Good News: ರಾಜ್ಯದಲ್ಲಿ ಖಾಲಿ ಇರುವ 2,84,881 ಹುದ್ದೆಗಳ ಭರ್ತಿಗೆ ಸಿದ್ದರಾಮಯ್ಯ ಗ್ರೀನ್ ಸಿಗ್ನಲ್!
ಬೆಳಗಾವಿ, ಡಿಸೆಂಬರ್ 12: ಆರ್ಥಿಕ ಇಲಾಖೆಯ ಅನುಮತಿ ಪಡೆದು ಖಾಲಿ ಹುದ್ದೆಗಳನ್ನು ಹಂತ ಹಂತವಾಗಿ ಭರ್ತಿ ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಇಂದು ವಿಧಾನ ಪರಿಷತ್ ಸದಸ್ಯ ನಿರಾಣಿ ಹಣಮಂತ ರುದ್ರಪ್ಪ ರವರ ಚುಕ್ಕೆ ಗುರುತಿನ ಪ್ರಶ್ನೆಗೆ ಉತ್ತರಿಸಿದರು. ರಾಜ್ಯದಲ್ಲಿ ನಿಗಮ ಮಂಡಳಿಗಳು ಸೇರಿದಂತೆ ಸುಮಾರು 2,84,881 ಹುದ್ದೆಗಳು ಖಾಲಿಯಿದ್ದು,ಇವುಗಳನ್ನು ಶೀಘ್ರ ಗತಿಯಲ್ಲಿ ತುಂಬಲು ತೆಗೆದುಕೊಂಡಿರುವ ಕ್ರಮದ ಬಗ್ಗೆ ಮಾಹಿತಿ ಕೋರಿದ್ದರು.
ಸರ್ಕಾರದಲ್ಲಿ ವಿವಿಧ ಇಲಾಖೆಗಳೂ ಸೇರಿದಂತೆ ರಾಜ್ಯದಲ್ಲಿ ಒಟ್ಟು 2,84,881 ಹುದ್ದೆಗಳು ಖಾಲಿಯಿದೆ. ಅದರಲ್ಲಿ ವಿವಿಧ ನಿಗಮ ಮಂಡಳಿಗಳಲ್ಲಿ101420 ಹುದ್ದೆಗಳು, ವಿಶ್ವವಿದ್ಯಾಲಯಗಳ್ಲಲಿ 14677 ಹುದ್ದೆಗಳು ಒಟ್ಟು 188037 ಹುದ್ದೆಗಳು ಖಾಲಿಯಿದೆ. ಈಗಾಗಲೇ 24,300 ಹುದ್ದೆಗಳ ನೇಮಕಾತಿ ಪ್ರಕ್ರಿಯೆಗೆ ಆರ್ಥಿಕ ಇಲಾಖೆಯಿಂದ ಅನುಮತಿ ದೊರೆತಿದೆ. ಹೈದ್ರಾಬಾದ್ ಕರ್ನಾಟಕಕ್ಕೆ 371 ಜೆ ಅಡಿ 32,132 ಹುದ್ದೆಗಳು ಭರ್ತಿಯಾಗಬೇಕಿದೆ. ಒಟ್ಟು 56432 ಹುದ್ದೆಗಳ ಭರ್ತಿಗೆ ಈಗಾಗಲೇ ಕ್ರಮ ಕೈಗೊಳ್ಳಲಾಗಿದೆ. ಒಳಮೀಸಲಾತಿಯ ಬಿಕ್ಕಟ್ಟಿನಿಂದಾಗಿ ನೇಮಕಾತಿ ಪ್ರಕ್ರಿಯೆಯಲ್ಲಿ ವಿಳಂಬವುಂಟಾಗಿತ್ತು. ಈಗ ಈ ಸಮಸ್ಯೆಗೆ ಬಗೆಹರಿದಿದ್ದು, ಆರ್ಥಿಕ ಇಲಾಖೆಯ ಅನುಮತಿ ಪಡೆದು ಹಂತ ಹಂತವಾಗಿ ಖಾಲಿ ಹುದ್ದೆಗಳನ್ನು ಭರ್ತಿ ಮಾಡಲಾಗುವುದು ಎಂದರು.

ಆರ್ಥಿಕ ಇಲಾಖೆಯಿಂದ ಒಪ್ಪಿಗೆ ದೊರೆತ 24,300 ಹುದ್ದೆಗಳು ಮತ್ತು 371(ಜೆ) ಮೀಸಲು ಸೌಕರ್ಯ ಇರುವ ಕಲ್ಯಾಣ ಕರ್ನಾಟಕ ಭಾಗದಲ್ಲಿ ಭರ್ತಿಯಾಗಬೇಕಾದ 32,132 ಹುದ್ದೆಗಳು ಸೇರಿ ಒಟ್ಟು 56,132 ಹುದ್ದೆಗಳ ಭರ್ತಿ ಪ್ರಕ್ರಿಯೆ ಈಗ ರಾಜ್ಯದಲ್ಲಿ ನಡೆಯುತ್ತಿದೆ ಎಂದು ಅವರು ತಿಳಿಸಿದರು.
ಖಾಲಿ ಇರುವ ಹುದ್ದೆಗಳ ಭರ್ತಿಗೆ ಆಗ್ರಹಿಸಿ ಧಾರವಾಡ ಸೇರಿದಂತೆ ವಿವಿಧೆಡೆ ಪ್ರತಿಭಟನೆಗಳು ನಡೆಯುತ್ತಿದ್ದು, ಖಾಲಿ ಹುದ್ದೆಗಳ ಭರ್ತಿಗೆ ಮೊದಲ ಆದ್ಯತೆ ನೀಡಿ ವಿದ್ಯಾರ್ಥಿ ಯುವಜನರಿಗೆ ನ್ಯಾಯ ಒದಗಿಸಬೇಕು ಎಂದು ಪರಿಷತ್ತಿನ ವಿರೋಧ ಪಕ್ಷದ ನಾಯಕರಾದ ಛಲವಾದಿ ನಾರಾಯಣಸ್ವಾಮಿ ಅವರು ಮನವಿ ಮಾಡಿದರು.
ಕ್ರೀಡಾಪಟುಗಳಿಗೆ ಪ್ರೋತ್ಸಾಹ ನೀಡುವ ದಿಸೆಯಲ್ಲಿ ಅರಣ್ಯ ಇಲಾಖೆಯಲ್ಲಿ ಶೇ. 3 ಪೊಲೀಸ್ ಇಲಾಖೆಯಲ್ಲಿ ಶೇ.3 ಹಾಗೂ ವಿವಿಧ ಇಲಾಖೆಗಳಲ್ಲಿ ಶೇ. 2 ರಷ್ಟು ಮೀಸಲಾತಿಯನ್ನು ಅನುಷ್ಠಾನಗೊಳಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ವಿಧಾನ ಪರಿಷತ್ ಸದಸ್ಯ ಐವಾನ್ ಡಿಸೋಜಾ ರವರ ಚುಕ್ಕೆ ಗುರುತಿನ ಪ್ರಶ್ನೆಗೆ ಉತ್ತರಿಸಿದರು. ರಾಜ್ಯದಲ್ಲಿ ಕ್ರೀಡಾಪಟುಗಳಿಗೆ ಪ್ರೋತ್ಸಾಹ, ಕ್ರೀಡಾ ಸಾಧಕರಿಗೆ ಸರ್ಕಾರಿ ಉದ್ಯೋಗದಲ್ಲಿ ಮೀಸಲಾತಿ, ಕ್ರೀಡಾ ಮೂಲಸೌಕರ್ಯ ವೃದ್ಧಿ ಹಾಗೂ ಕಬ್ಬಡಿ ಕ್ರೀಡೆಗೆ ಪ್ರೋತ್ಸಾಹ ನೀಡುವ ಬಗ್ಗೆ ಮಾಹಿತಿ ಕೋರಿದ್ದರು.
ರಾಜ್ಯ ಸರ್ಕಾರ ಒಲಂಪಿಕ್ಸ್, ಪಾರಾಒಲಂಪಿಕ್ಸ್, ಕಾಮನ್ವೆಲ್ತ್, ಏಷಿಯನ್ ಗೇಮ್ಸ್ ಕ್ರೀಡಾಕೂಟಗಳಲ್ಲಿ ಪದಕವಿಜೇತರಾದ 13 ಕ್ರೀಡಾಪಟುಗಳಿಗೆ ನೇಮಕಾತಿ ಮಾಡಿಕೊಳ್ಳಲಾಗಿದೆ. ಪೊಲೀಸ್ ಇಲಾಖೆಯಲ್ಲಿ 70 ಕಾನ್ಸ್ಟೇಬಲ್ ಗಳಿಗೆ ನೇರ ನೇಮಕಾತಿ ಹಾಗೂ 14 ಪಿಎಸ್ ಐ ಗಳನ್ನು ನೇಮಕಾತಿ ಮಾಡಿಕೊಳ್ಳಲಾಗಿದೆ. ಅಲ್ಲದೇ ಅರಣ್ಯ ಇಲಾಖೆಯಲ್ಲಿ ಶೇ. 3 ಪೊಲೀಸ್ ಇಲಾಖೆಯಲ್ಲಿ ಶೇ.3 ಹಾಗೂ ವಿವಿಧ ಇಲಾಖೆಗಳಲ್ಲಿ ಶೇ. 2 ರಷ್ಟು ಮೀಸಲಾತಿ ನೀಡಿ ಕ್ರೀಡಾಪಟುಗಳಿಗೆ ಪ್ರೋತ್ಸಾಹ ನೀಡಲಾಗುವುದು. ಕಬ್ಬಡಿ ಕ್ರೀಡೆಗೆ ಹೆಚ್ಚಿನ ಪ್ರೋತ್ಸಾಹ ನೀಡುವ ಬಗ್ಗೆ ಪರಿಶೀಲನೆ ನಡೆಸಲಾಗುವುದು ಎಂದು ತಿಳಿಸಿದರು.
-
Venkatesh Daggubati: ಬೆಂಗಳೂರಿನ ಐಕಾನಿಕ್ ವಿದ್ಯಾರ್ಥಿ ಭವನದಲ್ಲಿ ದೋಸೆ ಸವಿದ ಟಾಲಿವುಡ್ ನಟ ವೆಂಕಟೇಶ್ ದಗ್ಗುಬಾಟಿ -
Rishab Shetty: ಪತ್ನಿ ಪ್ರಗತಿ ಶೆಟ್ಟಿ ಹೊರತುಪಡಿಸಿ ಎಲ್ಲರನ್ನೂ ಅನ್ಫಾಲೋ ಮಾಡಿದ ನಟ ರಿಷಬ್ ಶೆಟ್ಟಿ -
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ -
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
ಬೆಂಗಳೂರು ಬಿಸಿನೆಸ್ ಕಾರಿಡಾರ್ ಯೋಜನೆಗೆ ಚಾಲನೆ: ಕಾಮಗಾರಿಗೆ 3,348 ಕೋಟಿ ರೂ ಟೆಂಡರ್ ಆಹ್ವಾನ -
Kerosene: ಎಲ್ಪಿಜಿ ಸಮಸ್ಯೆಗೆ ಕೇಂದ್ರದಿಂದ ಹೊಸ ಪರಿಹಾರ: ಮತ್ತೆ ಸಿಗಲಿದೆ ಸೀಮೆಎಣ್ಣೆ, ಪೆಟ್ರೋಲ್ ಬಂಕ್ಗಳಲ್ಲಿ ವಿತರಣೆ -
Dolly Dhananjay: ಆ ಚಿತ್ರಕಥೆ.. 6 ತಿಂಗಳು ನನ್ನ ಟೇಬಲ್ ಮೇಲೆ ಬಿದ್ದಿತ್ತು: ನಟ ಡಾಲಿ ಧನಂಜಯ್ -
SSLC Maths Exam: ಎಸ್ಎಸ್ಎಲ್ಸಿ ಗಣಿತ ಪರೀಕ್ಷೆಯಲ್ಲಿ ಪಠ್ಯದ ಹೊರತಾದ ಪ್ರಶ್ನೆಗಳ ಆರೋಪ, ಕೃಪಾಂಕಕ್ಕಾಗಿ ಹೆಚ್ಚಿದ ಒತ್ತಾಯ -
ಪರಮಾತ್ಮ ಹೇಳಿದ್ರೂ ಹಿಂದೆ ಸರಿಯಲ್ಲ ಎಂದಿದ್ದ ಕಾಂಗ್ರೆಸ್ನ ಸಾದಿಕ್ ಪೈಲ್ವಾನ್ ನಾಮಪತ್ರ ಹಿಂಪಡೆಯಲು ಇದೆ ಹಲವು ಕಾರಣ -
Tamil Nadu Election: ತನ್ನ ಡ್ರೈವರ್ ಮಗನಿಗೆ MLA ಟಿಕೆಟ್ ಘೋಷಿಸಿದ ನಟ ದಳಪತಿ ವಿಜಯ್, ಭಾವುಕ ಕ್ಷಣದ ವಿಡಿಯೋ ವೈರಲ್












Click it and Unblock the Notifications