ಪದವೀಧರರಿಗೆ ಸೌತ್ ಇಂಡಿಯನ್ ಬ್ಯಾಂಕ್‌ನಲ್ಲಿ ಕೆಲಸ ಇದೆ
ಬೆಂಗಳೂರು, ಜೂನ್ 22 : ಸೌತ್ ಇಂಡಿಯನ್ ಬ್ಯಾಂಕ್ 100 ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಿದೆ. 27 ಜೂನ್ 2018 ಅರ್ಜಿಗಳನ್ನು ಸಲ್ಲಿಸಲು ಕೊನೆಯ ದಿನವಾಗಿದೆ.
ಸೌತ್ ಇಂಡಿಯನ್ ಬ್ಯಾಂಕ್ 100 Probationary Officers (PO) ಹುದ್ದೆಗಳನ್ನು ಭರ್ತಿ ಮಾಡಲು ಆನ್‌ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಿದೆ. ಆಯ್ಕೆಯಾದ ಅಭ್ಯರ್ಥಿಗಳು ದೇಶದ ಯಾವುದೇ ನಗರದಲ್ಲಿ ಕೆಲಸ ಮಾಡಲು ಸಿದ್ಧರಿರಬೇಕು.
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಎಸ್‌ಎಸ್‌ಎಲ್‌ಸಿ/ದ್ವಿತೀಯ ಪಿಯುಸಿ/ಪದವಿ ವಿದ್ಯಾರ್ಹತೆ ನಿಗದಿ ಮಾಡಲಾಗಿದೆ. ಶೇ 60ರಷ್ಟು ಅಂಕಗಳೊಂದಿಗೆ ಕೋರ್ಸ್ ಪೂರ್ಣಗೊಳಿಸಿರಬೇಕು.

ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ 25 ವರ್ಷದ ವಯೋಮಿತಿ ನಿಗದಿ ಮಾಡಲಾಗಿದೆ. 31 ಜುಲೈ 2017ಕ್ಕೆ ಅನ್ವಯವಾಗುವಂತೆ. ಎಸ್‌ಸಿ ಮತ್ತು ಎಸ್‌ಟಿ ಅಭ್ಯರ್ಥಿಗಳಿಗೆ 5 ವರ್ಷದ ವಯೋಮಿತಿ ಸಡಿಲಿಕೆ ಇರುತ್ತದೆ.
ವೇತನ ಶ್ರೇಣಿ : 23,700 ರಿಂದ 42020 ಪ್ರತಿ ತಿಂಗಳು.
ಅರ್ಜಿ ಸಲ್ಲಿಸುವ ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ 800 ರೂ., ಎಸ್‌ಸಿ/ಎಸ್‌ಟಿ ಅಭ್ಯರ್ಥಿಗಳಿಗೆ 200 ರೂ. ಅರ್ಜಿ ಶುಲ್ಕವನ್ನು ನಿಗದಿ ಮಾಡಲಾಗಿದೆ.
ಆನ್‌ಲೈನ್ ಪರೀಕ್ಷೆ, ಗ್ರೂಪ್ ಡಿಸ್ಕಷನ್, ವೈಯಕ್ತಿಕ ಸಂದರ್ಶನದ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.
ಹೆಚ್ಚಿನ ಮಾಹಿತಿಗಾಗಿ ಇಲ್ಲಿ ಕ್ಲಿಕ್ ಮಾಡಿ












Click it and Unblock the Notifications