81 ವಿವಿಧ ಹುದ್ದೆಗೆ ಭರ್ತಿ ಮಾಡಲು ಅರ್ಜಿ ಕರೆದ ನೈಋತ್ಯ ರೈಲ್ವೆ

ಬೆಂಗಳೂರು, ಜನವರಿ 15 : ನೈಋತ್ಯ ರೈಲ್ವೆ 81 ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಗಳನ್ನು ಆಹ್ವಾನಿಸಿದೆ. ಆನ್‌ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಲು 1 ಫೆಬ್ರವರಿ 2019 ಕೊನೆಯ ದಿನವಾಗಿದೆ.

ಸೀನಿಯರ್ ಟೆಕ್ನಿಕಲ್ ಅಸೋಸಿಯೇಟ್, ಜ್ಯೂನಿಯರ್ ಟೆಕ್ನಿಕಲ್ ಅಸೋಸಿಯೇಟ್ ಸೇರಿದಂತೆ 81 ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದೆ. ಆಯ್ಕೆಯಾದ ಅಭ್ಯರ್ಥಿಗಳು ಕರ್ನಾಟಕ, ಆಂಧ್ರಪ್ರದೇಶ, ಗೋವಾ ಮತ್ತು ತಮಿಳುನಾಡಿನಲ್ಲಿ ಕೆಲಸ ಮಾಡಬೇಕಿದೆ.

ಸೀನಿಯರ್ ಟೆಕ್ನಿಕಲ್ ಅಸೋಸಿಯೇಟ್ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ನಾಲ್ಕು ವರ್ಷದ ಇಂಜಿನಿಯರಿಂಗ್ ಪದವಿಯನ್ನು ಎಲೆಕ್ಟ್ರಿಕಲ್/ಎಲೆಕ್ಟ್ರಾನಿಕ್ಸ್/ಇನ್‌ಫರ್‌ಮೇಷನ್ ಟೆಕ್ನಾಲಜಿ/ಕಮ್ಯುನಿಕೇಷನ್ ಇಂಜಿನಿಯರಿಂಗ್‌ ವ್ಯಾಸಂಗ ಮಾಡಿರಬೇಕು.

South Western Railway recruitment 2019 : Apply for 81 Various Post

ಎಂಎಸ್‌ಸಿ ಎಲೆಕ್ಟ್ರಾನಿಕ್ಸ್ ಅಥವ ಸಬ್ ಸ್ಟ್ರೀಮ್‌ ಆಫ್ ಬೇಸಿಕ್ ಸ್ಟ್ರೀಮ್ ಎಲೆಕ್ಟ್ರಿಕಲ್/ಎಲೆಕ್ಟ್ರಾನಿಕ್ಸ್/ಇನ್‌ಫರ್‌ಮೇಷನ್ ಟೆಕ್ನಾಲಜಿ/ಕಮ್ಯುನಿಕೇಷನ್ ಇಂಜಿನಿಯರಿಂಗ್‌ ಅನ್ನು ಮಾನ್ಯತೆ ಪಡೆದ ಸಂಸ್ಥೆ, ವಿಶ್ವವಿದ್ಯಾಲಯದಲ್ಲಿ ಪೂರ್ಣಗೊಳಿಸಿರಬೇಕು.

ಜ್ಯೂನಿಯರ್ ಟೆಕ್ನಿಕಲ್ ಅಸೋಸಿಯೇಟ್ ಹುದ್ದೆಗೆ ಅರ್ಜಿ ಸಲ್ಲಿಸುವವರು ಎಲೆಕ್ಟ್ರಿಕಲ್/ಎಲೆಕ್ಟ್ರಾನಿಕ್ಸ್/ಇನ್‌ಫರ್‌ಮೇಷನ್ ಟೆಕ್ನಾಲಜಿ/ಕಮ್ಯುನಿಕೇಷನ್ ಇಂಜಿನಿಯರಿಂಗ್‌ನಲ್ಲಿ ಮೂರು ವರ್ಷದ ಡಿಪ್ಲೊಮಾ ಪೂರ್ಣಗೊಳಿಸಿರಬೇಕು.

ಸಬ್ ಸ್ಟ್ರೀಮ್‌ ಆಫ್ ಬೇಸಿಕ್ ಸ್ಟ್ರೀಮ್ ಎಲೆಕ್ಟ್ರಿಕಲ್/ಎಲೆಕ್ಟ್ರಾನಿಕ್ಸ್/ಇನ್‌ಫರ್‌ಮೇಷನ್ ಟೆಕ್ನಾಲಜಿ/ಕಮ್ಯುನಿಕೇಷನ್ ಇಂಜಿನಿಯರಿಂಗ್‌ ಅನ್ನು ಮಾನ್ಯತೆ ಪಡೆದ ಸಂಸ್ಥೆ, ವಿಶ್ವವಿದ್ಯಾಲಯದಲ್ಲಿ ಪೂರ್ಣಗೊಳಿಸಿರಬೇಕು.

ವಯೋಮಿತಿ : ಸೀನಿಯರ್ ಟೆಕ್ನಿಕಲ್ ಅಸೋಸಿಯೇಟ್ ಹುದ್ದೆಗೆ 20 ರಿಂದ 33 ವರ್ಷದ ವಯೋಮಿತಿ ನಿಗದಿ ಮಾಡಲಾಗಿದೆ. ಜ್ಯೂನಿಯರ್ ಟೆಕ್ನಿಕಲ್ ಅಸೋಸಿಯೇಟ್‌ ಹುದ್ದೆಗೆ 18 ರಿಂದ 33 ವರ್ಷದ ವಯೋಮಿತಿ ನಿಗದಿ ಮಾಡಲಾಗಿದೆ.

ವೇತನ ಶ್ರೇಣಿ : ಸೀನಿಯರ್ ಟೆಕ್ನಿಕಲ್ ಅಸೋಸಿಯೇಟ್ ಹುದ್ದೆಗೆ 32000, ಜ್ಯೂನಿಯರ್ ಟೆಕ್ನಿಕಲ್ ಅಸೋಸಿಯೇಟ್‌ ಹುದ್ದೆಗೆ 25000 ವೇತನಿಗದಿ ಮಾಡಲಾಗಿದೆ.

ಅರ್ಜಿ ಶುಲ್ಕಗಳು : ಎಸ್‌ಸಿ/ಎಸ್‌ಟಿ/ಮಹಿಳಾ ಅಭ್ಯರ್ಥಿಗಳಿಗೆ ಯಾವುದೇ ಶುಲ್ಕವನ್ನು ನಿಗದಿ ಮಾಡಿಲ್ಲ. ಇತರ ಅಭ್ಯರ್ಥಿಗಳಿಗೆ 100 ರೂ. ಶುಲ್ಕ ನಿಗದಿ ಮಾಡಲಾಗಿದೆ. ಮೆರಿಟ್ ಆಧಾರದ ಮೇಲೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.

ಹೆಚ್ಚಿನ ಮಾಹಿತಿಗಾಗಿ ಇಲ್ಲಿ ಕ್ಲಿಕ್ ಮಾಡಿ

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+