ಮೈಸೂರಿನ ಕೇಂದ್ರೀಯ ವಿದ್ಯಾಲಯದಲ್ಲಿ ನಾನಾ ಹುದ್ದೆ ಖಾಲಿ

Posted By:
Subscribe to Oneindia Kannada

ಮೈಸೂರು, ಅಕ್ಟೋಬರ್ 14 : ಮೈಸೂರಿನ ಕೇಂದ್ರಿಯ ವಿದ್ಯಾಲಯ ಸಂಘಟನೆಯಲ್ಲಿ ಪ್ರಾಂಶುಪಾಲ, ಸ್ನಾತಕೋತ್ತರ ಶಿಕ್ಷಕ, ನುರಿತ ಪದವಿ ಶಿಕ್ಷಕ ಹಾಗೂ ಪ್ರಾಥಮಿಕ ಶಾಲಾ ಶಿಕ್ಷಕ ಹುದ್ದೆಗಳನ್ನು ಸ್ಪರ್ಧಾತ್ಮಕ ಪರೀಕ್ಷೆ ಮತ್ತು ಸಂದರ್ಶನಗಳ ಮೂಲಕ ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ.

ಪ್ರಾಂಶುಪಾಲ ಹುದ್ದೆಗೆ ಅರ್ಜಿ ಸಲ್ಲಿಸುವವರ ವಯೋಮಿತ 35-50 ವರ್ಷದೊಳಗಿರಬೇಕು, ಶೇ.45 ಅಂಕಗಳೊಂದಿಗೆ ಯಾವುದಾದರೂ ಸ್ನಾತಕೋತ್ತರ ಪದವಿ ಪಡೆದಿರಬೇಕು. ಜೊತೆಗೆ ಬಿ.ಎಡ್. ಪದವಿ ಪಡದಿರಬೇಕು. ಮತ್ತು ಉಪ ಪ್ರಾಶುಂಪಾಲರಾಗಿ 2 ವರ್ಷ ಕೆಲಸ ಮಾಡಿದ ಅನುಭವವಿರಬೇಕು.

ಸ್ನಾತಕೋತ್ತರ ಶಿಕ್ಷಕ ಹುದ್ದೆಗೆ ಅರ್ಜಿ ಸಲ್ಲಿಸುವವರ ವಯೋಮಿತ 40 ವರ್ಷದೊಳಗಿರಬೇಕು, ಶೇ. 50 ಅಂಕಗಳೊಂದಿಗೆ ಸಂಬಂಧಪಟ್ಟ ವಿಷಯಗಳಲ್ಲಿ ಸ್ನಾತಕೋತ್ತರ ಪದವಿ ಪಡೆದಿರಬೇಕು. ಜೊತೆಗೆ ಬಿ.ಎಡ್. ಪದವಿ ಪಡದಿರಬೇಕು. ಹಿಂದಿ ಮತ್ತು ಇಂಗ್ಲಿಷ್ ಭಾಷೆಯಲ್ಲಿ ಬೋಧನೆ ಮಾಡುವ ಕುಶಲತೆ ಹೊಂದಿರಬೇಕು.

Several posts vacant in Kendriya Vidyalaya Mysuru

ನುರಿತ ಪದವಿ ಶಿಕ್ಷಕ ಹುದ್ದೆಗೆ ಅರ್ಜಿ ಸಲ್ಲಿಸುವವರ ವಯೋಮಿತ 35 ವರ್ಷದೊಳಗಿರಬೇಕು, ಶೇ. 50 ಅಂಕಗಳೋಂದಿಗೆ ಸಂಬಂಧಪಟ್ಟ ವಿಷಯಗಳಲ್ಲಿ ಪದವಿ ಪಡೆದಿರಬೇಕು. ಜೊತೆಗೆ ಬಿ.ಎಡ್. ಪದವಿ ಪಡದಿರಬೇಕು. ಹಿಂದಿ ಮತ್ತು ಇಂಗ್ಲಿಷ್ ಭಾಷೆಯಲ್ಲಿ ಬೋಧನೆ ಮಾಡುವ ಕುಶಲತೆ ಹೊಂದಿರಬೇಕು.

ಪ್ರಾಥಮಿಕ ಶಾಲಾ ಶಿಕ್ಷಕರ ಹುದ್ದೆಗೆ ಅರ್ಜಿ ಸಲ್ಲಿಸುವವರ ವಯೋಮಿತ 30 ವರ್ಷದೊಳಗಿರಬೇಕು, ಶೇ. 50 ಅಂಕಗಳೋಂದಿಗೆ ಪಿ.ಯು.ಸಿ., ಜೊತೆಗೆ ಕೇಂದ್ರಿಯ ಶಿಕ್ಷಕರ ಅರ್ಹತಾ ಪರೀಕ್ಷೆ ತೇರ್ಗಡೆಯಾಗಿರಬೇಕು. ಹಿಂದಿ ಮತ್ತು ಇಂಗ್ಲಿಷ್ ಭಾಷೆಯಲ್ಲಿ ಬೋಧನೆ ಮಾಡುವ ಕುಶಲತೆ ಹೊಂದಿರಬೇಕು.

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ :ಅರ್ಜಿ ಸಲ್ಲಿಸಲು 17-10-2016 ಕೊನೆಯ ದಿನಾಂಕವಾಗಿರುತ್ತದೆ. ಅಲ್ಲದೆಅಂಗವಿಕಲ ಅಭ್ಯರ್ಥಿಗಳಿಗೆ 10 ವರ್ಷ ವಯೋಮಿತಿಯಲ್ಲಿ ಸಡಲಿಕೆ ಇರುತ್ತದೆ.

ಅರ್ಜಿ ಸಲ್ಲಿಸಲು ಮತ್ತು ಹೆಚ್ಚಿನ ಮಾಹಿತಿಗೆ : ಕೇಂದ್ರಿಯ ವಿದ್ಯಾಲಯ ಸಂಘಟನೆಯ ವೆಬ್ ಸೈಟ್ http://kvmysore.ac.in/ ಅಥವಾ ಉಪಮುಖ್ಯಸ್ಥರು, ವಿಶ್ವ ವಿದ್ಯಾನಿಲಯ ಉದ್ಯೋಗ ಮಾಹಿತಿ ಮತ್ತುಮಾರ್ಗದರ್ಶನ ಕೇಂದ್ರ, ಮಾನಸಗಂಗೋತ್ರಿ, ಮೈಸೂರು ಇವರನ್ನು ಸಂಪರ್ಕಿಸಬಹುದು.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

English summary
Kendriya Vidyalaya Sanghatan, Mysuru has invited applications for several posts including principal, teachers for post graduate classes, school teachers etc. Last date for filing application is 17th October, 2016. Hurry up.
Please Wait while comments are loading...