ಶಿವಮೊಗ್ಗ: ಆರೋಗ್ಯ ಇಲಾಖೆಯ ವಿವಿಧ ಹುದ್ದೆಗಳಿಗೆ ನೇರ ಸಂದರ್ಶನ, ಭಾಗವಹಿಸಿ

ಶಿವಮೊಗ್ಗ, ನವೆಂಬರ್ 20: ಶಿವಮೊಗ್ಗ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯು ಪ್ರಸಕ್ತ ಸಾಲಿನ ರಾಷ್ಟ್ರೀಯ ಆರೋಗ್ಯ ಅಭಿಯಾನ ಯೋಜನೆಯಡಿ ಜಿಲ್ಲಾ ಮಾನಸಿಕ ಆರೋಗ್ಯ ಕಾರ್ಯಕ್ರಮಕ್ಕೆ ಗುತ್ತಿಗೆ ಆಧಾರದ ಮೇಲೆ ತಾತ್ಕಾಲಿಕ ಅವಧಿಗೆ ಎನ್.ಹೆಚ್.ಎಂ. ನಿಬಂಧನೆಗಳಿಗೆ ಒಳಪಟ್ಟು ಕಾರ್ಯನಿರ್ವಹಿಸಲು ಇಚ್ಚಿಸುವ ಅರ್ಹ ಅಭ್ಯರ್ಥಿಗಳಿಂದ ಸೈಕಿಯಾಟ್ರಿಸ್ಟ್, ಸೈಕಿಯಾಟ್ರಿಸ್ಟ್ ನರ್ಸ್ ಮತ್ತು ಕಮ್ಯುನಿಟಿ ನರ್ಸ್ ತಲಾ ಒಂದು ಹುದ್ದೆಗೆ ಆಸಕ್ತರಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಸೈಕಿಯಾಟ್ರಿಸ್ಟ್ ಹುದ್ದೆಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಯು ಭಾರತೀಯ ವೈದ್ಯಕೀಯ ಪರಿಷತ್ತಿನಿಂದ ಮಾನ್ಯತೆ ಪಡೆದ ಸಂಸ್ಥೆಯಿಂದ ಎಂ.ಬಿ.ಬಿ.ಎಸ್ ಪದವಿ, ಮನೋವೈದ್ಯ ಶಾಸ್ತ್ರದಲ್ಲಿ ಎಂ.ಡಿ, ಡಿ.ಎನ್.ಬಿ, ಡಿ.ಪಿ.ಎಂ ಪದವಿ ಪಡೆದವರಾಗಿರಬೇಕು.

ಆಸ್ಪತ್ರೆಯಲ್ಲಿ ಮನೋವೈದ್ಯರಾಗಿ ಕಾರ್ಯನಿರ್ವಹಿಸಿದ 2 ವರ್ಷಗಳ ಅನುಭವ ಹೊಂದಿರಬೇಕು. ಆಯ್ಕೆಯಾದ ಅಭ್ಯರ್ಥಿಗೆ ಮಾಸಿಕವಾಗಿ 1.10,000/-ರೂ.ಗಳ ವೇತನ ನೀಡಲಾಗುವುದು.

 Shivamogga: Interview For Various Posts In Health Department

ಸೈಕಿಯಾಟ್ರಿಸ್ಟ್ ನರ್ಸ್ ಮತ್ತು ಕಮ್ಯುನಿಟಿ ನರ್ಸ್ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಯು ಕರ್ನಾಟಕ ನರ್ಸಿಂಗ್ ಕೌನ್ಸಿಲ್ ಆಫ್ ಇಂಡಿಯಾ ಮಾನ್ಯತೆ ಪಡೆದ ಸಂಸ್ಥೆಯಿಂದ ಬಿ.ಎಸ್ಸಿ, ನರ್ಸಿಂಗ್‌ನಲ್ಲಿ ಪದವಿ ಅಥವಾ ತತ್ಸಮಾನ ಪದವಿ ಹೊಂದಿದವರಾಗಿರಬೇಕು.

ಈ ಪದವಿಯ ಅಭ್ಯರ್ಥಿಗಳು ಲಭ್ಯವಿಲ್ಲದಿದ್ದಲ್ಲಿ ಜನರಲ್ ನರ್ಸಿಂಗ್ ಮ್ತು ಮಿಡ್‌ವೈಫರಿ ಅನ್ನು ಪರಿಗಣಿಸಲಾಗುವುದು. ಈ ಹುದ್ದೆಗೆ ಮಾನಸಿಕ ಆರೋಗ್ಯ ಸಂಸ್ಥೆ ಅಥವಾ ಆಸ್ಪತ್ರೆಯಲ್ಲಿ ಕರ್ತವ್ಯ ನಿರ್ವಹಿಸಿದ 2 ವರ್ಷಗಳ ಅನುಭವ ಹೊಂದಿರಬೇಕು.

ತಜ್ಞವೈದ್ಯರು, ವೈದ್ಯರು 65 ವರ್ಷಕ್ಕಿಂತ ಕಡಿಮೆ ಇದ್ದು, ದೈಹಿಕವಾಗಿ ಎಲ್ಲಾ ಕರ್ತವ್ಯಗಳನ್ನು ನಿರ್ವಹಿಸಲು ಅರ್ಹರಿರಬೇಕು. ಅದಕ್ಕಾಗಿ ದೈಹಿಕ ಸದೃಢರಾಗಿರುವ ಬಗ್ಗೆ ಪ್ರಮಾಣಪತ್ರ ಒದಗಿಸಬೇಕು. ಕೆ.ಎಂ.ಸಿಯ ನೋಂದಣಿ ಹೊಂದಿರಬೇಕು.

ಅರ್ಹ ಅಭ್ಯರ್ಥಿಗಳು ತಮ್ಮ ಮೂಲ ದಾಖಲಾತಿಗಳೊಂದಿಗೆ ಸ್ವಯಂ ದೃಢೀಕೃತ ಝೆರಾಕ್ಸ್ ಪ್ರತಿಯೊಂದಿಗೆ ಪಾಸ್‌ಪೋರ್ಟ್ ಆಕಾರದ ಭಾವಚಿತ್ರ, ಸ್ವವಿವರದ ಅರ್ಜಿ, ಹಾಗೂ ಸೇವಾನುಭವ ದಾಖಲೆಗಳೊಂದಿಗೆ ನವೆಂಬರ್ 23 ರಂದು ಜಿಲ್ಲಾ ಆರೊಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳ ಕಚೇರಿಯಲ್ಲಿ ಬೆಳಿಗ್ಗೆ 10.30 ರಿಂದ ನಡೆಯಲಿರುವ ಸಂದರ್ಶನದಲ್ಲಿ ಭಾಗವಹಿಸಬಹುದಾಗಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+