SLNCB Recruitment 2023: ಬೆಂಗಳೂರಿನ ಈ ಬ್ಯಾಂಕ್‌ನಲ್ಲಿ ಭರ್ಜರಿ ಉದ್ಯೋಗ ಅವಕಾಶ
ಬೆಂಗಳೂರು, ಆಗಸ್ಟ್ 24: ಬೆಂಗಳೂರಿನ ಶ್ರೀ ಲಕ್ಷ್ಮಿ ನಾರಾಯಣ ಕೋ-ಆಪರೇಟಿವ್ ಬ್ಯಾಂಕ್ ಲಿಮಿಟೆಡ್ (SLNCB Jobs) ತನ್ನಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿ ಪ್ರಕ್ರಿಯೆ ಆರಂಭಿಸಿದೆ. ಈ ಸಂಬಂಧ ಅರ್ಹರಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಬೆಂಗಳೂರಿನಲ್ಲೇ ಕೆಲಸ ಹುಡುಕುವ ಆಸಕ್ತರು ಈ ಕೂಡಲೇ ಅರ್ಜಿ ಸಲ್ಲಿಸಬಹುದು.
ಬೆಂಗಳೂರಿನ ಶ್ರೀ ಲಕ್ಷ್ಮಿ ನಾರಾಯಣ ಕೋ-ಆಪರೇಟಿವ್ ಬ್ಯಾಂಕ್ ನಲ್ಲಿ ಒಟ್ಟು 3 ಅಟೆಂಡರ್, ಕಂಪ್ಯೂಟರ್ ಪ್ರೋಗ್ರಾಮರ್ ಹುದ್ದೆಗಳು ಖಾಲಿ ಇವೆ. ಆಸಕ್ತ ಅಭ್ಯರ್ಥಿಗಳು ಅಧಿಸೂಚನೆ ಪೂರ್ತಿ ಓದಿಕೊಂಡು ಇದೇ ಆಗಸ್ಟ್ 31ರೊಳಗೆ ಸೂಕ್ತ ದಾಖಲೆ ಸಹಿತ ಅರ್ಜಿ ಸಲ್ಲಿಸಬೇಕು. ಆಫ್ಲೈನ್/ ಪೋಸ್ಟ್ ಮೂಲಕ ಅರ್ಜಿ ಸಲ್ಲಿಕೆಗೆ ಅಕವಾಶ ನೀಡಲಾಗಿದೆ.

ನೇಮಕಾತಿ ಪೂರ್ಣ ಮಾಹಿತಿ
ಸಂಸ್ಥೆ - ಶ್ರೀ ಲಕ್ಷ್ಮಿ ನಾರಾಯಣ ಕೋ-ಆಪರೇಟಿವ್ ಬ್ಯಾಂಕ್ ಲಿ.
ಹುದ್ದೆ ಹೆಸರು- ಅಟೆಂಡರ್, ಕಂಪ್ಯೂಟರ್ ಪ್ರೋಗ್ರಾಮರ್
ಒಟ್ಟು ಖಾಲಿ ಹುದ್ದೆ- 03
ಕಂಪ್ಯೂಟರ್ ಪ್ರೋಗ್ರಾಮರ್ -1
ಅಟೆಂಡರ್- 2
ವೇತನ - ನಿಗದಿ ಮಾಡಿಲ್ಲ
ಅರ್ಜಿ ಸಲ್ಲಿಕೆ ಕೊನೆ ದಿನ- ಆಗಸ್ಟ್ 31.
ಶೈಕ್ಷಣಿಕ ಅರ್ಹತೆ
ಶ್ರೀ ಲಕ್ಷ್ಮಿ ನಾರಾಯಣ ಕೋ-ಆಪರೇಟಿವ್ ಬ್ಯಾಂಕ್ ನಿಯಮಿತ ತಿಳಿಸಿರುವಂತೆ, ಕಂಪ್ಯೂಟರ್ ಪ್ರೋಗ್ರಾಮರ್ ಹುದ್ದೆಗೆ ಪದವಿ, ಬಿಸಿಎ, ಬಿ.ಎಸ್ಸಿ, ಬಿ.ಕಾಂ ಪದವಿ ಪಡೆದವರು ಮತ್ತು ಅಟೆಂಡರ್ ಹುದ್ದೆಗೆ ಹತ್ತನೇ ತರಗತಿ ಪಾಸಾದವರು ಅರ್ಜಿ ಸಲ್ಲಿಸಬಹುದಾಗಿದೆ.

ವಯೋಮಿತಿ ಮತ್ತು ಸಡಿಲಿಕೆ ಮಾಹಿತಿ
ಅಭ್ಯರ್ಥಿಗಳಿಗೆ ಇದೇ ವರ್ಷ 2023ರ ಆಗಸ್ಟ್ 31ಕ್ಕೆ ಕನಿಷ್ಠ 18 ವರ್ಷ ಮತ್ತು ಗರಿಷ್ಠ 35 ವರ್ಷ ಮೀರಿರಬಾರದು. ಇನ್ನೂ ಒಬಿಸಿ ಅಭ್ಯರ್ಥಿಗಳಿಗೆ 3 ವರ್ಷ ಹಾಗೂ ಪರಿಶಿಷ್ಟ ಜಾತಿ ಮತ್ತು ಪಂಗಡದ ಅಭ್ಯರ್ಥಿಗಳಗೆ 5 ವರ್ಷ ವಯೋಮಿತಿಯಲ್ಲಿ ಸಡಿಲಿಕೆ ನೀಡಲಾಗಿದೆ ಎಂದು ಶ್ರೀ ಲಕ್ಷ್ಮಿ ನಾರಾಯಣ ಕೋ-ಆಪರೇಟಿವ್ ಬ್ಯಾಂಕ್ ನೇಮಕಾತಿ ಅಧಿಸೂಚನೆ ತಿಳಿಸಿದೆ.
ಆಯ್ಕೆ ಪ್ರಕ್ರಿಯೆ- ಅರ್ಜಿ ಶುಲ್ಕದ ಮಾಹಿತಿ
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ಡೈವಿಂಗ್ ಲೈಸೆನ್ಸ್ ಪರಿಶೀಲನೆ ಬಳಿಕ ಲಿಖಿತ ಪರೀಕ್ಷೆ ನಡೆಸ ನೇರ ಸಂದರ್ಶನ ಮೂಲಕ ಆಯ್ಕೆ ಮಾಡಿಕೊಳ್ಳಲಾಗುವುದು. ಅರ್ಜಿ ಸಲ್ಲಿಸುವ ಎಲ್ಲ ಅಭ್ಯರ್ಥಿಗಳು 1000 ರೂ. ಅರ್ಜಿ ಶುಲ್ಕವನ್ನು ಡಿಮ್ಯಾಂಡ್ ಡ್ರಾಫ್ಟ್ ಮೂಲಕ ಪಾವತಿಸಬೇಕು. ಬೆಂಗಳೂರಿನಲ್ಲಿಯೇ ಪೋಸ್ಟಿಂಗ್ ನೀಡಲಾಗುವುದು.
ಅಭ್ಯರ್ಥಿಗಳು ಭರ್ತಿ ಮಾಡಿದ ಅರ್ಜಿಯನ್ನು ಸೂಕ್ತ ದಾಖಲೆ ಸಮೇತ ಶ್ರೀ ಲಕ್ಷ್ಮೀನಾರಾಯಣ ಸಹಕಾರಿ ಬ್ಯಾಂಕ್ ಪ್ರಧಾನ ಕಛೇರಿ, ನಂ. 1627/2, ಪಾರ್ಕ್ ರಸ್ತೆ, ರಾಮಮೋಹನಪುರಂ ಬೆಂಗಳೂರು-21 ಇಲ್ಲಿಗೆ ನಿಗದಿತ ದಿನಾಂಕ ಆಗಸ್ಟ್ 31ರೊಳಗೆ ಕಳುಹಿಸಬೇಕು ಎಂದು ಅಧಿಸೂಚನೆ ತಿಳಿಸಿದೆ.












Click it and Unblock the Notifications