ಹಿರಿಯ ಪಂಚಾಯತಿ ಅಭಿವೃದ್ಧಿ ಅಧಿಕಾರಿ ನೇಮಕಾತಿ ಬಗ್ಗೆ ಆದೇಶ

ಬೆಂಗಳೂರು, ಮಾರ್ಚ್‌ 30; ಹಿರಿಯ ಪಂಚಾಯತಿ ಅಭಿವೃದ್ಧಿ ಅಧಿಕಾರಿ ಮತ್ತು ಪಂಚಾಯತಿ ಅಭಿವೃದ್ಧಿ ಅಧಿಕಾರಿ ಹುದ್ದೆಗಳಿಗೆ ನೇಮಕಾತಿ ವಿಧಾನವನ್ನು ನಿಗದಿಪಡಿಸುವ ಬಗ್ಗೆ ಆದೇಶವೊಂದನ್ನು ಹೊರಡಿಸಲಾಗಿದೆ. ಕರ್ನಾಟಕ ನಾಗರೀಕ ಸೇವಾ (ವರ್ಗೀಕರಣ, ನಿಯಂತ್ರಣ ಮತ್ತು ಮೇಲ್ಮನವಿ) ನಿಯಮಗಳು, 1957 ರ ಷೆಡ್ಯೂಲ್ (1) ಕ್ಕೆ ತಿದ್ದುಪಡಿ ತರುವುದನ್ನು ಬಾಕಿಯಿರಿಸಿ ಆದೇಶ ಹೊರಡಿಸಲಾಗಿದೆ.

ಕೆ. ಆರ್. ರುದ್ರಪ್ಪ ನಿರ್ದೇಶಕರು(ಪಂ.ರಾಜ್) ಮತ್ತು ಪದನಿಮಿತ್ತ ಸರ್ಕಾರದ ಜಂಟಿ ಕಾರ್ಯದರ್ಶಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಈ ಕುರಿತು ಆದೇಶ ಹೊರಡಿಸಿದ್ದಾರೆ. ಹಿರಿಯ ಪಂಚಾಯತಿ ಅಭಿವೃದ್ಧಿ ಅಧಿಕಾರಿ ಹುದ್ದೆಗಳನ್ನು ರಾಜ್ಯ ವೃಂದವನ್ನಾಗಿ ಪರಿಗಣಿಸಿ ಸರ್ಕಾರವನ್ನು ನೇಮಕಾತಿ ಮತ್ತು ಶಿಸ್ತು ಪ್ರಾಧಿಕಾರವನ್ನಾಗಿ ನೇಮಿಸಿದೆ ಮತ್ತು ಪಂಚಾಯತಿ ಅಭಿವೃದ್ಧಿ ಅಧಿಕಾರಿ ಹುದ್ದೆಗಳನ್ನು ರಾಜ್ಯ ವೃಂದವನ್ನಾಗಿ ಪರಿಗಣಿಸಿ ಆಯುಕ್ತರು, ಪಂಚಾಯತ್ ರಾಜ್ ರವರನ್ನು ನೇಮಕಾತಿ ಮತ್ತು ಶಿಸ್ತು ಪ್ರಾಧಿಕಾರವನ್ನಾಗಿ ನೇಮಿಸಿ ಆದೇಶಿಸಲಾಗಿದೆ.

Senior Panchayat Development Officer Recruitment Order

ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ಇಲಾಖೆಯಡಿ ಮಂಜೂರಾಗಿರುವ 6021 ಪಂಚಾಯತಿ ಅಭಿವೃದ್ಧಿ ಅಧಿಕಾರಿ ಹುದ್ದೆಗಳನ್ನು ಉನ್ನತೀಕರಿಸಿ/ ಪುನರ್ ಪದನಾಮೀಕರಿಸಿ ಆದೇಶಿಸಲಾಗಿತ್ತು. ವೇತನ ಶ್ರೇಣಿ ರೂ. 37,900-70,850ರ ಗ್ರೂಪ್ 'ಸಿ' ವೃಂದದ 1500 ಪಂಚಾಯತಿ ಅಭಿವೃದ್ಧಿ ಅಧಿಕಾರಿ ಹುದ್ದೆಗಳನ್ನು ವೇತನ ಶ್ರೇಣಿ ರೂ. 40,900-78,200 (ಗ್ರೂಪ್ ಬಿ ಕಿರಿಯ ವೃಂದ) ರಲ್ಲಿ ಉನ್ನತೀಕರಿಸಿ ಹಿರಿಯ ಪಂಚಾಯತಿ ಅಭಿವೃದ್ಧಿ ಅಧಿಕಾರಿ ಎಂದು ಮರು ಪದನಾಮಿಕರಿಸಲಾಗಿದೆ.

ಉಳಿದ 4521 ಪಂಚಾಯತಿ ಅಭಿವೃದ್ಧಿ ಅಧಿಕಾರಿ ಹುದ್ದೆಗಳನ್ನು ವೇತನ ಶ್ರೇಣಿ ರೂ. 37,900-70,850 (ಗ್ರೂಪ್ ಸಿ ವೃಂದಲ್ಲಿ) ಮುಂದುವರೆಸಿದೆ. ಹಿರಿಯ ಪಂಚಾಯತಿ ಅಭಿವೃದ್ಧಿ ಅಧಿಕಾರಿ ಮತ್ತು ಪಂಚಾಯತಿ ಅಭಿವೃದ್ಧಿ ಅಧಿಕಾರಿ ಹುದ್ದೆಗಳಿಗೆ ನೇಮಕಾತಿ ಕಾರ್ಯ ವಿಧಾನವನ್ನು ಪ್ರತ್ಯೇಕವಾಗಿ ಹೊರಡಿಸುವುದಾಗಿ ತಿಳಿಸಲಾಗಿತ್ತು.

Senior Panchayat Development Officer Recruitment Order

ಉನ್ನತೀಕರಿಸಿ ಮರು ಪದನಾಮಿಕರಣಗೊಂಡ ಹಿರಿಯ ಪಂಚಾಯತಿ ಅಭಿವೃದ್ಧಿ ಅಧಿಕಾರಿ ಹುದ್ದೆಗಳಿಗೆ ಪಂಚಾಯತಿ ಅಭಿವೃದ್ಧಿ ಅಧಿಕಾರಿ ವೃಂದದಿಂದ ಮುಂಬಡ್ತಿ ನೀಡಿ ಭರ್ತಿ ಮಾಡಲು ಮತ್ತು ಪಂಚಾಯತಿ ಅಭಿವೃದ್ಧಿ ಅಧಿಕಾರಿ ಹುದ್ದೆಗಳಿಗೆ ನೇರ ನೇಮಕಾತಿ ಮತ್ತು ಮುಂಬಡ್ತಿ ನೀಡಿ ಭರ್ತಿ ಮಾಡಲು ಅವಕಾಶ ಕಲ್ಪಿಸುವುದು ಸೂಕ್ತವೆಂದು, ಈ ಉದ್ದೇಶಕ್ಕೆ ನೇಮಕಾತಿ ಕಾರ್ಯವಿಧಾನವನ್ನು ತುರ್ತಾಗಿ ನಿಗದಿಪಡಿಸುವುದು ಅಗತ್ಯವೆಂದು ಸರ್ಕಾರವು ನಿರ್ಧರಿಸಿದೆ.

ಆದ್ದರಿಂದ ಕರ್ನಾಟಕ ಸಾಮಾನ್ಯ ಸೇವೆ (ಅಭಿವೃದ್ಧಿ ಶಾಖೆ ಮತ್ತು ಸ್ಥಳಿಯ ಆಡಳಿತ ಶಾಖೆ) (ವೃಂದ ಮತ್ತು ನೇಮಕಾತಿ) ನಿಯಮಗಳು, 2008ಕ್ಕೆ ಸೂಕ್ತ ತಿದ್ದುಪಡಿ ತರುವುದನ್ನು ಕಾಯ್ದಿರಿಸಿ, ನೇಮಕಾತಿ ವಿಧಾನವನ್ನು ನಿಗದಿಪಡಿಸಲು ಒಂದು ಕಾರ್ಯಕಾರಿ ಆದೇಶ ಹೊರಡಿಸುವುದು ಸೂಕ್ತವೆಂದು ಭಾವಿಸಿದೆ.

ಪ್ರಸ್ತಾವನೆಯಲ್ಲಿ ವಿವರಿಸಿರುವ ಅಂಶಗಳ ಹಿನ್ನಲೆಯಲ್ಲಿ ಹಿರಿಯ ಪಂಚಾಯತಿ ಅಧಿಕಾರಿ ಹುದ್ದೆಗಳಿಗೆ ಮತ್ತು ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಹುದ್ದೆಗಳಿಗೆ ನೇಮಕಾತಿ ವಿಧಾನವನ್ನು ನಿಗದಿಪಡಿಸಲು ಕರ್ನಾಟಕ ಸಾಮಾನ್ಯ ಸೇವೆ (ಅಭಿವೃದ್ಧಿ ಶಾಖೆ ಮತ್ತು ಸ್ಥಳೀಯ ಆಡಳಿತ ಶಾಖೆ) (ವೃಂದ ಮತ್ತು ನೇಮಕಾತಿ) ನಿಯಮಗಳು 2008ಕ್ಕೆ ಸೂಕ್ತ ತಿದ್ದುಪಡಿ ತರುವುದನ್ನು ಕಾಯ್ದಿರಿಸಿ ಅನುಬಂಧದಂತೆ ನೇಮಕಾತಿ ಕಾರ್ಯ ವಿಧಾನವನ್ನು ತಕ್ಷಣದಿಂದ ಜಾರಿಗೆ ಬರುವಂತೆ ಹಾಗೂ ಮುಂದಿನ ಆದೇಶದವರೆಗೆ ನಿಗದಿಪಡಿಸಿ ಆದೇಶ ಹೊರಡಿಸಿದೆ.

ಹಿರಿಯ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ (ರೂ. 40,900-78,200). ಹುದ್ದೆಗಳ ಸಂಖ್ಯೆ 1500, ನೇಮಕಾತಿ ವಿಧಾನ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ವೃಂದದಿಂದ ಬಡ್ತಿ ಮೂಲಕ. ಮುಂಬಡ್ತಿಗಾಗಿ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ವೃಂದದಲ್ಲಿ ಐದು ವರ್ಷಗಳಿಗೆ ಕಡಿಮೆ ಇಲ್ಲದಂತೆ ಸೇವೆ ಸಲ್ಲಿಸಿರುವ ಅರ್ಹ ವ್ಯಕ್ತಿಗಳು ಲಭ್ಯವಿಲ್ಲದಿದ್ದ ಪಕ್ಷದಲ್ಲಿ ಮೂರು ವರ್ಷಗಳಿಗಿಂತ ಕಡಿಮೆ ಇಲ್ಲದಂತೆ ಸೇವೆ ಸಲ್ಲಿಸಿರುವ ವ್ಯಕ್ತಿಗಳನ್ನು ಪರಿಗಣಿಸಬಹುದು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+