ಶಿವಮೊಗ್ಗ: ಗ್ರಾಮೀಣ ಪುನರ್ವಸತಿ ಕಾರ್ಯಕರ್ತರ ಹುದ್ದೆಗೆ ಅರ್ಜಿ ಆಹ್ವಾನ

ಶಿವಮೊಗ್ಗ, ಆಗಸ್ಟ್ 12: ವಿಕಲಚೇತನರ ಹಾಗೂ ಹಿರಿಯ ನಾಗರೀಕರ ಸಬಲೀಕರಣ ಇಲಾಖೆಯು ಅಂಗವಿಕಲ ಗ್ರಾಮೀಣ ಪುನರ್ವಸತಿ ಕಾರ್ಯಕ್ರಮ ಯೋಜನೆಯಡಿ ಶಿಕಾರಿಪುರ ತಾಲೂಕಿನ ಹೊಸಗಿದ್ದನಕೊಪ್ಪ, ಹರಗಿ, ಮಳವಳ್ಳಿ, ಮಂಚಿಕೊಪ್ಪ ಮತ್ತು ಬೇಗೂರು ಗ್ರಾಮ ಪಂಚಾಯತಿಗಳಲ್ಲಿ ಗ್ರಾಮೀಣ ಪುನರ್ವಸತಿ ಕಾರ್ಯಕರ್ತರ ಹುದ್ದೆಗೆ ಅರ್ಹ ವಿಕಲಚೇತನರಿಂದ ಅರ್ಜಿ ಆಹ್ವಾನಿಸಿದೆ.

ಅರ್ಜಿದಾರರು 18 ರಿಂದ 45 ವರ್ಷದೊಳಗಿನವರಾಗಿದ್ದು, ಶಿಕಾರಿಪುರ ತಾ.ಪಂ ಕಚೇರಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ವಿವಿಧೋದ್ದೇಶ ಪುನರ್ವಸತಿ ಕಾರ್ಯಕರ್ತರಿಂದ ನಿಗದಿತ ನಮೂನೆ ಅರ್ಜಿಯನ್ನು ಪಡೆದು, ಭರ್ತಿ ಮಾಡಿದ ಅರ್ಜಿ ಸಲ್ಲಿಸಬೇಕು.

ಅರ್ಜಿಯೊಂದಿಗೆ 10ನೇ ತರಗತಿ ಉತ್ತೀರ್ಣ/ಅನುತ್ತೀರ್ಣ ಹೊಂದಿರುವುದಕ್ಕೆ ಅಂಕಪಟ್ಟಿ, ವಾಸ ದೃಢೀಕರಣ ಪತ್ರ, ಆಧಾರ್ ಕಾರ್ಡ್, ಯು.ಡಿ.ಐ.ಡಿ. ಕಾರ್ಡ್/ ವಿಕಲತೆ ಗುರುತಿನ ಚೀಟಿಯ ನಕಲು ಪ್ರತಿಗಳನ್ನು ಲಗತ್ತಿಸಿ ಆಗಸ್ಟ್ 21 ರೊಳಗಾಗಿ ಸಲ್ಲಿಸುವಂತೆ ಶಿವಮೊಗ್ಗ ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

Shivamogga: An Invitation To Apply For The Post Of Rural Rehabilitation Activists

ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿಗಳ ದೂರವಾಣಿ ಸಂಖ್ಯೆ: 08182-251676 ನ್ನು ಸಂಪರ್ಕಿಸುವುದು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+