ಶಿವಮೊಗ್ಗ; ಗ್ರಾಮ ಒನ್ ಕೇಂದ್ರದಲ್ಲಿ ಕೆಲಸ ಖಾಲಿ ಇದೆ
ಞಞಶಿವಮೊಗ್ಗ, ಫೆಬ್ರವರಿ 06: ಶಿವಮೊಗ್ಗ ಜಿಲ್ಲೆಯ ವಿವಿಧ ತಾಲೂಕುಗಳ ಗ್ರಾಮ ಒನ್ ಕೇಂದ್ರಗಳಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಗಳನ್ನು ಕರೆಯಲಾಗಿದೆ. ಆಸಕ್ತರು ಅರ್ಜಿಗಳನ್ನು ಸಲ್ಲಿಕೆ ಮಾಡಲು 15/2/2024 ಕೊನೆಯ ದಿನವಾಗಿದೆ.
ಶಿವಮೊಗ್ಗ ಜಿಲ್ಲೆಯಲ್ಲಿ ಗ್ರಾಮ ಒನ್ ಕೇಂದ್ರಗಳಿಲ್ಲಿ ಖಾಲಿ ಇರುವ ಹುದ್ದೆಗಳಿಗೆ ಸೇವೆ ನೀಡಲು ಆಸಕ್ತಿ ಇರುವ ಅಭ್ಯರ್ಥಿಗಳು ಆನ್‍ಲೈನ್ ಮೂಲಕ ಮಾತ್ರ ಅರ್ಜಿ ಸಲ್ಲಿಸಬೇಕಿದೆ.

'ಗ್ರಾಮ ಒನ್' ಯೋಜನೆ ಸರ್ಕಾರದ ಮಹತ್ವಕಾಂಕ್ಷಿಯ ಯೋಜನೆಯಾಗಿದ್ದು ಗ್ರಾಮೀಣ ಜನತೆಗೆ ವಿವಿಧ ಸೇವೆಗಳನ್ನು ಒದಗಿಸಲು ಏಕಗವಾಕ್ಷಿ ವ್ಯವಸ್ಥೆಯಾಗಿ ಕಾರ್ಯನಿರ್ವಹಿಸುತ್ತಿದೆ.
ಸರ್ಕಾರಿ ಸೇವೆಗಳನ್ನು ಪಡೆಯಲು ಗ್ರಾಮೀಣ ಭಾಗದ ಜನರ ಅಲೆದಾಟ ತಪ್ಪಿಸುವ ನಿಟ್ಟಿನಲ್ಲಿ ಗ್ರಾಮ ಮಟ್ಟದಲ್ಲಿ ಆರಂಭಗೊಂಡ ಗ್ರಾಮ ಒನ್ ಯೋಜನೆಗೆ ಶಿವಮೊಗ್ಗ ಜಿಲ್ಲೆಯಲ್ಲಿ ಉತ್ತಮವಾಗಿ ಸ್ಪಂದನೆ ವ್ಯಕ್ತವಾಗುತ್ತಿದೆ.
ಯಾವ-ಯಾವ ತಾಲೂಕುಗಳು?; ಗ್ರಾಮ ಒನ್ ಯೋಜನೆಗೆ ಸಂಬಂಧಿಸಿದಂತೆ ಶಿವಮೊಗ್ಗ ಜಿಲ್ಲೆಯಲ್ಲಿ ಶಿವಮೊಗ್ಗ ಜಿಲ್ಲೆಯ ಭ್ರದ್ರಾವತಿ ತಾಲೂಕಿನ ಕೊಮ್ಮನಹಳ್ಳಿ -1, ಹೊಸನಗರ ತಾಲೂಕಿನ ತಿರ್ನಿವೆ -1, ಬೆಳ್ಳೂರು -1, ಸಾಗರ ತಾಲೂಕಿನ ತಳವಾಟ-1, ಮಾಳ್ವೆ- 1 ಚೆನ್ನಗೊಂಡ -1, ಕುದರೂರು -1ದಲ್ಲಿ ಕೆಲಸ ಖಾಲಿ ಇದೆ.
ಶಿಕಾರಿಪುರ ತಾಲೂಕಿನ ಅಂಬಾರಗೊಪ್ಪ -1 , ಶಿವಮೊಗ್ಗ ತಾಲೂಕಿನ ಗಾಜನೂರು-1, ಸೊರಬ ತಾಲೂಕಿನ- ಮುದ್ದಿದೊಡ್ಡಿಕೊಪ್ಪ-1, ತೀರ್ಥಹಳ್ಳಿ ತಾಲ್ಲೂಕಿನ ಬಸವಾನಿ-1, ಆಗುಂಬೆ-1 ಹುದ್ದೆ ಖಾಲಿ ಇದ್ದು ಆಸಕ್ತರು ಅರ್ಜಿ ಸಲ್ಲಿಸಬಹುದು.
ಅಭ್ಯರ್ಥಿಗಳು ಅರ್ಜಿಯನ್ನು ವೆಬ್‌ಸೈಟ್‌ಗೆ ಭೇಟಿ ನೀಡಿ ಸಲ್ಲಿಸಬೇಕು ಎಂದು ಅಪರ ಜಿಲ್ಲಾಧಿಕಾರಿ ಸಿದ್ದಲಿಂಗ ರೆಡ್ಡಿ ತಿಳಿಸಿದ್ದಾರೆ.
ವೆಬ್ ಸೈಟ್ ವಿಳಾಸ https://www.Karnatakaone.gov.in/Public/GramaOneFranchi
ಇಡಿಸಿಎಸ್ ನಿರ್ದೇಶನಾಲಯ, ಇ-ಆಡಳಿತ ಇಲಾಖೆಯಿಂದ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಗ್ರಾಮ್ ಒನ್ ಕೇಂದ್ರಗಳನ್ನು ಸ್ಥಾಪನೆ ಮಾಡುತ್ತದೆ. ಹಲವು ಜಿಲ್ಲೆಗಳಲ್ಲಿ ಗೆ ಪ್ರಾಂಚೈಸಿಗಳನ್ನು ಆಯ್ಕೆ ಮಾಡಲು ಸಹ ಆನ್‍ಲೈನ್ ಮೂಲಕ ಅರ್ಜಿ ಕರೆಯುತ್ತದೆ.
ಪಿಯುಸಿ, ಐಟಿಐ, ಡಿಪ್ಲೊಮಾ, ಪದವಿ, ಸ್ನಾತಕೋತ್ತರ ಪದವಿಯೊಂದಿಗೆ ಕಂಪ್ಯೂಟರ್ ಜ್ಞಾನವುಳ್ಳ ಆಸಕ್ತರು, ಗ್ರಾಮ ಒನ್ ಕೇಂದ್ರ ಸ್ಥಾಪಿಸಲು ಅರ್ಜಿ ಸಲ್ಲಿಸಬೇಕು. ಅರ್ಜಿ ಸಲ್ಲಿಸುವವರು ಕನಿಷ್ಠ 100 ಚದರ ಅಡಿ ವಿಸ್ತೀರ್ಣವುಳ್ಳ ಸುಸಜ್ಜಿತ ಕಟ್ಟದೊಂದಿಗೆ ಕಂಪ್ಯೂಟರ್, ಪ್ರಿಂಟರ್, ಸ್ಕ್ಯಾನರ್, ಬಯೋಮೆಟ್ರಿಕ್ ಡಿವೈಸ್, ಮತ್ತು 8 ಗಂಟೆಗಳ ವಿದ್ಯುತ್ ಪರ್ಯಾಯ ವ್ಯವಸ್ಥೆಯೊಂದಿಗೆ ಇಲಾಖೆ ಕಾಲಕಾಲಕ್ಕೆ ಸೂಚಿಸುವ ಮಾನದಂಡಗಳಿಗೆ ಬದ್ಧರಾಗಿರಬೇಕು.












Click it and Unblock the Notifications