ಶಿವಮೊಗ್ಗ ಜಿಲ್ಲಾ ಕೋರ್ಟ್‌ನಲ್ಲಿ ಗುಮಾಸ್ತ ಹುದ್ದೆಗಳಿಗೆ ಅರ್ಜಿ ಆಹ್ವಾನ
ಶಿವಮೊಗ್ಗ, ಫೆಬ್ರವರಿ 26: ಶಿವಮೊಗ್ಗ ಜಿಲ್ಲಾ ನ್ಯಾಯಾಲಯದಲ್ಲಿ ಖಾಲಿ ಇರುವ ಗುಮಾಸ್ತ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ ಮಾಡಲಾಗಿದೆ.
ಒಟ್ಟು 27 ಸಹಾಯಕ (ಪ್ಯೂನ್) ಹುದ್ದೆಗಳು ಖಾಲಿ ಇದ್ದು, ಆಸಕ್ತರು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು. ಶಿವಮೊಗ್ಗ ಜಿಲ್ಲಾ ನ್ಯಾಯಾಲಯದಲ್ಲಿ ಖಾಲಿ ಇರುವ ಪ್ಯೂನ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಮಾರ್ಚ್ 24 ಕೊನೆಯ ದಿನಾಂಕವಾಗಿದೆ.
ಫೆಬ್ರವರಿ 25ರಿಂದ ಅರ್ಜಿ ಸಲ್ಲಿಕೆ ಆರಂಭವಾಗಿದ್ದು, ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಕೂಡಲೇ ಅರ್ಜಿ ಸಲ್ಲಿಸಿ. ಹೆಚ್ಚಿನ ಮಾಹಿತಿಗಾಗಿ ಅಧಿಕೃತ ವೆಬ್ಸೈಟ್ districts.ecourts.gov.in ಗೆ ಭೇಟಿ ನೀಡಿ ಮಾಹಿತಿ ಪಡೆದುಕೊಳ್ಳಬಹುದು.

ಅರ್ಜಿ ಸಲ್ಲಿಕೆಗೂ ಮುನ್ನ ಹುದ್ದೆಯ ಕುರಿತಾಗಿ ಮಾಹಿತಿ, ವಿದ್ಯಾರ್ಹತೆ, ಸಂಬಳ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ ಕುರಿತಾದ ಮಾಹಿತಿ ಇಲ್ಲಿದೆ.
ವಿದ್ಯಾರ್ಹತೆ:
ಶಿವಮೊಗ್ಗ ಜಿಲ್ಲಾ ನ್ಯಾಯಾಲಯದಲ್ಲಿ ಖಾಲಿ ಇರುವ ಗುಮಾಸ್ತ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ಬೋರ್ಡ್/ ಶಿಕ್ಷಣ ಸಂಸ್ಥೆಯಿಂದ ಕಡ್ಡಾಯವಾಗಿ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಪಾಸಾಗಿರಬೇಕು.
ವಯೋಮಿತಿ:
ಶಿವಮೊಗ್ಗ ಜಿಲ್ಲಾ ನ್ಯಾಯಾಲಯದಲ್ಲಿ ಖಾಲಿ ಇರುವ ಗುಮಾಸ್ತ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ವಯಸ್ಸು ಮಾರ್ಚ್ 24, 2022ಕ್ಕೆ 18-35 ವರ್ಷದೊಳಗಿರಬೇಕು.
ಯಾವ ವರ್ಗಕ್ಕೆ ವಯೋಮಿತಿ ಸಡಿಲಿಕೆ:
ಎಸ್ಸಿ/ ಎಸ್ಟಿ/ ಪ್ರವರ್ಗ-1 ಅಭ್ಯರ್ಥಿಗಳಿಗೆ- 5 ವರ್ಷ ಸಡಿಲಿಕೆ
ಪ್ರವರ್ಗ-2ಎ/ 2ಬಿ/ 3ಎ & 3ಬಿ ಅಭ್ಯರ್ಥಿಗಳಿಗೆ- 3 ವರ್ಷ ಸಡಿಲಿಕೆ
ಅರ್ಜಿ ಶುಲ್ಕ:
ಎಸ್ಸಿ/ ಎಸ್ಟಿ/ ಪ್ರವರ್ಗ-1 ಮತ್ತು PH ಅಭ್ಯರ್ಥಿಗಳಿಗೆ- ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ
ಪ್ರವರ್ಗ- 2ಎ/ 2ಬಿ/ 3ಎ ಮತ್ತು 3ಬಿ ಅಭ್ಯರ್ಥಿಗಳಿಗೆ- 100 ರೂ. ಅರ್ಜಿ ಶುಲ್ಕ
ಸಾಮಾನ್ಯ ಅಭ್ಯರ್ಥಿಗಳಿಗೆ- 200 ರೂ.
ಪಾವತಿ ವಿಧಾನ- ಭಾರತೀಯ ಸ್ಟೇಟ್ ಬ್ಯಾಂಕ್ ಕಲೆಕ್ಟ್
ವೇತನ:
ಶಿವಮೊಗ್ಗ ಜಿಲ್ಲಾ ನ್ಯಾಯಾಲಯದಲ್ಲಿ ಖಾಲಿ ಇರುವ ಗುಮಾಸ್ತ ಹುದ್ದೆಗಳಿಗೆ ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಮಾಸಿಕ 17,000 ರೂ.ನಿಂದ 28,950 ರೂ.ವರೆಗೆ ವೇತನ ನೀಡಲಾಗುತ್ತದೆ.
ಆಯ್ಕೆ ಪ್ರಕ್ರಿಯೆ:
ಮೆರಿಟ್ ಲಿಸ್ಟ್
ಸಂದರ್ಶನ
ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಆರಂಭ ದಿನಾಂಕ: ಫೆಬ್ರವರಿ 25, 2022
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: ಮಾರ್ಚ್ 24, 2022
ಅರ್ಜಿ ಶುಲ್ಕ ಪಾವತಿಸಲು ಕೊನೆಯ ದಿನಾಂಕ: ಮಾರ್ಚ್ 25, 2022












Click it and Unblock the Notifications