ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಕ್ರೀಡಾಪಟುಗಳಿಗೆ ಎಲ್ಲ ಇಲಾಖೆಗಳಲ್ಲೂ ಶೇ.2 ಉದ್ಯೋಗ ಮೀಸಲಾತಿ: ಸಿಎಂ ಬೊಮ್ಮಾಯಿ

|
Google Oneindia Kannada News

ಬೆಂಗಳೂರು, ಆಗಸ್ಟ್ 16: ರಾಜ್ಯದಲ್ಲಿ ಸರ್ಕಾರ ಕ್ರೀಡಾಪಟುಗಳಿಗೆ ಪೋಲೀಸ್ ಮತ್ತು ಅರಣ್ಯ ಇಲಾಖೆಗಳಲ್ಲಿ ಮೀಸಲಿಟ್ಟ ಶೇ.2 ರಷ್ಟು ಮೀಸಲಾತಿಯನ್ನು ಇತರೆ ಎಲ್ಲ ಇಲಾಖೆಗಳಿಗೂ ವಿಸ್ತರಣೆ ಮಾಡಿ ಶೀಘ್ರವೇ ಕಡತ ವಿಲೇವಾರಿಗೊಳಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.

ಬೆಂಗಳೂರಿನಲ್ಲಿ ಮಂಗಳವಾರ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಆಯೋಜಿಸಿದ್ದ ಸಮಾರಂಭದಲ್ಲಿ ಇತ್ತೀಚೆಗೆ ಬರ್ನಿಂಗ್ ಹ್ಯಾಮ್‌ನಲ್ಲಿ ನಡೆದ ಕಾಮನ್‌ವೆಲ್ತ ಕ್ರೀಡಾಕೂಟದಲ್ಲಿ ಪದಕ ವಿಜೇತ ಕರ್ನಾಟಕದ ಕ್ರೀಡಾಪಟುಗಳು ಹಾಗೂ ಅಮೃತ ಕ್ರೀಡಾ ದತ್ತು ಯೋಜನೆ ಅಡಿ ಆಯ್ಕೆಯಾಗಿರುವ 75 ಕ್ರೀಡಾಪಟುಗಳನ್ನು ಸನ್ಮಾನಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಅವರು, ಕ್ರೀಡಾಪಟುಗಳ ಜೀವನಕ್ಕೆ ಭದ್ರತೆ ಬೇಕು ಎನ್ನುವುದನ್ನು ಬಿಜೆಪಿ ಸರ್ಕಾರ ಮನಗಂಡಿದೆ. ಕ್ರೀಡಾಪಟುಗಳು ಕ್ರೀಡೆಯನ್ನು ನನಗೋಸ್ಕರ ಹಾಗೂ ದೇಶಕ್ಕಾಗಿ ಪದಕ ಗೆಲ್ಲಲು ಆಡುತ್ತಿದ್ದೇನೆ ಎಂದು ಮನದಲ್ಲಿ ಭಾವಿಸಿ ಕ್ರೀಡೆಯಲ್ಲಿ ಪಾಲ್ಗೊಳ್ಳಿ. ಉಳಿದದ್ದನ್ನು ಸರ್ಕಾರಕ್ಕೆ ಬಿಟ್ಟು ಬಿಡಿ. ನಿಮ್ಮ ಸಾಧನೆಗಳಿಗೆ ತಕ್ಕಂತೆ ಜೀವನ ರೂಪಿಸಲು ಸರ್ಕಾರ ಉತ್ಸಾಹದಿಂದ ಕೆಲಸ ಮಾಡುತ್ತಿದೆ ಎಂದು ತಿಳಿಸಿದರು.

ಬ್ಯಾಸ್ಕೆಟ್ ಬಾಲ್ ರಾಜ್ಯದ ಕ್ರೀಡೆ ಶ್ರೀಘ್ರವೇ ಗ್ರಾಮೀಣ ಕ್ರೀಡಾಕೂಟ ಆರಂಭ

ಕ್ರೀಡಾ ದತ್ತು ಯೋಜನೆ ಜಾರಿಯಲ್ಲಿರುವ ಮೊಟ್ಟ ಮೊದಲ ರಾಜ್ಯ ಕರ್ನಾಟಕ. ರಾಜ್ಯದಲ್ಲಿನ ಅನೇಕ ಕ್ರೀಡಾಂಗಣಗಳ ಅಭಿವೃದ್ಧಿ ಮಾಡಲಾಗುತ್ತಿದೆ. ಬ್ಯಾಸ್ಕೆಟ್ ಬಾಲ್ ರಾಜ್ಯದ ಕ್ರೀಡೆ ಎಂದು ಅಳವಡಿಸಿಕೊಳ್ಳುತ್ತಿದ್ದೇವೆ. ಪ್ರತಿಭೆಗಳನ್ನು ಗುರುತಿಸುವ ಸಲುವಾಗಿ ಎರಡು ತಿಂಗಳೊಳಗೆ ಗ್ರಾಮೀಣ ಕ್ರೀಡಾಕೂಟವನ್ನು ಪ್ರಾರಂಭಿಸಲಾಗುತ್ತದೆ. ನಮ್ಮ ಸರ್ಕಾರ ಕ್ರೀಡೆ ಹಾಗೂ ಕ್ರೀಡಾಪಟುಗಳ ಕಲ್ಯಾಣಕ್ಕೆ ಆದ್ಯತೆಯನ್ನು ನೀಡಿದೆ. ಯಾವುದನ್ನೂ ಚಿಂತೆ ಮಾಡದೆ ಧೈರ್ಯವಾಗಿ ಆಡಿ ಬನ್ನಿ. ಸರ್ಕಾರ ನಿಮ್ಮ ಜೊತೆ ಇದೆ ಎಲ್ಲಾ ದೃಷಿಯಿಂದ ನಿಮ್ಮ ಸುರಕ್ಷತೆಯನ್ನು ಕೈಗೊಳ್ಳಲಾಗುವುದು ಎಂದು ಬೊಮ್ಮಾಯಿ ಭರವಸೆ ನೀಡಿದರು.

ಬ್ಯಾಸ್ಕೆಟ್ ಬಾಲ್ ರಾಜ್ಯದ ಕ್ರೀಡೆ ಶ್ರೀಘ್ರವೇ ಗ್ರಾಮೀಣ ಕ್ರೀಡಾಕೂಟ ಆರಂಭ

ಬ್ಯಾಸ್ಕೆಟ್ ಬಾಲ್ ರಾಜ್ಯದ ಕ್ರೀಡೆ ಶ್ರೀಘ್ರವೇ ಗ್ರಾಮೀಣ ಕ್ರೀಡಾಕೂಟ ಆರಂಭ

ಕ್ರೀಡಾ ದತ್ತು ಯೋಜನೆ ಜಾರಿಯಲ್ಲಿರುವ ಮೊಟ್ಟ ಮೊದಲ ರಾಜ್ಯ ಕರ್ನಾಟಕ. ರಾಜ್ಯದಲ್ಲಿನ ಅನೇಕ ಕ್ರೀಡಾಂಗಣಗಳ ಅಭಿವೃದ್ಧಿ ಮಾಡಲಾಗುತ್ತಿದೆ. ಬ್ಯಾಸ್ಕೆಟ್ ಬಾಲ್ ರಾಜ್ಯದ ಕ್ರೀಡೆ ಎಂದು ಅಳವಡಿಸಿಕೊಳ್ಳುತ್ತಿದ್ದೇವೆ. ಪ್ರತಿಭೆಗಳನ್ನು ಗುರುತಿಸುವ ಸಲುವಾಗಿ ಎರಡು ತಿಂಗಳೊಳಗೆ ಗ್ರಾಮೀಣ ಕ್ರೀಡಾಕೂಟವನ್ನು ಪ್ರಾರಂಭಿಸಲಾಗುತ್ತದೆ. ನಮ್ಮ ಸರ್ಕಾರ ಕ್ರೀಡೆ ಹಾಗೂ ಕ್ರೀಡಾಪಟುಗಳ ಕಲ್ಯಾಣಕ್ಕೆ ಆದ್ಯತೆಯನ್ನು ನೀಡಿದೆ. ಯಾವುದನ್ನೂ ಚಿಂತೆ ಮಾಡದೆ ಧೈರ್ಯವಾಗಿ ಆಡಿ ಬನ್ನಿ. ಸರ್ಕಾರ ನಿಮ್ಮ ಜೊತೆ ಇದೆ ಎಲ್ಲಾ ದೃಷಿಯಿಂದ ನಿಮ್ಮ ಸುರಕ್ಷತೆಯನ್ನು ಕೈಗೊಳ್ಳಲಾಗುವುದು ಎಂದು ಬೊಮ್ಮಾಯಿ ಭರವಸೆ ನೀಡಿದರು.

ಶಿಸ್ತಿನಿಂದ ವೈಚಾರಿಕ ಚಾರಿತ್ರ್ಯ ಬೆಳೆಯುತ್ತದೆ

ಶಿಸ್ತಿನಿಂದ ವೈಚಾರಿಕ ಚಾರಿತ್ರ್ಯ ಬೆಳೆಯುತ್ತದೆ

ಕ್ರೀಡಾ ಮನೋಭಾವ ಬಹಳ ಮುಖ್ಯ. ಕ್ರೀಡಾ ಮನೋಭಾವದಿಂದ ಶಿಸ್ತು ಸಂಯಮ ಹಾಗೂ ಹೆಚ್ಚು ಸಾಧಿಸುವ ಶಕ್ತಿ ಬರುತ್ತದೆ. ಶಿಸ್ತಿನಿಂದ ವ್ಯಕ್ತಿಯ ಚಾರಿತ್ರ್ಯ ಬೆಳೆಯುತ್ತದೆ. ಸರಿಯಾದುದ್ದನ್ನು ಯೋಚಿಸುವ ಶಕ್ತಿ ನೀಡುತ್ತದೆ. ಪ್ರಾಮಾಣಿಕ ಹಾಗೂ ಸಮರ್ಪಣಾ ಭಾವದ ಕ್ರೀಡಾಪಟುವಿಗೆ ಉತ್ತಮ ಚಾರಿತ್ರ್ಯವಿರುತ್ತದೆ. ಅಂತಹ ವ್ಯಕ್ತಿಗಳು ಜೀವನದಲ್ಲಿ ಸಾಧನೆಗಳ ಮೆಟ್ಟಿಲೇರುತ್ತಾರೆ. ನೀವು ಗೆಲ್ಲಬೇಕೆಂದು ಆಡಬೇಕು. ಸೋಲಬಾರದು ಎಂದು ಆಡಬಾರದು. ಗೆಲುವನ್ನೇ ಗುರಿಯಾಗಿಸಿಕೊಂಡು ಕ್ರೀಡೆಯಲ್ಲಿ ಪಾಲ್ಗೊಂಡರೆ ಯಶಸ್ಸು ನಿಮ್ಮದಾಗುತ್ತದೆ ಎಂದು ಸಲಹೆ ನೀಡಿದರು.

ನಿಮ್ಮ ಸಾಧನೆ ಇತರರಿಗೆ ಸ್ಪೂರ್ತಿಯಾಗಲಿ

ನಿಮ್ಮ ಸಾಧನೆ ಇತರರಿಗೆ ಸ್ಪೂರ್ತಿಯಾಗಲಿ

ರಾಜ್ಯದಲ್ಲಿ ಬೇರೆ ಬೇರೆ ಕ್ಷೇತ್ರಗಳಲ್ಲಿ ಹಲವಾರು ಕ್ರೀಡಾಪಟುಗಳಿದ್ದಾರೆ, ಒಲಂಪಿಯನ್ಸ ಇದ್ದಾರೆ, ಏಶಿಯನ್ ಗೇಮ್ಸ್, ಕಾಮನ್‌ವೆಲ್ತ್ ಗೇಮ್ಸ ನಲ್ಲಿ ಆಡಿದವರು, ಈಜುಗಾರರು, ಬ್ಯಾಸ್ಕೆಟ್ ಬಾಲ್, ಹಾಕಿ ಮುಂತಾದ ಎಲ್ಲಾ ವರ್ಗದ ಕ್ರೀಡಾಪಟುಗಳಿದ್ದಾರೆ. ಅವರೆಲ್ಲರ ಸಾಧನೆ ನಮಗೆಲ್ಲರಿಗೂ ಸ್ಪೂರ್ತಿ. ನಿಮ್ಮ ಸಾಧನೆಗೂ ಸ್ಪೂರ್ತಿ. ಪದಕ ಪಡೆದಿರುವವರು ಇತರರಿಗೆ ಪದಕ ಗೆಲ್ಲಲು ಸ್ಪೂರ್ತಿಯಾಗಬೇಕು. ಯಾರು ಭಾಗವಹಿಸಿದ್ದಾರೆ ಅವರು ತರಬೇತಿ ಪಡೆಯುತ್ತಿರುವವರಿಗೆ ಸ್ಪೂರ್ತಿಯಾಗಬೇಕೆಂಬ ಉದ್ದೇಶ ಕ್ರೀಡಾಪಟುಗಳನ್ನು ಪ್ರೋತ್ಸಾಹಿಸಲಾಗುತ್ತಿದೆ ಎಂದರು.

ರಾಜ್ಯದ ಕ್ರೀಡಾಪಟುಗಳ ಮೇಲೆ ಪೂರ್ಣ ವಿಶ್ವಾಸ

ರಾಜ್ಯದ ಕ್ರೀಡಾಪಟುಗಳ ಮೇಲೆ ಪೂರ್ಣ ವಿಶ್ವಾಸ

ಕರ್ನಾಟಕ ರಾಜ್ಯದ ಕ್ರೀಡಾಪಟುಗಳ ಮೇಲೆ ದೃಢ ವಿಶ್ವಾಸ ಹಾಗೂ ಅವರ ಸಾಮರ್ಥ್ಯದ ಬಗ್ಗೆ ಸಂಪೂರ್ಣ ವಿಶ್ವಾಸವಿದೆ. ಅದಕ್ಕೆ ಸ್ವಲ್ಪ ಪ್ರೋತ್ಸಾಹ ನೀಡಿದರೆ ಫಲಿತಾಂಶ ಬರುವ ವಿಶ್ವಾಸದೊಂದಿಗೆ 75 ಜನರ ಕ್ರೀಡಾ ದತ್ತು ಯೋಜನೆಯನ್ನು ರೂಪಿಸಲಾಯಿತು. ಸರ್ಕಾರ ಏನು ಮಾಡಬೇಕೆಂದು ಹೇಳುವ ಮುನ್ನ ನೀವೇನು ಮಾಡಬೇಕೆಂದು ಮೊದಲು ತೀರ್ಮಾನ ಮಾಡಿ. ಸರ್ಕಾರ ನಮಗಿಷ್ಟು ಸೌಲಭ್ಯಗಳನ್ನು ಕೊಟ್ಟಿದೆ. ಇದಕ್ಕೂ ಮುನ್ನ ಯಾವುದೇ ಯೋಜನೆಯೂ ಇರಲಿಲ್ಲ ಎಂಬುದನ್ನು ಅರಿತು ಮುನ್ನಡೆಯಿತು. ನೀವು ಸಾಧನೆಯ ಶಿಖರ ಏರಬೇಕೆಂದು ಸರ್ಕಾರ ನಿಮಮ್ ಪ್ರತಿಭೆಯನ್ನು ಗುರುತಿಸಿದೆ ಎಂದು ವಿವರಿಸಿದರು.

ನೌಕರಿಗಾಗಿ ಅಲ್ಲದೇ ದೇಶಕ್ಕಾಗಿ ಆಡಿ ಪದಕ ಗೆಲ್ಲಬೇಕು. ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಮೊದಲು ಖೇಲೋ ಇಂಡಿಯಾ- ಆಟವಾಡುವುದನ್ನು ಕಲಿಯಿರಿ ಎಂದರು, ನಂತರ ಜೀತೋ ಇಂಡಿಯಾ ಎಂದಿದ್ದಾರೆ. ಇವುಗಳನ್ನು ನೆನಪಿನಲ್ಲಿಟ್ಟುಕೊಳ್ಳಿ ಎಂದು ಬೊಮ್ಮಾಯಿ ಸಲಹೆ ನೀಡಿದರು.

ಕಾರ್ಯಕ್ರಮದಲ್ಲಿ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಚಿವ ಡಾ. ನಾರಾಯಣಗೌಡ, ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಡಾ. ಶಾಲಿನಿ ರಜನೀಶ, ಕರ್ನಾಟಕ ಒಲಂಪಿಕ್ ಅಸೋಸಿಯೇಶನ್ ಅಧ್ಯಕ್ಷ ಗೋವಿಂದ ರಾಜ ಮತ್ತಿತರರು ಪಾಲ್ಗೊಂಡಿದ್ದರು.

Recommended Video

ಅಟಲ್ ಅಂದ್ರೆ ಅಮೋಘ, ಅನನ್ಯ, ಅನರ್ಘ್ಯ ರತ್ನ | Oneindia Kannada

English summary
soon 2% Job reservation for Karnataka athletes in all government departments, says CM Basavaraj Bommai.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X