34 ಜಿಲ್ಲಾ ನೋಂದಣಿ ಕಛೇರಿಯಲ್ಲಿ 2 ಹೊಸ ಹುದ್ದೆಗೆ ರಚನೆಗೆ ಒಪ್ಪಿಗೆ
ಬೆಂಗಳೂರು, ಮೇ 29; ನೋಂದಣಿ ಮತ್ತು ಮುದ್ರಾಂಕ ಇಲಾಖೆ, ಕೇಂದ್ರ ಕಛೇರಿಯಲ್ಲಿ ಆಂತರಿಕ ಲೆಕ್ಕ ಪರಿಶೋಧನಾ ಶಾಖೆ ಸೃಜಿಸುವ ಕುರಿತು ಆದೇಶ ಹೊರಡಿಸಲಾಗಿದೆ. ಉಲ್ಲೇಖಿತ ಸರ್ಕಾರದ ಆದೇಶದಂತೆ ಮಂಜೂರಾಗಿರುವ ಹುದ್ದೆಗಳಿಗೆ ಅಧಿಕಾರಿ ಮತ್ತು ಸಿಬ್ಬಂದಿಯನ್ನು ನಿಯೋಜಿಸುವಂತೆ ತಿಳಿಸಲಾಗಿದೆ.
ನೋಂದಣಿ ಮಹಾಪರಿವೀಕ್ಷಕರು ಮತ್ತು ಮುದ್ರಾಂಕಗಳ ಆಯುಕ್ತರು, ಬೆಂಗಳೂರು ಈ ಕುರಿತು ಆದೇಶವನ್ನು ಹೊರಡಿಸಿದ್ದಾರೆ. ಸರ್ಕಾರದ ಆದೇಶ ಸಂಖ್ಯೆ 18/3/2023ರ ಆದೇಶ ಉಲ್ಲೇಖಿಸಲಾಗಿದೆ.

ಈ ಆದೇಶ ನೋಂದಣಿ ಮತ್ತು ಮುದ್ರಾಂಕ ಇಲಾಖೆ, ಕೇಂದ್ರ ಕಛೇರಿಯಲ್ಲಿ ಅಂತರಿಕ ಲೆಕ್ಕ ಪರಿಶೋಧನಾ ಶಾಖೆ (Internal Audit wing) ಸೃಜಿಸುವ ಕುರಿತು ಎಂಬ ವಿಷಯವನ್ನು ಒಳಗೊಂಡಿದೆ.
ಆದೇಶದಲ್ಲಿ ಏನಿದೆ?; ಪ್ರಸ್ತಾವಿತ ವಿಷಯಕ್ಕೆ ಸಂಬಂಧಿಸಿದಂತೆ, ಸರ್ಕಾರವು ನೋಂದಣಿ ಮತ್ತು ಮುದ್ರಾಂಕ ಇಲಾಖೆಯ ಆಂತರಿಕ ಲೆಕ್ಕ ಪರಿಶೋಧನಾ ವಿಭಾಗವನ್ನು ಬಲಪಡಿಸಲು ಉಲ್ಲೇಖಿತ ಆದೇಶದಲ್ಲಿ ಈ ಕೆಳಕಂಡ ಹೊಸ ಹುದ್ದೆಗಳನ್ನು ಸೃಜಿಸಿ ಮಂಜೂರಾತಿ ಆದೇಶ ನೀಡಿರುತ್ತಾರೆ ಎಂದು ಹೇಳಿದೆ.

ಸಹಾಯಕ ನಿಯಂತ್ರಕರು 2, ಲೆಕ್ಕಾದೀಕ್ಷಕರು 2, ಪ್ರಥಮ ದರ್ಜೆ ಲೆಕ್ಕ ಸಹಾಯಕರು 2 ಸೇರಿದಂತೆ ಒಟ್ಟು 6 ಹುದ್ದೆಗಳು. ಈ ಹೊಸ ಹುದ್ದೆಗಳನ್ನು ನೋಂದಣಿ ಮಹಾಪರಿವೀಕ್ಷಕರು ಮತ್ತು ಮುದ್ರಾಂಕಗಳ ಆಯುಕ್ತರ ಕಛೇರಿಗೆ ಮಂಜೂರಾತಿ ನೀಡಲಾಗಿದ್ದು, ಸದರಿ ಹುದ್ದೆಗಳಿಗೆ ಕರ್ನಾಟಕ ರಾಜ್ಯ ಲೆಕ್ಕ ಪರಿಶೋಧನೆ ಮತ್ತು ಲೆಕ್ಕ ಪತ್ರ ಇಲಾಖೆಯಿಂದ ನಿಯೋಜನೆ ಮೇಲೆ ಭರ್ತಿ ಮಾಡಿಕೊಳ್ಳುವಂತೆ ಆದೇಶಿಸಿರುತ್ತಾರೆ.
ನೋಂದಣಿ ಮತ್ತು ಮುದ್ರಾಂಕ ಇಲಾಖೆಯ 34 ಜಿಲ್ಲಾ ನೋಂದಣಿ ಕಛೇರಿಗಳಿಗೆ ಪ್ರತಿ ಕಛೇರಿಗೆ ಒಂದು ಹೊಸ ಲೆಕ್ಕ ಪರಿಶೋಧನಾಧಿಕಾರಿ ಹುದ್ದೆಯನ್ನು ಹಾಗೂ ಪ್ರತಿ ಕಛೇರಿಗೆ ಒಂದು ಹೊಸ ಪ್ರಥಮ ದರ್ಜೆ ಲೆಕ್ಕ ಸಹಾಯಕರು ಹುದ್ದೆಗಳನ್ನು ಮಂಜೂರಾತಿ ನೀಡಲಾಗಿದೆ.
ಸದರಿ ಹುದ್ದೆಗಳನ್ನು ಕರ್ನಾಟಕ ರಾಜ್ಯ ಲೆಕ್ಕ ಪರಿಶೋಧನೆ ಮತ್ತು ಲೆಕ್ಕ ಪತ್ರ ಇಲಾಖೆಯಿಂದ ನಿಯೋಜನೆ ಮೇಲೆ ಭರ್ತಿ ಮಾಡಿಕೊಳ್ಳುವಂತೆ ಆದೇಶಿಸಿರುತ್ತಾರೆ. ಸರ್ಕಾರದ ಆದೇಶದಂತೆ ಮಂಜೂರಾಗಿರುವ ಹುದ್ದೆಗಳಿಗೆ ಅಧಿಕಾರಿಗಳು ಮತ್ತು ಸಿಬ್ಬಂದಿಗಳನ್ನು ನಿಯೋಜಿಸುವಂತೆ ಈ ಮೂಲಕ ಕೋರಿದೆ ಎಂದು ಆದೇಶ ಹೇಳಿದೆ.
ಈ ಆದೇಶದ ಪ್ರತಿಯನ್ನು ಸರ್ಕಾರದ ಪ್ರಧಾನ ಕಾರ್ಯದರ್ಶಿಗಳು ಕಂದಾಯ ಇಲಾಖೆ (ವಿಪತ್ತು ನಿರ್ವಹಣೆ, ನೋಂದಣಿ ಮತ್ತು ಮುದ್ರಾಂಕ) ಬಹುಮಹಡಿಗಳ ಕಟ್ಟಡ, ಬೆಂಗಳೂರು ಇವರಿಗೆ ಸೂಕ್ತ ಕ್ರಮಕ್ಕಾಗಿ ಕಳಿಸಲಾಗಿದೆ.












Click it and Unblock the Notifications