ಶಿವಮೊಗ್ಗ, ದಾವಣಗೆರೆ ಮತ್ತು ಧಾರವಾಡದ ಉದ್ಯೋಗ ಮಾಹಿತಿ
ಶಿವಮೊಗ್ಗ, ದಾವಣಗೆರೆ ಮತ್ತು ಧಾರವಾಡದಲ್ಲಿ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಆಸಕ್ತರು ಅರ್ಜಿಗಳನ್ನು ಸಲ್ಲಿಕೆ ಮಾಡಬಹುದಾಗಿದೆ.
ಬೆಂಗಳೂರು, ಫೆಬ್ರವರಿ 07; ಶಿವಮೊಗ್ಗ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳ ಕಚೇರಿಯ ಅಧೀನ ಸಮುದಾಯ ಆರೋಗ್ಯ ಕೇಂದ್ರಗಳಲ್ಲಿ ಖಾಲಿಯಿರುವ ಹುದ್ದೆಗಳ ಭರ್ತಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
2 ಸ್ತ್ರೀರೋಗ ತಜ್ಞರು, 2 ಮಕ್ಕಳ ತಜ್ಞರು ಹಾಗೂ 3 ಅರವಳಿಕೆ ತಜ್ಞರು ಸೇರಿ ಒಟ್ಟು 7 ತಜ್ಞ ವೈದ್ಯರ ಹುದ್ದೆಗಳನ್ನು ತಾತ್ಕಾಲಿಕವಾಗಿ ಗುತ್ತಿಗೆ ಆಧಾರದ ಮೇಲೆ ಒಂದು ವರ್ಷದ ಅವಧಿಗೆ ರೋಸ್ಟರ್ & ಮೆರಿಟ್ ಆಧಾರದಲ್ಲಿ ನೇಮಕ ಮಾಡಲಾಗುತ್ತಿದೆ.
ಆಸಕ್ತ ಅಭ್ಯರ್ಥಿಗಳು ಫೆಬ್ರವರಿ 10ರಂದು ಬೆಳಗ್ಗೆ 11 ರಿಂದ ಮಧ್ಯಾಹ್ನ 1 ಗಂಟೆಯವರೆಗೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳ ಕಚೇರಿ, ಬಿ. ಹೆಚ್. ರಸ್ತೆ ಶಿವಮೊಗ್ಗ ಇಲ್ಲಿ ನಡೆಯುವ ಸಂದರ್ಶನಕ್ಕೆ ಹಾಜರಾಗಬೇಕು.

ತಮ್ಮ ವಿದ್ಯಾರ್ಹತೆಯ/ ತರಬೇತಿಯ ಎಲ್ಲಾ ದಾಖಲಾತಿಗಳ ಒಂದು ಸೆಟ್ ನಕಲು ಮತ್ತು ಮೂಲ ಪ್ರತಿಗಳು ಹಾಗೂ ಇತ್ತೀಚಿನ ಎರಡು ಭಾವಚಿತ್ರಗಳ ಜೊತೆ ನೇರ ಸಂದರ್ಶನಕ್ಕೆ ಹಾಜರಾಗುವಂತೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳು ತಿಳಿಸಿದ್ದಾರೆ. ಹೆಚ್ಚಿನ ಮಾಹಿತಿಗೆ ಕರೆ ಮಾಡಿ 08182-222382.
ಫೆ. 16ರಂದು ಸಂದರ್ಶನ; ಧಾರವಾಡ ಕೃಷಿ ವಿಶ್ವವಿದ್ಯಾಲಯದ ಸಮುದಾಯ ವಿಜ್ಞಾನ ಮಹಾವಿದ್ಯಾಲಯ, ವಸ್ತ್ರ ಹಾಗೂ ಉಡುಪು ವಿನ್ಯಾಸ ವಿಭಾಗದಲ್ಲಿ ಸಹಾಯಕ ಪ್ರಾಧ್ಯಾಪಕರ ತಾತ್ಕಾಲಿಕ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ.
ಆಸಕ್ತರು ಅರ್ಜಿ ನಮೂನೆಯ ಎರಡು ಪ್ರತಿಗಳೊಂದಿಗೆ ಫೆಬ್ರವರಿ 16 ರಂದು ಬೆಳಗ್ಗೆ 10.30ಕ್ಕೆ ವಿದ್ಯಾಧಿಕಾರಿಗಳು, ಸಮುದಾಯ ವಿಜ್ಞಾನ ಮಹಾವಿದ್ಯಾಲಯ, ಕೃಷಿ ಮಹಾವಿದ್ಯಾಲಯ, ಧಾರವಾಡ ಇಲ್ಲಿ ನಡೆಯುವ ಸಂದರ್ಶನಕ್ಕೆ ಹಾಜರಾಗಬೇಕು. ಹೆಚ್ಚಿನ ಮಾಹಿತಿಗಾಗಿ ಕೃಷಿ ವಿಶ್ವವಿದ್ಯಾಲಯದ ವೆಬ್‌ಸೈಟ್ ವೀಕ್ಷಣೆ ಮಾಡಬಹುದು.
ದಾವಣಗೆರೆಯಲ್ಲಿ ಉದ್ಯೋಗ; ಖೇಲೋ ಇಂಡಿಯಾ ಯೋಜನೆಯಡಿ ದಾವಣಗೆರೆ ಜಿಲ್ಲೆಯ ಕುಸ್ತಿ ಖೇಲೋ ಇಂಡಿಯಾ ಕೇಂದ್ರದಲ್ಲಿ ಉಚಿತ ತರಬೇತಿ ನೀಡಲು ಒಬ್ಬ ತರಬೇತುದಾರರ ಆಯ್ಕೆ ಮಾಡಿಕೊಳ್ಳಲಾಗುತ್ತಿದೆ.
ರಾಷ್ಡ್ರೀಯ/ ಅಂತರಾಷ್ಟ್ರೀಯ ಮಟ್ಟದ ಕುಸ್ತಿ ಪಂದ್ಯಾವಳಿಯಲ್ಲಿ ಭಾಗವಹಿಸಿ ಸಾಧನೆ ಮಾಡಿದ ಜಿಲ್ಲೆಯ ಕುಸ್ತಿ ಪಟುಗಳು ಜಿಲ್ಲಾ ಕ್ರೀಡಾಂಗಣದಲ್ಲಿರುವ ಸಹಾಯಕ ನಿರ್ದೇಶಕರ ಕಚೇರಿ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಗೆ ಪ್ರಸ್ತಾವನೆಯನ್ನು ಸಲ್ಲಿಸಬಹುದು.












Click it and Unblock the Notifications