ಹುದ್ದೆಗಳನ್ನು ಮತ್ತು ದಿನಾಂಕ 1/07/2008ರ ನಂತರ ನಿಧನ, ನಿವೃತ್ತಿ, ರಾಜೀನಾಮೆ, ಸಕ್ಷಮ ಪ್ರಾಧಿಕಾರದಿಂದ ಅನುಮೋದಿತವಾದ ಬಡ್ತಿ ಮೂಲಕ ತೆರವಾದ ಮತ್ತು ಇತರ ಕಾರಣಗಳಿಂದ ತೆರವಾದ ಬೋಧಕ ಹುದ್ದೆಗಳನ್ನು ತುಂಬಲು ಷರತ್ತುಗಳಿಗೊಳಪಟ್ಟು ಆರ್ಥಿಕ ಮಿತವ್ಯಯ ಆದೇಶವನ್ನು ಸಡಿಲಿಸಿ, ಅನುಮತಿ ನೀಡಲಾಗಿತ್ತು ಎಂದು ಹೇಳಿದೆ.

ಖಾಸಗಿ ಅನುದಾನಿತ ಪ್ರೌಢ ಶಾಲೆಗಳಲ್ಲಿ ನಿವೃತ್ತಿ, ರಾಜೀನಾಮೆ, ಮರಣ ಇತರೆ ಕಾರಣಗಳಿಂದ ಖಾಲಿಯಾದ ಬೋಧಕ ಹುದ್ದೆಗಳನ್ನು ಸೂಕ್ತ ಪ್ರಾಧಿಕಾರದ ಅನುಮೋದನೆ ಪಡೆದು ಬಡ್ತಿ ಹೊಂದಿರುವ ಹಾಗೂ ಇತರೆ ಕಾರಣಗಳಿಂದ ದಿನಾಂಕ 31/12/2012ರ ವರೆಗೆ ಖಾಲಿಯಾದ ಹುದ್ದೆಗಳನ್ನು ಹೆಚ್ಚುವರಿ ಪ್ರಕ್ರಿಯೆಯಲ್ಲಿ ಬಳಸಿಕೊಂಡು ನಂತರ ಬಾಕಿ ಉಳಿದ ಬೋಧಕ ಹುದ್ದೆಗಳನ್ನು ಹಾಗೂ ದಿನಾಂಕ 01/01/2013 ರಿಂದ 31/12/2014 ರವರೆಗೆ 01/01/2015 ರಿಂದ 31/12/2015ರ ವರೆಗೆ ಖಾಲಿಯಾದ ಬೋಧಕ ಹುದ್ದೆಗಳನ್ನು ಹೆಚ್ಚುವರಿ ಪ್ರಕ್ರಿಯೆಯಲ್ಲಿ ಬಳಸಿಕೊಂಡ ನಂತರ ಬಾಕಿ ಉಳಿದ ಬೋಧಕ ಹುದ್ದೆಗಳನ್ನು (ವೃತ್ತಿ/ ಚಿತ್ರಕಲಾ/ ಸಂಗೀತ ಹಾಗೂ ಮುಂತಾದ ವಿಶೇಷ ಶಿಕ್ಷಕರನ್ನು ಹೊರತುಪಡಿಸಿ) ಭರ್ತಿ ಮಾಡುವ ಷರತ್ತಿಗೊಳಪಟ್ಟು ಆರ್ಥಿಕ ಮಿತ್ಯವ್ಯಯ ಸಡಿಲಿಸಿ ಅನುಮತಿ ನೀಡಲಾಗಿತ್ತು.

ರಾಜ್ಯದ ಖಾಸಗಿ ಅನುದಾನಿತ ಪ್ರೌಢಶಾಲೆಗಳಲ್ಲಿ ದಿನಾಂಕ 01/01/2016 ರಿಂದ ದಿನಾಂಕ 31/12/2020ರ ವರೆಗೆ ನಿವೃತ್ತಿ, ನಿಧನ, ರಾಜೀನಾಮೆ ಹಾಗೂ ಇತರೆ ಕಾರಣಗಳಿಂದ ತೆರವಾಗಿರುವ ಖಾಲಿ ಇರುವ ಬೋಧಕ ಹುದ್ದೆಗಳನ್ನು ಆರ್ಥಿಕ ಮಿತವ್ಯಯ ಸಡಿಲಿಸಿ ಭರ್ತಿ ಮಾಡಲು ಅನುಮತಿ ನೀಡುವಂತೆ ಕೋರಿರುತ್ತಾರೆ. ಪಸ್ತಾವನೆಯನ್ನು ಕೂಲಂಕಷವಾಗಿ ಪರಿಶೀಲಿಸಲಾಯಿತು. ಅದರಂತೆ ಈ ಕುರಿತು ಆದೇಶಿಸಿದೆ.

ಪ್ರಸ್ತಾವನೆಯಲ್ಲಿ ವಿವರಿಸಿರುವ ಅಂಶಗಳ ಹಿನ್ನೆಲೆಯಲ್ಲಿ, 1994-95ರ ಶೈಕ್ಷಣಿಕ ಅವಧಿಗೆ ಪೂರ್ವದಲ್ಲಿ ಪ್ರಾರಂಭಗೊಂಡು ಈಗಾಗಲೇ ವೇತನಾನುದಾನಕ್ಕೆ ಒಳಪಟ್ಟ ಖಾಸಗಿ ಅನುದಾನಿತ ಪ್ರೌಢಶಾಲೆಗಳು, ಅನುದಾನಿತ ಪದವಿ ಪೂರ್ವ ಕಾಲೇಜುಗಳಲ್ಲಿ 1/1/2016 ರಿಂದ 31/12/2020ರ ವರೆಗೆ ನಿವೃತ್ತಿ, ನಿಧನ, ರಾಜೀನಾಮೆ ಹಾಗೂ ಮತ್ತಿತರ ಕಾರಣಗಳಿಂದ ಖಾಲಿಯಾಗಿರುವ ಬೋಧಕ ಹುದ್ದೆಗಳನ್ನು ಷರತ್ತಿಗಳಿಗೊಳಪಟ್ಟು ಭರ್ತಿ ಮಾಡಿಕೊಳ್ಳಲು ಸರ್ಕಾರವು ಆಡಳಿತಾತ್ಮಕ ಅನುಮೋದನೆ ನೀಡಿದೆ.

ಷರತ್ತುಗಳು

* ಹುದ್ದೆಗಳನ್ನು ಭರ್ತಿ ಮಾಡಿಕೊಂಡ ನಂತರ ನೇಮಕಾತಿ ಅನುಮೋದನೆಗಾಗಿ ಆರ್ಥಿಕ ಇಲಾಖೆಯ ಅನಧಿಕೃತ ಟಿಪ್ಪಣಿಯ ಚೆಕ್‌ಲಿಸ್ಟ್ ಅನ್ವಯ ಸಂಪೂರ್ಣ ಮಾಹಿತಿ/ ದಾಖಲೆಗಳೊಂದಿಗೆ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸುವುದು. ಖಾಲಿ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳುವ ಸಂದರ್ಭದಲ್ಲಿ ಜಾರಿಯಲ್ಲಿರುವ ಅನುದಾನ ಸಂಹಿತೆ ಮತ್ತು ಸರ್ಕಾರದ ಆದೇಶ ಮತ್ತು ಸುತ್ತೋಲೆಗಳ ನಿಯಮಗಳನ್ನು ಪಾಲಿಸಿರುವುದನ್ನು ಖಚಿತಪಡಿಸಿಕೊಳ್ಳವುದು.

* ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳುವಾಗ ನಿಯಮಾನುಸಾರ ರೋಸ್ಟರ್‌ ಬಿಂದು ಮತ್ತು ಕಲ್ಯಾಣ ಕರ್ನಾಟಕದ ಮೀಸಲಾತಿಗಳನ್ನು ಕಡ್ಡಾಯವಾಗಿ ಪಾಲಿಸತಕ್ಕದ್ದು. 2016-17 ರಿಂದ 2023-24ನೇ ಸಾಲಿನವರೆಗೆ ವಿದ್ಯಾರ್ಥಿಗಳ ದಾಖಲಾತಿ, ಪರೀಕ್ಷಾ ಫಲಿತಾಂಶ ಮತ್ತು ಮೂಲಭೂತ ಸೌಕರ್ಯಗಳು ಉತ್ತಮವಾಗಿರುವುದನ್ನು ಖಚಿತಪಡಿಸಿಕೊಳ್ಳುವುದು.

* ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳುವ ಶಾಲಾ/ ಕಾಲೇಜುಗಳು ಪ್ರಾರಂಭವಾದಾಗಿನಿಂದ ಅವಿಚ್ಛಿನ್ನವಾಗಿ ನಡೆಯುತ್ತಿರುವುದನ್ನು ಖಚಿತಪಡಿಸಿಕೊಳ್ಳಬೇಕು. ಅನುದಾನಿತ ಪದವಿಪೂರ್ವ ಕಾಲೇಜುಗಳಲ್ಲಿನ ಹುದ್ದೆಗಳನ್ನು ಅನುಮೋದಿಸಲು ಪ್ರತ್ಯಾಯೋಜಿಸಲಾದ ಆದೇಶ ಹಿಂಪಡೆಯಲಾಗಿದ್ದು, ಹುದ್ದೆಗಳ ಅನುಮೋದನೆಗಾಗಿ ಸರ್ಕಾರಕ್ಕೆ ಪ್ರಸ್ತಾವನೆಗಳನ್ನು ಸಲ್ಲಿಸುವುದು.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+