10ನೇ ತರಗತಿ, ಐಟಿಐ ಪಾಸಾದವರಿಗೆ ರೈಲ್ವೆಯಲ್ಲಿ ಉದ್ಯೋಗ
ನವದೆಹಲಿ, ನವೆಂಬರ್ 14: ಭಾರತೀಯ ರೈಲ್ವೆಯ ಉತ್ತರ ಕೇಂದ್ರ ವಲಯದ 2019ನೇ ಸಾಲಿನ ನೇಮಕಾತಿಯನ್ನು ಮುಂದುವರೆಸಿದೆ. ತನ್ನ ಅಧಿಕೃತ ವೆಬ್ ಸೈಟಿನಲ್ಲಿ 4103 ಹುದ್ದೆಗಳ ನೇಮಕಾತಿ ಕುರಿತಂತೆ ಪ್ರಕಟಣೆ ಹೊರಡಿಸಿದೆ. ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಹಾಕಲು ಬಯಸುವ ಅರ್ಹ, ಆಸಕ್ತ ಅಭ್ಯರ್ಥಿಗಳು ಡಿಸೆಂಬರ್ 08, 2019ರೊಳಗೆ ಅರ್ಜಿ ಸಲ್ಲಿಸಬಹುದು.
ಸಂಸ್ಥೆ ಹೆಸರು: North Central Railway
ಹುದ್ದೆ ಹೆಸರು: ಅಪ್ರೆಂಟಿಸ್
ಒಟ್ಟು ಹುದ್ದೆ: 4103
ಉದ್ಯೋಗ ಸ್ಥಳ: ಭಾರತದೆಲ್ಲೆಡೆ
ಅರ್ಜಿ ಸಲ್ಲಿಸಲು ಕೊನೆ ದಿನಾಂಕ: 08.12.2019.
ವಿದ್ಯಾರ್ಹತೆ: ಸರ್ಕಾರಿ ಸ್ವಾಮ್ಯದ ವಿದ್ಯಾಸಂಸ್ಥೆಯಿಂದ ಎಸ್ಎಸ್ಎಲ್ ಸಿ, ಐಟಿಐ
ವಯೋಮಿತಿ: 15 ರಿಂದ 24 ವರ್ಷ (ಆನ್ ಲೈನ್ ಅರ್ಜಿ ದಿನಾಂಕಕ್ಕೆ ಅನ್ವಯವಾಗುವಂತೆ)
ನೇಮಕಾತಿ ಪ್ರಕ್ರಿಯೆ: ಕಂಪ್ಯೂಟರ್ ಆಧಾರಿತ ಪರೀಕ್ಷೆ ಅಥವಾ ಲಿಖಿತ ಪರೀಕ್ಷೆ, ದಾಖಲೆಗಳ ಪರಿಶೀಲನೆ.
ಅರ್ಜಿ ಶುಲ್ಕ:
ಎಸ್ ಸಿ/ ಎಸ್ ಟಿ/ ಮಹಿಳೆ: ಯಾವುದೇ ಅರ್ಜಿ ಶುಲ್ಕವಿಲ್ಲ.
ಇತರೆ: 100 ರು.
ಪ್ರಮುಖ ದಿನಾಂಕ:
ಅರ್ಜಿ ಸಲ್ಲಿಕೆ ಆರಂಭವಾದ ದಿನಾಂಕ : 09.11.2019
ಅರ್ಜಿ ಸಲ್ಲಿಸಲು ಕೊನೆ ದಿನಾಂಕ: 08.12.2019
ಅರ್ಜಿ ಸಲ್ಲಿಸುವ ವಿಧಾನ ಹಾಗೂ ಹೆಚ್ಚಿನ ಮಾಹಿತಿಗಾಗಿ ಕ್ಲಿಕ್ ಮಾಡಿ