ಶಿವಮೊಗ್ಗ, ಉಡುಪಿಯಲ್ಲಿ ಕೆಲಸ ಖಾಲಿ ಇದೆ, ವಿವರ

ಬೆಂಗಳೂರು, ಅಕ್ಟೋಬರ್ 13; ಉದ್ಯೋಗ ಹುಡುಕುತ್ತಿರುವವರಿಗೆ ಸಿಹಿಸುದ್ದಿ. ಶಿವಮೊಗ್ಗದಲ್ಲಿ ಸಾಮಾನ್ಯ ಕರ್ತವ್ಯ ವೈದ್ಯಾಧಿಕಾರಿ, ಅರವಳಿಕೆ ತಜ್ಞ ಮತ್ತು ಉಡುಪಿಯಲ್ಲಿ ಗ್ರಂಥಾಲಯ ಮೇಲ್ವಿಚಾರಕ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಶಿವಮೊಗ್ಗ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಅಧೀನ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಖಾಲಿ ಇರುವ 12 ಸಾಮಾನ್ಯ ಕರ್ತವ್ಯ ವೈದ್ಯಾಧಿಕಾರಿಗಳು ಮತ್ತು ಸಮುದಾಯ ಆರೋಗ್ಯ ಕೇಂದ್ರಗಳಲ್ಲಿ ಖಾಲಿ ಇರುವ ಅರವಳಿಕೆ ತಜ್ಞರ 4 ಹುದ್ದೆಗಳು ಹಾಗೂ ಪ್ರಸೂತಿ ತಜ್ಞರ 3 ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದೆ.

Shivamogga And Udupi District Job News Know Details

ತಾತ್ಕಾಲಿಕವಾಗಿ ಗುತ್ತಿಗೆ ಆಧಾರದಲ್ಲಿ 1 ವರ್ಷದ ಅವಧಿಗೆ ರೋಸ್ಟರ್ ಮತ್ತು ಮೆರಿಟ್ ಆಧಾರದಲ್ಲಿ ನೇಮಕ ಮಾಡಲು ಅರ್ಹ ಎಂಬಿಬಿಎಸ್ ಪದವೀಧರರು ಮತ್ತು ತಜ್ಞ ವೈದ್ಯರಿಂದ ಅರ್ಜಿ ಆಹ್ವಾನಿಸಲಾಗಿದೆ.

ಆಸಕ್ತರು ಅಕ್ಟೋಬರ್ 17ರಂದು ಬೆಳಗ್ಗೆ 11 ರಿಂದ ಮಧ್ಯಾಹ್ನ 1ತ ವರೆಗೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳ ಕಚೇರಿ, ಬಿ. ಹೆಚ್. ರಸ್ತೆ, ಇಲ್ಲಿ ತಮ್ಮ ವಿದ್ಯಾರ್ಹತೆ, ಹುಟ್ಟಿದ ದಿನಾಂಕ ಮತ್ತು ಮೀಸಲಾತಿಗೆ ಸಂಬಂಧಿಸಿದ ಎಲ್ಲಾ ದಾಖಲಾತಿಗಳ ಒಂದು ಸೆಟ್ ನಕಲು ಮತ್ತು ಮೂಲ ಪ್ರತಿ ಹಾಗೂ ಇತ್ತೀಚಿನ ಎರಡು ಭಾವಚಿತ್ರಗಳೊಂದಿಗೆ ಸಂದರ್ಶನಕ್ಕೆ ಹಾಜರಾಗಬಹುದು.

ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಹೆಚ್ಚಿನ ಮಾಹಿತಿಗಾಗಿ ಕಚೇರಿಯನ್ನು ಖುದ್ದಾಗಿ ಅಥವಾ ದೂರವಾಣಿ ಸಂಖ್ಯೆ 08182-222382ಕ್ಕೆ ಕರೆ ಮಾಡಬಹುದು.

ಗ್ರಂಥಾಲಯ ಮೇಲ್ವಿಚಾರಕರ; ಉಡುಪಿ ಜಿಲ್ಲೆಯ ಉಡುಪಿ ತಾಲೂಕಿನ ಅಂಬಲಪಾಡಿ ಗ್ರಾಮ ಪಂಚಾಯತಿ ಗ್ರಂಥಾಲಯದಲ್ಲಿ ಖಾಲಿ ಇರುವ ಗ್ರಂಥಾಲಯ ಮೇಲ್ವಿಚಾರಕ 1 ಹುದ್ದೆ (ಪ್ರವರ್ಗ-2 (ಎ)-ಗ್ರಾಮೀಣ ಅಭ್ಯರ್ಥಿ) ಹಾಗೂ ಕುಂದಾಪುರ ತಾಲೂಕಿನ ಗುಲ್ವಾಡಿ (ಸಾಮಾನ್ಯ ಅಭ್ಯರ್ಥಿ-ಮಹಿಳೆ) ಮತ್ತು ಯಡಮೊಗೆ ಗ್ರಾಮ ಪಂಚಾಯತಿ (ಪ್ರವರ್ಗ-2(ಬಿ)-ಗ್ರಾಮೀಣ ಅಭ್ಯರ್ಥಿ) ಗ್ರಂಥಾಲಯಗಳಲ್ಲಿ ಖಾಲಿ ಇರುವ ಗ್ರಂಥಾಲಯ ಮೇಲ್ವಿಚಾರಕ ತಲಾ 1 ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದೆ.

ಒಟ್ಟು 3 ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ನಿಗದಿತ ಮೀಸಲಾತಿ, ಅದೇ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ವಾಸಿಸುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬೇಕಿದೆ. ಆಸಕ್ತರು ಅರ್ಜಿ ಸಲ್ಲಿಸಲು ಅಕ್ಟೋಬರ್ 25 ಕೊನೆಯ ದಿನ.

ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಅಭ್ಯರ್ಥಿಗಳು ಸಮೀಪದ ಗ್ರಾಮ ಪಂಚಾಯತಿ ಕಚೇರಿಯನ್ನು ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆಯಲ್ಲಿ ಮಾಹಿತಿ ನೀಡಲಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+