385 ಹುದ್ದೆಗಳ ಭರ್ತಿಗೆ ಅರ್ಜಿ ಕರೆದ ಸೌತ್ ಇಂಡಿಯನ್ ಬ್ಯಾಂಕ್
ಬೆಂಗಳೂರು, ಜೂನ್ 18 : ಸೌತ್ ಇಂಡಿಯನ್ ಬ್ಯಾಂಕ್ 385 ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಗಳನ್ನು ಆಹ್ವಾನಿಸಿದೆ. ಆನ್‌ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಲು 30/6/2019 ಕೊನೆಯ ದಿನವಾಗಿದೆ.
ಸೌತ್ ಇಂಡಿಯನ್ ಬ್ಯಾಂಕ್ Probationary Clerks ಹುದ್ದೆಗಳನ್ನು ಭರ್ತಿ ಮಾಡುತ್ತಿದೆ. ಆಯ್ಕೆಯಾದ ಅಭ್ಯರ್ಥಿಗಳು ದೇಶದ ಯಾವುದೇ ನಗರದಲ್ಲಿ ಕೆಲಸ ಮಾಡಬೇಕಿದೆ.
10ನೇ ತರಗತಿ, ಎಸ್‌ಎಸ್‌ಎಲ್‌ಸಿ, ದ್ವಿತೀಯ ಪಿಯುಸಿ, ಎಚ್‌ಎಸ್‌ಸಿ ಮತ್ತು ಪದವಿಯನ್ನು ರೆಗ್ಯುಲರ್ ಕೋರ್ಸ್‌ಗಳಲ್ಲಿ ಶೇ 60ರಷ್ಟು ಅಂಕಗಳೊಂದಿಗೆ ಪೂರ್ಣಗೊಳಿಸಿದವರು ಅರ್ಜಿಗಳನ್ನು ಸಲ್ಲಿಸಬಹುದಾಗಿದೆ.

ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ 26 ವರ್ಷದ ವಯೋಮಿತಿ ನಿಗದಿ ಮಾಡಲಾಗಿದೆ. 30 ಜೂನ್ 2019ಕ್ಕೆ ಅನ್ವಯವಾಗುವಂತೆ.
ಆಯ್ಕೆಯಾದ ಅಭ್ಯರ್ಥಿಗಳಿಗೆ 11765 ರಿಂದ 31540 ರೂ. ಪ್ರತಿ ತಿಂಗಳ ವೇತನ ನಿಗದಿ ಮಾಡಲಾಗಿದೆ. ಆನ್‌ಲೈನ್ ಪರೀಕ್ಷೆ, ಸಂದರ್ಶನದ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.
ಅರ್ಜಿ ಸಲ್ಲಿಸುವ ಸಾಮಾನ್ಯ ವರ್ಗದ ಅಭ್ಯರ್ಥಿಗಳು 600 ರೂ., ಎಸ್‌ಸಿ/ಎಸ್‌ಟಿ ವರ್ಗದ ಅಭ್ಯರ್ಥಿಗಳು 150 ರೂ. ಅರ್ಜಿ ಶುಲ್ಕವನ್ನು ಪಾವತಿ ಮಾಡಬೇಕಿದೆ.
ಹೆಚ್ಚಿನ ಮಾಹಿತಿಗಾಗಿ ಇಲ್ಲಿ ಕ್ಲಿಕ್ ಮಾಡಿ












Click it and Unblock the Notifications